Annapoorni: ರಾಮನ ಕುರಿತು ವಿವಾದಾತ್ಮಕ ಡೈಲಾಗ್- ಕೊನೆಗೂ ಮೌನ ಮುರಿದ ನಯನತಾರಾ

Public TV
2 Min Read

ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಯನತಾರಾ (Nayanatara) ನಟನೆಯ ‘ಅನ್ನಪೂರ್ಣಿ’ (Annapoorni Film) ಇತ್ತೀಚೆಗೆ ಒಟಿಟಿಯಲ್ಲಿ ತೆರೆಕಂಡಿತ್ತು. ಬಳಿಕ ಸಾಕಷ್ಟು ವಿವಾದಗಳನ್ನು ಹುಟ್ಟುಹಾಕಿತ್ತು. ಚಿತ್ರದಲ್ಲಿನ ರಾಮನೂ ಮಾಂಸಾಹಾರ ಸೇವನೆ ಮಾಡಿದ್ದ ಎಂಬ ಡೈಲಾಗ್ ಸೇರಿದಂತೆ ಹಲವು ದೃಶ್ಯಗಳು ವಿವಾದ ಸೃಷ್ಟಿ ಮಾಡಿತ್ತು. ಇದೀಗ ಈ ಕಾಂಟ್ರವರ್ಸಿ ಬಗ್ಗೆ ನಯನತಾರಾ ಮೌನ ಮುರಿದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಪೃಥ್ವಿರಾಜ್ ನಟನೆಯ ‘ದಿ ಗೋಟ್ ಲೈಫ್’ ಚಿತ್ರದ ಮತ್ತೊಂದು ಪೋಸ್ಟರ್ ಔಟ್

ನಾನು ಭಾರವಾದ ಹೃದಯದಿಂದ ಮತ್ತು ಸತ್ಯದ ಆಧಾರದ ಮೇಲೆ ಈ ಬರಹ ಬರೆಯುತ್ತಿದ್ದೇನೆ. ಇತ್ತೀಚಿನ ದಿನಗಳಲ್ಲಿ ನಮ್ಮ ‘ಅನ್ನಪೂರ್ಣಿ’ ಚಿತ್ರ ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ನನ್ನ ಅಭಿಪ್ರಾಯ ಹಂಚಿಕೊಳ್ಳಲು ಬಯಸುತ್ತೇನೆ ಎಂದು ನಟಿ ರಿಯಾಕ್ಟ್ ಮಾಡಿದ್ದಾರೆ. ಜೈ ಶ್ರೀರಾಮ್ (Jai Shreeram) ಎಂದು ಮೊದಲು ಬರೆದುಕೊಂಡಿದ್ದಾರೆ. ಸಿನಿಮಾ ಮಾಡುವುದು ಎಂದರೆ ಕೇವಲ ಆರ್ಥಿಕ ಲಾಭಕ್ಕೆ ಮಾತ್ರವಲ್ಲ ಸಮಾಜಕ್ಕೆ ಒಂದು ಸಂದೇಶ ತಿಳಿಸುವ ಉದ್ದೇಶವೂ ಇರುತ್ತದೆ. ‘ಅನ್ನಪೂರ್ಣಿ’ ಚಿತ್ರವನ್ನು ನಿಷ್ಕಲ್ಮಶ ಮನಸ್ಸಿನಿಂದ ಮಾಡಲಾಗಿದೆ. ನಮ್ಮ ನಿಜ ಜೀವನದಲ್ಲಿ ಏನು ನಡೆಯುತ್ತಿದೆಯೋ ಅದನ್ನೇ ತೋರಿಸುವುದೇ ಈ ಸಿನಿಮಾ ಉದ್ದೇಶ ಎಂದು ನಟಿ ಬರೆದುಕೊಂಡಿದ್ದಾರೆ.

 

View this post on Instagram

 

A post shared by N A Y A N T H A R A (@nayanthara)

ಪಾಸಿಟಿವ್ ಸಂದೇಶ ತಲುಪಿಸುವ ನಮ್ಮ ಪ್ರಾಮಾಣಿಕ ಪ್ರಯತ್ನದಲ್ಲಿ ಗೊತ್ತಿಲ್ಲದೆ ನಾವು ನಿಮ್ಮ ಭಾವನೆಗಳನ್ನು ನೋಯಿಸಿದ್ದೇವೆ. ಸೆನ್ಸಾರ್ ಆದ ನಮ್ಮ ಸಿನಿಮಾ ಥಿಯೇಟರ್‌ನಲ್ಲಿ ರಿಲೀಸ್ ಆಗಿ ಒಟಿಟಿಯಲ್ಲಿ ಬಿಡುಗಡೆ ಆಯಿತು. ಅದನ್ನು ಒಟಿಟಿಯಿಂದ ತೆಗೆದು ಹಾಕುತ್ತಾರೆ ಎಂದು ನಾವು ಅಂದುಕೊಂಡಿರಲಿಲ್ಲ. ಯಾರ ಭಾವನೆ ಅಥವಾ ನಂಬಿಕೆಗೆ ಧಕ್ಕೆ ತರುವುದು ನನ್ನ ತಂಡದ ಉದ್ದೇಶ ಆಗಿರಲಿಲ್ಲ.

ನಾನು ದೇವರಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿರುವ ಮತ್ತು ದೇಶಾದ್ಯಂತ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ವ್ಯಕ್ತಿ. ನಿಮ್ಮ ಭಾವನೆಗಳಿಗೆ ನೋವುಂಟು ಮಾಡಿದ ಎಲ್ಲ ಜನರಲ್ಲಿ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ನಯನತಾರಾ ಕೋರಿದ್ದಾರೆ. ಕಳೆದ ಎರಡು ದಶಕಗಳಿಂದ ಚಲನಚಿತ್ರೋದ್ಯಮದಲ್ಲಿ ಇರುವ ನಾನು ಒಂದು ಉದ್ದೇಶ ಇಟ್ಟುಕೊಂಡಿದ್ದೇನೆ. ಪರಸ್ಪರ ಕಲಿಯುವುದರ ಜೊತೆಗೆ ಸಕಾರಾತ್ಮಕ ಚಿಂತನೆ ಹೆಚ್ಚಿಸುವುದು ಎಂದು ನಯನತಾರಾ ಪತ್ರ ಪೂರ್ಣಗೊಳಿಸಿದ್ದಾರೆ.

ಜವಾನ್‌ ಸಕ್ಸಸ್‌ ಅಲೆಯಲ್ಲಿ ತೇಲುತ್ತಿದ್ದ ನಯನತಾರಾಗೆ ಅನ್ನಪೂರ್ಣಿ ಕಾಂಟ್ರವರ್ಸಿ ದೊಡ್ಡ ಮಟ್ಟದಲ್ಲಿ ಸೆನ್ಸೇಷನ್‌ ಕ್ರಿಯೆಟ್‌ ಮಾಡಿದೆ. ಈಗ ಈ ಕಾಂಟ್ರವರ್ಸಿಗೆ ರಿಯಾಕ್ಟ್‌ ಮಾಡುವ ಮೂಲಕ ನಯನತಾರಾ ಬಹಿರಂಗ ಪತ್ರ ಬರೆದು ಕ್ಷಮೆ ಕೇಳಿದ್ದಾರೆ.

Share This Article