ನಾನೇನು ಕಿವುಡಿ ಅಲ್ಲ ಎಂದು ಪಾಪರಾಜಿಗಳ ವರ್ತನೆಗೆ ಸಿಡುಕಿದ ಜಯಾ ಬಚ್ಚನ್

By
1 Min Read

ಲಿಯಾ ಭಟ್- ರಣ್‌ವೀರ್ ಸಿಂಗ್ (Ranveer Singh) ಅವರ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ (Rocky Aur Rani Ki Prem Kahani) ಸಿನಿಮಾ ತೆರೆಗೆ ಅಪ್ಪಳಿಸಲು ರೆಡಿಯಾಗಿದೆ. ಹಾಗಾಗಿ ಜುಲೈ 25ರಂದು ಮುಂಬೈನಲ್ಲಿ ಸೆಲೆಬ್ರಿಟಿ ಪ್ರೀಮಿಯರ್ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಯಾ ಬಚ್ಚನ್ (Jaya Bachchan) ಅವರು ತಮ್ಮ ಕುಟುಂಬದೊಂದಿಗೆ ಸಿನಿಮಾ ವೀಕ್ಷಿಸಲು ಪ್ರೀಮಿಯರ್ ಶೋಗೆ ಆಗಮಿಸಿದ್ದರು. ಈ ವೇಳೆ ಪಾಪರಾಜಿಗಳ ಜೊತೆ ನಟಿ ಕಿರಿಕ್ ಮಾಡಿಕೊಂಡಿದ್ದಾರೆ.

ಕರಣ್ ಜೋಹರ್ (Karan Johar) ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಜುಲೈ 28ಕ್ಕೆ ರಿಲೀಸ್ ಆಗಲಿದೆ. ರಿಲೀಸ್‌ಗೂ ಮುನ್ನವೇ ಸಿನಿಮಾ ನೋಡಿರುವ ಸಿನಿತಾರೆಯರು ಮೆಚ್ಚುಗೆ ಸೂಚಿಸಿದ್ದಾರೆ. ಸಿನಿಮಾ ನೋಡಲು ಬಂದ ಹಿರಿಯ ನಟಿ ಜಯಾ ಬಚ್ಚನ್ ಅವರು ಪಾಪರಾಜಿಗಳ ವಿರುದ್ಧ ಸಿಟ್ಟಾಗಿದ್ದಾರೆ. ಇದನ್ನೂ ಓದಿ:ಸೌತ್‌ನ ಇಬ್ಬರು ಸ್ಟಾರ್ ನಟರ ಚಿತ್ರಕ್ಕೆ ರಶ್ಮಿಕಾ ಮಂದಣ್ಣ ಹೀರೋಯಿನ್

ಪಾಪರಾಜಿಗಳು ಹಂಚಿಕೊಂಡ ವಿಡಿಯೋದಲ್ಲಿ ಜಯಾ ಬಚ್ಚನ್ ಕೆಂಪು ಬಣ್ಣದ ಡ್ರೆಸ್ ಧರಿಸಿ ಆಗಮಿಸಿದ್ದರು. ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದ ಜಯಾ ಬಚ್ಚನ್ ವಿಡಿಯೋ ವೈರಲ್ ಆಗಿದೆ. ಕಾರ್ಯಕ್ರಮಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಪಾಪರಾಜಿಗಳು ಪೋಸ್ ನೀಡುವಂತೆ ಕರೆದರು. ಪಾಪರಾಜಿಗಳು ಕರೆದನ್ನು ಕೇಳಿ ‘ನಾನೇನು ಕಿವುಡಿ’ ಅಲ್ಲ ಎಂದು ಕಿವಿ ಮುಚ್ಚಿ ಹೇಳಿ ಸಿಡುಕುತ್ತಾ ಹೋದರು. ಜಯಾ ಬಚ್ಚನ್ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಜಯಾ ಬಚ್ಚನ್ ಮೊದಲು ಸಹ ಕ್ಯಾಮೆರಾ ಮುಂದೆ ಸಿಡುಕುತ್ತಾ ಹೋಗಿದ್ದ ವಿಡಿಯೋ ವೈರಲ್ ಆಗಿತ್ತು. ಕಂಗನಾ ರಣಾವತ್ ಅವರನ್ನು ಮಾತನಾಡಿಸಲು ಅನುಪಮ್ ಖೇರ್ ಹೇಳಿದರು. ಆಗ ಜಯಾ ಬಚ್ಚನ್ ಬೇಡ ಎನ್ನುತ್ತಾ ಅಲ್ಲಿಂದ ಹೊರಟು ಹೋಗಿದ್ದರು. ಆ ವಿಡಿಯೋ ಕೂಡ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್