ಲಿಪ್‌ಲಾಕ್ ಫೋಟೋ ಹಂಚಿಕೊಂಡ ಕೌಸ್ತುಭ ಮಣಿ

Public TV
1 Min Read

ಕಿರುತೆರೆ ನಟಿ ಕೌಸ್ತುಭ ಮಣಿ (Kaustubha Mani) ಮನೆಯಲ್ಲಿ ಮದುವೆ (Wedding) ಸಂಭ್ರಮ ಮನೆ ಮಾಡಿದೆ. ಭಾವಿ ಪತಿ ಜೊತೆ ಲಿಪ್‌ಲಾಕ್ ಮಾಡುತ್ತಾ ರೊಮ್ಯಾಂಟಿಕ್ ಮೂಡ್‌ಗೆ ನಟಿ ಜಾರಿದ್ದಾರೆ. ಪ್ರಿ ವೆಡ್ಡಿಂಗ್ ಫೋಟೋಶೂಟ್ ಅನ್ನು ರೊಮ್ಯಾಂಟಿಕ್ ಆಗಿ ಮಾಡಿಸಿದ್ದಾರೆ. ಇಬ್ಬರ ಸುಂದರ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಕೌಸ್ತುಭ ಮಣಿ ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಈಗಾಗಲೇ ಮೆಹೆಂದಿ ಶಾಸ್ತ್ರ ಕೂಡ ಜರುಗಿದೆ. ಸದ್ಯ ಪ್ರಿ ವೆಡ್ಡಿಂಗ್ ಶೂಟ್ ಅನ್ನು ಪುಟ್ಟ ವಿಮಾನದಲ್ಲಿ ಮಾಡಿಸಿದ್ದಾರೆ. ಲೈಟ್ ಬಣ್ಣದ ಧಿರಿಸಿನಲ್ಲಿ ಇಬ್ಬರೂ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ.

ವಿಮಾನದ ಬಳಿ ಭಾವಿ ಪತಿ ಜೊತೆ ಲಿಪ್‌ಲಾಕ್ ಮಾಡಿರುವ ಫೋಟೋವನ್ನು ನಟಿ ಶೇರ್ ಮಾಡಿದ್ದಾರೆ. ಇಬ್ಬರ ಫೋಟೋಗೆ ನೆಟ್ಟಿಗರು ಬಗೆ ಬಗೆಯ ಕಾಮೆಂಟ್‌ಗಳನ್ನು ಶೇರ್ ಮಾಡಿದ್ದಾರೆ.‌ ಇದನ್ನೂ ಓದಿ:ಎರಡೂ ಕೈ ಮುರಿದುಕೊಂಡಿದ್ದ ನಟಿ ಮನೆಗೆ ವಾಪಸ್ಸು

ಅಂದಹಾಗೆ, ಕೌಸ್ತುಭ ಮಣಿ ಅವರದ್ದು ಅರೇಂಜ್ ಮ್ಯಾರೇಜ್. ಸಿದ್ಧಾಂತ್ ಸತೀಶ್ ಅವರು ಸಾಪ್ಟ್‌ವೇರ್ ಡೆವಲಪರ್ ಆಗಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿದ್ಧಾಂತ್ ಅವರು ಕೆನಡಾದ ವಿಶ್ವವಿದ್ಯಾಲಯದಲ್ಲಿ ಎಂಬಿಎ ಮಾಡಿದ್ದರು. ಇತ್ತೀಚೆಗೆ ನಟಿಯ ಎಂಗೇಜ್‌ಮೆಂಟ್‌ ಅದ್ಧೂರಿಯಾಗಿ ನಡೆದಿತ್ತು.

ನನ್ನರಸಿ ರಾಧೆ (Nanrasi Radhe), ಗೌರಿ ಶಂಕರ ಸೀರಿಯಲ್‌ನಲ್ಲಿ ಕೌಸ್ತುಭ ನಟಿಸಿದ್ದಾರೆ. ಅರ್ಜುನ್ ಜನ್ಯ ನಿರ್ದೇಶನದ ’45’ ಸಿನಿಮಾದಲ್ಲಿ ಶಿವಣ್ಣ ಮತ್ತು ರಾಜ್ ಬಿ ಶೆಟ್ಟಿ ಜೊತೆ ನಟಿ ತೆರೆಹಂಚಿಕೊಂಡಿದ್ದಾರೆ.

Share This Article