ಡಿವೋರ್ಸ್ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ನಿವೇದಿತಾ ಆ್ಯಕ್ಟೀವ್

Public TV
1 Min Read

‘ಬಿಗ್ ಬಾಸ್’ (Bigg Boss) ಬೆಡಗಿ ನಿವೇದಿತಾ ಗೌಡ ಅವರು (Niveditha Gowda) ಚಂದನ್‌ ಶೆಟ್ಟಿ (Chandan Shetty) ಜೊತೆಗಿನ ಡಿವೋರ್ಸ್ (Divorce) ಬಳಿಕ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಮತ್ತೊಂದು ರೀಲ್ಸ್ ಶೇರ್ ಮಾಡಿ ನಟಿ ಹೆಜ್ಜೆ ಹಾಕಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

ಕೆಂಪು ಬಣ್ಣದ ಡ್ರೆಸ್ ಧರಿಸಿ ಲವಲವಿಕೆಯಿಂದ ನಟಿ ಹಾಡೊಂದಕ್ಕೆ ರೀಲ್ಸ್ ಮಾಡಿದ್ದಾರೆ. ಇದನ್ನು ನಟಿ ಶೇರ್ ಮಾಡ್ತಿದ್ದಂತೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬಂದಿದೆ. ನಿವೇದಿತಾ ರೀಲ್ಸ್‌ಗೆ ನೆಟ್ಟಿಗನೊಬ್ಬ ಶೆಡ್ ನೆನಪಾಗ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:ಪೈಪೋಟಿಗಿಳಿದು ಜಾಕೆಟ್ ಬಿಚ್ಚಿದ ‘ಪುಷ್ಪ 2’ ನಟಿ


ಜೂನ್ 7ರಂದು ಕಾನೂನು ಬದ್ಧವಾಗಿ ಪರಸ್ಪರ ಒಪ್ಪಂದದಿಂದ ಸಂಬಂಧ ಕೊನೆಗೊಳಿಸುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಚಂದನ್ ಮತ್ತು ನಿವೇದಿತಾ ಅನೌನ್ಸ್ ಮಾಡಿದ್ದರು. ಇಂದು, ನಾನು ಮತ್ತು ನಿವೇದಿತಾ ಮದುವೆಯಾಗಿ ನಾಲ್ಕು ವರ್ಷಗಳ ನಂತರ ಕಾನೂನುಬದ್ಧವಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಸ್ವಂತ ಸಂತೋಷ ಮತ್ತು ಬೆಳವಣಿಗೆಯ ಮೇಲೆ ಕೇಂದ್ರೀಕರಿಸುವುದು ಮುಖ್ಯ ಎಂದು ಅರ್ಥಮಾಡಿಕೊಳ್ಳುವ ಮೂಲಕ ನಾವು ನಮ್ಮ ಮದುವೆಯನ್ನು ಉತ್ತಮ ರೀತಿಯಲ್ಲಿ ಕೊನೆಗೊಳಿಸುತ್ತಿದ್ದೇವೆ. ಈ ಕಷ್ಟದ ಸಮಯದಲ್ಲಿ ನಾವು ಮಾಧ್ಯಮಗಳು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ಬೆಂಬಲವನ್ನು ಕೇಳುತ್ತೇವೆ. ನಾವು ನಮ್ಮ ದಾರಿಯಲ್ಲಿ ಹೋಗುತ್ತಿದ್ದರೂ ಸಹ, ನಾವು ಇನ್ನೂ ಪರಸ್ಪರ ಬಲವಾದ ಸ್ನೇಹ ಮತ್ತು ಗೌರವವನ್ನು ಹೊಂದಿದ್ದೇವೆ. ಈ ಸವಾಲಿನ ಅವಧಿಯಲ್ಲಿ ನಿಮ್ಮ ಬೆಂಬಲ ನಮ್ಮಿಬ್ಬರ ಮೇಲಿರಲಿ ಎಂದು ಪೋಸ್ಟ್ ಮಾಡಿದ್ದರು.

ಅಂದಹಾಗೆ, ಇಬ್ಬರೂ ಜೊತೆಯಾಗಿ ‘ಕ್ಯಾಂಡಿ ಕ್ರಶ್’ (Candy Crush) ಚಿತ್ರದ ಮೂಲಕ ಬರುತ್ತಿದ್ದಾರೆ. ಇನ್ನೂ ಕೆಲ ದಿನಗಳ ಚಿತ್ರೀಕರಣ ಬಾಕಿದ್ದು, ಚಿತ್ರತಂಡಕ್ಕೆ ಚಂದನ್ ಮತ್ತು ನಿವೇದಿತಾ ಸಾಥ್ ನೀಡುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ರಿಲೀಸ್ ಆಗಲಿದೆ.

Share This Article