ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್‌ ಪ್ರತಿಕ್ರಿಯೆ

Public TV
1 Min Read

ಬೆಂಗಳೂರು: ಹುಬ್ಬಳ್ಳಿ ನೇಹಾ ಹಿರೇಮಠ್‌ (Neha Hiremath) ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್‌ (Rachita Ram) ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಕರಣ ಕುರಿತು ಇನ್‌ಸ್ಟಾಗ್ರಾಂ ನಲ್ಲಿ ಪೋಸ್ಟ್‌ ಹಾಕಿರುವ ರಚಿತಾ ರಾಮ್‌, ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್‌ ತಾಯಿ ಕಣ್ಣೀರು

 

View this post on Instagram

 

A post shared by Rachitaa Ram (@rachita_instaofficial)

ಜಾತಿ, ಧರ್ಮ ಯಾವುದೇ ಆಗಿರಲಿ. ಮೊದಲು ನಾವು ಮಾನವರು. ನಾನು ಈ ಪೋಸ್ಟ್‌ ಹಾಕಲು ಕಾರಣ ಆಕೆಗೆ (ನೇಹಾ) ಆಗಿರುವ ಅನ್ಯಾಯ. ತಪ್ಪು ಯಾರೇ ಮಾಡಿದರು ತಪ್ಪೆ ಎಂದು ನಟಿ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಕ್ಕೆ ನನ್ನ ಒಂದು ಮನವಿ! ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೆ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನೇಹಾ ಹತ್ಯೆ ಕೇಸ್ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ

ನಟಿ ರಚಿತಾ ರಾಮ್‌, ಕೊಲೆಯಾದ ನೇಹಾ ಹಿರೇಮಠ್‌ ಫೋಟೊ ಜೊತೆಗೆ ಈ ಪೋಸ್ಟ್‌ ಅನ್ನು ಹಂಚಿಕೊಂಡಿದ್ದಾರೆ. ಅಲ್ಲದೇ #wewantjustice ಎಂದು ಟ್ಯಾಗ್‌ ಕೂಡ ಹಾಕಿದ್ದಾರೆ.

Share This Article