10 ವರ್ಷಗಳ ನಂತರ ಮತ್ತೆ ಒಂದಾದ ‘ಒಕಾ ಲೈಲಾ ಕೋಸಂ’ ಜೋಡಿ

Public TV
1 Min Read

ರಾವಳಿ ಬ್ಯೂಟಿ ಪೂಜಾ ಹೆಗ್ಡೆ (Pooja Hegde) ಮತ್ತೆ ಟಾಲಿವುಡ್‌ಗೆ (Tollywood) ಮರಳಿದ್ದಾರೆ. ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದಿಂದ ಹೊರಬಂದ್ಮೇಲೆ, ಬಾಲಿವುಡ್‌ನತ್ತ ಮುಖ ಮಾಡಿದ್ದ ನಟಿ ಮತ್ತೆ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. 10 ವರ್ಷಗಳ ನಂತರ ಮತ್ತೆ ‘ಒಕಾ ಲೈಲಾ ಕೋಸಂ’ ಜೋಡಿ ಒಂದಾಗುತ್ತಿದೆ.

ಸಿನಿಮಾ ಕೆರಿಯರ್ ಶುರು ಮಾಡಿದ ನಟನ ಜೊತೆಯೇ ಪೂಜಾ ಹೆಗ್ಡೆ ರೊಮ್ಯಾನ್ಸ್ ಮಾಡೋಕೆ ಶುರು ಮಾಡಿದ್ದಾರೆ. ‘ಒಕಾ ಲೈಲಾ ಕೋಸಂ’ (Oka Laila Kosam) ಚಿತ್ರದಲ್ಲಿ ನಾಗಚೈತನ್ಯಗೆ (Nagachaitanya) ನಾಯಕಿಯಾಗಿ ಪೂಜಾ ಹೆಗ್ಡೆ ಟಾಲಿವುಡ್‌ಗೆ ಎಂಟ್ರಿ ಕೊಟ್ಟರು. ಈಗ 10 ವರ್ಷಗಳ ನಂತರ ನಾಗಚೈತನ್ಯ ನಟನೆಯ ಹೊಸ ಚಿತ್ರಕ್ಕೆ ಕುಡ್ಲದ ಬೆಡಗಿ ನಾಯಕಿಯಾಗಿದ್ದಾರೆ.

‘ವಿರೂಪಾಕ್ಷ’ ಡೈರೆಕ್ಟರ್ ಕಾರ್ತಿಕ್ ವರ್ಮಾ ದಂಡು ನಿರ್ದೇಶನದ ಹೊಸ ಸಿನಿಮಾದಲ್ಲಿ ನಾಗಚೈತನ್ಯ ನಾಯಕನಾಗಿ ನಟಿಸಿದ್ದಾರೆ. ಆ್ಯಕ್ಷನ್ ಜೊತೆ ಲವ್ ಸ್ಟೋರಿ ಸಿನಿಮಾ ತೋರಿಸೋಕೆ ರೆಡಿಯಾಗಿದ್ದಾರೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಶುರುವಾಗಲಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಮಾಡಲು ಯೋಚಿಸಿದ್ದಾರೆ. ಹೊಸ ಕಥೆಯಲ್ಲಿ ನಾಗಚೈತನ್ಯ- ಪೂಜಾ ಹೆಗ್ಡೆ ಜೋಡಿಯನ್ನು ನೋಡಲು ಫ್ಯಾನ್ಸ್‌ ಕ್ಯೂರಿಯಸ್‌ ಆಗಿದ್ದಾರೆ. ಇದನ್ನೂ ಓದಿ:ಡಿಸಾರ್ಜ್ ಆದ ಶಿವಣ್ಣ: ನಾಗವಾರದ ನಿವಾಸಕ್ಕೆ ಆಗಮನ

ಅಂದಹಾಗೆ, ಪೂಜಾ ಹೆಗ್ಡೆ ಕೈಯಲ್ಲಿ ಸುನೀಲ್ ಶೆಟ್ಟಿ ಪುತ್ರನ ಜೊತೆಗಿನ ಹೊಸ ಸಿನಿಮಾ, ಶಾಹಿದ್ ಕಪೂರ್ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಬಾಲಿವುಡ್ ಪ್ರಾಜೆಕ್ಟ್‌ಗಳಿವೆ.

Share This Article