ಹಾರ್ದಿಕ್ ಪಾಂಡ್ಯ ಮಾಜಿ ಪತ್ನಿ ಮತ್ತೆ ಪ್ರೀತಿಯಲ್ಲಿ ಬಿದ್ರಾ?

Public TV
1 Min Read

ಬಾಲಿವುಡ್ ಬೆಡಗಿ ನತಾಶಾ (Natasa) ಅವರು ಕ್ರಿಕೆಟಿಗ ಹಾರ್ದಿಕ್ ಪಾಂಡ್ಯಾ (Hardik Pandya) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಮತ್ತೆ ಪ್ರೀತಿಯಲ್ಲಿ ಬಿದ್ರಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ನಟಿ ಶೇರ್ ಮಾಡಿರುವ ಪೋಸ್ಟ್‌ನಿಂದ ಚರ್ಚೆ ಶುರುವಾಗಿದೆ.

ಫೋಟೋವೊಂದನ್ನು ನಟಿ ಶೇರ್ ಮಾಡಿ, ದೇವರ ಮಾರ್ಗದರ್ಶನ ಸಿಕ್ಕಿದೆ. ಪ್ರೀತಿ ಸುತ್ತುವರೆದಿದೆ. ಕೃತಜ್ಞತೆಯಿಂದ ಬದುಕುತ್ತಿದ್ದೇನೆ. ನನಗೆ ಖುಷಿಯಾಗಿದೆ ಎಂದು ನಟಿ ನತಾಶಾ ಬರೆದುಕೊಂಡಿದ್ದಾರೆ. ಈ ಪೋಸ್ಟ್ ನೋಡಿದ ನೆಟ್ಟಿಗರು, ನತಾಶಾ ಮತ್ತೆ ಪ್ರೀತಿಯಲ್ಲಿ ಬಿದ್ರಾ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ. ಮತ್ತೆ ನಟಿಗೆ ಬೇರೆ ಅವರೊಂದಿಗೆ ಲವ್‌ ಆಗಿದ್ಯಾ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ:ರಾಜ್‌ಕುಮಾರ್ ರಾವ್‌ಗೆ ಮಾನುಷಿ ಚಿಲ್ಲರ್ ನಾಯಕಿ

ಅಂದಹಾಗೆ, ಜುಲೈ 18ರಂದು ನಟಿ ಡಿವೋರ್ಸ್ (Divorce) ಬಗ್ಗೆ ಅನೌನ್ಸ್ ಮಾಡಿದ್ದರು. 4 ವರ್ಷಗಳ ಕಾಲ ಜೊತೆಯಾಗಿ ಇದ್ದ ಹಾರ್ದಿಕ್ ಮತ್ತು ನಾನು ಪರಸ್ಪರ ಬೇರೆಯಾಗಲು ನಿರ್ಧರಿಸಿದ್ದೇವೆ. ನಾವು ಜೊತೆಯಾಗಿ ಇರಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಕೊನೆಗೆ ಭಿನ್ನಾಭಿಪ್ರಾಯ ಮಿತಿ ಮೀರಿದಾಗ ನಮ್ಮ ಒಳ್ಳೆಯದಕ್ಕೆ ಬೇರೆ ಆಗಬೇಕು ಎಂದು ನಿರ್ಧಾರ ಮಾಡಿದ್ದೇವೆ. ನಾವು ಒಟ್ಟಿಗೆ ಆನಂದಿಸಿದ ಸಂತೋಷ, ಪರಸ್ಪರ ಗೌರವ ಮತ್ತು ಒಡನಾಟವನ್ನು ಗಮನದಲ್ಲಿಟ್ಟುಕೊಂಡು ಮತ್ತು ನಾವು ಕುಟುಂಬವಾಗಿ ಬೆಳೆದಿದ್ದೇವೆ. ಇದು ನಮಗೆ ಕಠಿಣ ನಿರ್ಧಾರ ಎಂದು ನತಾಶಾ ಹೇಳಿಕೆಯಲ್ಲಿ ತಿಳಿಸಿದ್ದರು.

ನಮ್ಮಿಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿದ್ದು ಅಗಸ್ತ್ಯ. ಅವನು ನಮ್ಮಿಬ್ಬರ ಜೀವನದ ಕೇಂದ್ರಬಿಂದುವಾಗಿ ಮುಂದುವರಿಯುತ್ತಾನೆ. ಅವನಿಗೆ ಎಲ್ಲಾ ರೀತಿಯಲ್ಲೂ ಬೆಂಬಲವಾಗಿ ನಾವು ನಿಲ್ಲುತ್ತೇವೆ. ಈ ಕಷ್ಟಕರ ಮತ್ತು ಸೂಕ್ಷ್ಮ ಸಮಯದಲ್ಲಿ ನಮ್ಮ ಗೌಪ್ಯತೆ ಕಾಪಾಡಲು ನಾವು ಕಳಕಳಿಯಿಂದ ವಿನಂತಿಸುತ್ತೇವೆ ಎಂದು ಹೇಳಿಕೆಯಲ್ಲಿ ಮನವಿ ಮಾಡಿದ್ದರು.

ಇನ್ನೂ ನತಾಶಾ ಮತ್ತು ಹಾರ್ದಿಕ್ ಪಾಂಡ್ಯ 2020ರಲ್ಲಿ ಮೇ 31ರಂದು ವಿವಾಹವಾದರು. ಜುಲೈ 2020ರಲ್ಲಿ ತಮ್ಮ ಮೊದಲ ಮಗು ಅಗಸ್ತ್ಯನನ್ನು ಸ್ವಾಗತಿಸಿದರು. 2023ರ ಫೆಬ್ರವರಿಯಲ್ಲಿ ಹಿಂದೂ ಮತ್ತು ಕ್ರಿಶ್ಚಿಯನ್ ಪದ್ಧತಿ ಪ್ರಕಾರ ಮತ್ತೊಮ್ಮೆ ಮದುವೆಯಾದರು.

Share This Article