ಅಖಿಲ್ ಅಕ್ಕಿನೇನಿ ಜೊತೆ ಜಾನ್ವಿ ಕಪೂರ್ ರೊಮ್ಯಾನ್ಸ್

Public TV
1 Min Read

ಹುಭಾಷಾ ನಟಿಯಾಗಿ ಶ್ರೀದೇವಿ ಕಪೂರ್ (Sridevi Kapoor)  ಜನಪ್ರಿಯತೆ ಗಳಿಸಿದ್ದರು. ಅಮ್ಮನ ಹಾದಿಯಲ್ಲೇ ಪುತ್ರಿ ಜಾನ್ವಿ ಕಪೂರ್ (Janhavi Kapoor) ಕೂಡ ಹೆಜ್ಜೆ ಇಡ್ತಿದ್ದಾರೆ. ದಕ್ಷಿಣದ ಸಿನಿಮಾಗಳತ್ತ ಜಾನ್ವಿ ಕಪೂರ್ ಹೆಚ್ಚು ಗಮನ ನೀಡ್ತಿದ್ದಾರೆ.

ಮಿಲಿ, ಗುಡ್ ಲಕ್ ಜರ‍್ರಿ ಸಿನಿಮಾಗಳ ಮೂಲಕ ಬಾಲಿವುಡ್‌ನಲ್ಲಿ (Bollywood) ಮೋಡಿ ಮಾಡಿರುವ ಹಾಟ್ ಬ್ಯೂಟಿ ಜಾನ್ವಿ ಕಪೂರ್ ಇದೀಗ ತೆಲುಗಿನತ್ತ ಮುಖ ಮಾಡಿದ್ದಾರೆ. ಶ್ರೀದೇವಿ ಅವರು ಹೇಗೆ ಒಂದೊಂದೇ ಯಶಸ್ಸಿನ ಮೆಟ್ಟಿಲನ್ನ ಏರಿದ್ರೋ ಅದೇ ರೀತಿ ಸೌತ್ ಸಿನಿಮಾ ಸ್ಕ್ರಿಪ್ಟ್‌ಗಳಿಗೆ ಜಾನ್ವಿ ಹೆಚ್ಚಿನ ಪ್ರಾಮುಖ್ಯತೆ ನೀಡ್ತಿದ್ದಾರೆ. ಇದನ್ನೂ ಓದಿ:ಚೊಚ್ಚಲ ಸಿನಿಮಾ ನಿರ್ಮಾಣದತ್ತ ಶಿವಣ್ಣನ ಪುತ್ರಿ ನಿವೇದಿತಾ

ಇದೀಗ ಜ್ಯೂನಿಯರ್ ಎನ್‌ಟಿಆರ್ (Jr.ntr) ಜೊತೆಗಿನ ಸಿನಿಮಾ ರಿಲೀಸ್ ಆಗುವ ಮುನ್ನವೇ ಮತ್ತೊಂದು ಬಂಪರ್ ಆಫರ್‌ನ್ನ ನಟಿ ತಮ್ಮದಾಗಿಸಿಕೊಂಡಿದ್ದಾರೆ. ಜಾನ್ವಿ ಇದೀಗ ಮತ್ತೊಬ್ಬ ತೆಲುಗಿನ ನಟನ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೊಸ ಬಗೆಯ ಕಥೆಯಲ್ಲಿ ಜಾನ್ವಿ ಕಮಾಲ್‌ ಮಾಡಲಿದ್ದಾರೆ.

ಹೊಸ ಸಿನಿಮಾಗೆ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿಗೆ (Akhil Akkineni)  ನಾಯಕಿಯಾಗಿ ಜಾನ್ವಿ ಕಪೂರ್ ಸೆಲೆಕ್ಟ್ ಆಗಿದ್ದಾರೆ. ಯುವ ನಿರ್ದೇಶಕ ಅನಿಲ್ ಕುಮಾರ್ (Anil Kumar) ನಿರ್ದೇಶನದಲ್ಲಿ ಅಖಿಲ್- ಜಾನ್ವಿ ಆಕ್ಟ್ ಮಾಡಲಿದ್ದಾರೆ. ಅನಿಲ್ ಈ ಹಿಂದೆ ಪ್ರಭಾಸ್ ನಟನೆಯ ‘ಸಾಹೋ’ (Saho) ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.

ಮೊದಲ ಬಾರಿಗೆ ಜಾನ್ವಿ- ಅಖಿಲ್‌ ತೆರೆಯ ಮೇಲೆ ಒಂದಾಗುತ್ತಿದ್ದು, ಈ ಫ್ರೆಶ್‌ ಫೇರ್‌ ಅದೆಷ್ಟರ ಮಟ್ಟಿಗೆ ಮೋಡಿ ಮಾಡಲಿದೆ ಎಂಬುದನ್ನ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

Share This Article