ಪತಿಯ ಮೇಲೆಯೇ ಗುರುತರ ಆರೋಪ ಮಾಡಿದ್ರಾ ನಟಿ ಮಹಾಲಕ್ಷ್ಮಿ

Public TV
2 Min Read

ಮಿಸ್ ಮ್ಯಾಚ್ ಜೋಡಿ ಎಂದೇ ಟ್ರೋಲ್ ಆಗಿದ್ದ ನಟಿ ಮಹಾಲಕ್ಷ್ಮೀ ಅವರು ತಮ್ಮ ಪತಿ, ನಿರ್ಮಾಪಕ ರವೀಂದ್ರ ಬಗ್ಗೆ ಗುರುತರ ಆರೋಪ ಮಾಡಿದ್ದಾರೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಹಣದ ವಂಚನೆ ಪ್ರಕರಣದಲ್ಲಿ ಜೈಲು (Jail) ಪಾಲಾಗಿರುವ ರವೀಂದ್ರ ಅವರಿಗೆ ಜಾಮೀನು ಸಿಗುತ್ತಿಲ್ಲ. ಹಾಗಂತ ಮಹಾಲಕ್ಷ್ಮಿ ಬೇಸರದಲ್ಲೂ ಇಲ್ಲ. ದಿನಕ್ಕೊಂದು ಫೋಟೋಶೂಟ್ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕುತ್ತಾ, ಟ್ರೋಲ್ ಆಗುತ್ತಿದ್ದಾರೆ.

ಈ ನಡುವೆ ಮಹಾಲಕ್ಷ್ಮಿ ಅವರೇ ಆಡಿದ್ದಾರೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿವೆ. ಮದುವೆ ಆಗುವಾಗ ತನ್ನ ಗಂಡ ಸಾಲ ಮಾಡಿರುವ ಮತ್ತು ಅವರಿಗೆ ಮೋಸ ಮಾಡಿರುವ ಯಾವುದೇ ವಿಚಾರವನ್ನು ನನ್ನ ಜೊತೆ ಹಂಚಿಕೊಂಡಿಲ್ಲ. ಅವರು ನನಗೆ ಮೋಸ ಮಾಡಿ ಮದುವೆ ಆಗಿದ್ದಾರೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಈ ಮಾತುಗಳು ಸಖತ್ ಸುದ್ದಿ ಆಗಿದ್ದರೂ, ಮಹಾಲಕ್ಷ್ಮಿ ಮಾತ್ರ ಇದು ನಿಜನಾ ಅಥವಾ ಸುಳ್ಳಾ ಎಂದು ಸ್ಪಷ್ಟ ಪಡಿಸಿಲ್ಲ.

ಇತ್ತೀಚೆಗಷ್ಟೇ ರವೀಂದ್ರ (Ravindar Chandrasekaran), ಮಹಾಲಕ್ಷ್ಮಿ (Mahalakshmi) ಜೋಡಿಯು ಮೊದಲ ಮದುವೆ ವಾರ್ಷಿಕೋತ್ಸವ ಪೂರೈಸಿದ್ದರು. ಈ ಬೆನ್ನಲ್ಲೇ ವಂಚನೆ ಪ್ರಕರಣವೊಂದರಲ್ಲಿ ರವೀಂದ್ರ ಜೈಲು ಪಾಲಾದ್ರು. ಗಂಡ ಜೈಲು ಸೇರಿದ್ರೆ, ಹೆಂಡತಿ ಮಹಾಲಕ್ಷ್ಮಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನಡೆಗೆ ನೆಟ್ಟಿಗರು ಕಾಲೆಳೆದಿದ್ದಾರೆ.

ಲೈಟ್ ಬಣ್ಣ ಸೀರೆಯಲ್ಲಿ ಮತ್ತೊಂದು ಹಳದಿ ಬಣ್ಣದ ಸೀರೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿ ಮಿಂಚಿದ್ದಾರೆ. ಬಗೆ ಬಗೆಯ ಭಂಗಿಯಲ್ಲಿ ನಟಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಗಂಡ ಜೈಲಿನಲ್ಲಿದ್ರೆ ನೀವು ಫೋಟೋ ತೆಗೆಸಿ ಮೋಜು ಮಾಡ್ತೀರಾ ಅಂತಾ ಬಗೆ ಬಗೆಯ ಕಾಮೆಂಟ್ಸ್ ಸೋಶಿಯಲ್ ಮೀಡಿಯಾದಲ್ಲಿ ಹರಿದು ಬರುತ್ತಿದೆ.

ರವೀಂದ್ರ ಚಂದ್ರಶೇಖರ್ ಅವರನ್ನು ವಂಚನೆ ಆರೋಪದ ಮೇಲೆ ತಮಿಳುನಾಡು ಪೊಲೀಸರು ಸೆ.8ರಂದು ಬಂಧಿಸಿದ್ದರು. 16 ಕೋಟಿ ರೂ. ವಂಚಿಸಿದ ಆರೋಪದಲ್ಲಿ ನಿರ್ಮಾಪಕ ರವೀಂದ್ರ ಅವರನ್ನು ಅರೆಸ್ಟ್ ಮಾಡಿದ್ದರು.

 

ಮಾಧವ ಮೀಡಿಯಾ ಪ್ರೈ. ಲಿಮಿಟೆಡ್‌ನ ಬಾಲಾಜಿ ಕಾಪಾ (Balaji,) ಎಂಬ ಉದ್ಯಮಿಗೆ ನಿರ್ಮಾಪಕ ರವೀಂದ್ರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ತಮ್ಮ ಲಿಬ್ರಾ ಪ್ರೋಡಕ್ಷನ್ಸ್ ಅಡಿ ಘನತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹಣ ಹೂಡಿಕೆ ಮಾಡುವಂತೆ ಉದ್ಯಮಿ ಬಾಲಾಜಿ ಅವರನ್ನು ಕೇಳಿದ್ದರು. ಅದರಂತೆ ಉದ್ಯಮಿ ಬಾಲಾಜಿ ಅವರು ರವೀಂದ್ರಗೆ 2020ರ ಸೆಪ್ಟೆಂಬರ್‌ನಲ್ಲಿ 16 ಕೋಟಿ ರೂ. ಹಣ ವರ್ಗಾವಣೆ ಮಾಡಿದ್ದರು. ಉದ್ಯಮಿ ಬಳಿ ಹಣ ಪಡೆದು ಯೋಜನೆಗೆ ಚಾಲನೆ ನೀಡಿಲ್ಲ. ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ತಮಿಳುನಾಡು ಪೊಲೀಸರಿಗೆ ಉದ್ಯಮಿ ದೂರು ನೀಡಿದ್ದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್