ರಾಗಿಣಿ, ಶುಭಾಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್: ‘ಚಾರ್ಜ್‌ಶೀಟ್’ನಲ್ಲಿ ಬಯಲು

Public TV
1 Min Read

ರೇಣುಕಾಸ್ವಾಮಿ  (Renukaswamy) ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಕೋರ್ಟಿಗೆ ಸಲ್ಲಿಸಲಾದ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ವಿಷಯಗಳು ಬಯಲಾಗ್ತಿವೆ. ಸ್ವಾಮಿ ಕೊಲೆಯ ಇಂಚಿಂಚು ಮಾಹಿತಿಗಳು ಹೊರ ಬರುತ್ತಿವೆ. ಅದರಲ್ಲೂ ಈ ಕೊಲೆ ನಡೆದಿದ್ದು ಪವಿತ್ರಾಳಿಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋ ಕಾರಣಕ್ಕೆ. ರೇಣುಕಾಸ್ವಾಮಿ ಕೇವಲ ಪವಿತ್ರಾಗೆ ಮಾತ್ರ ಮೆಸೇಜ್ ಕಳುಹಿಸಿರಲಿಲ್ಲ. ಕನ್ನಡದ ಸ್ಟಾರ್ ನಟಿಯರಿಗೂ ಅವನು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋದು ಬಯಲಾಗಿದೆ.

ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ (Ragini Dwivedi), ಶುಭಾ ಪೂಂಜಾ (Shubha Poonja) ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಪ್ರದೋಶ್ ಮತ್ತು ವಿನಯ್‍ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ, ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿದ್ದ ಅನ್ನೋ ಮಾತು ಉಲ್ಲೇಖವಾಗಿದೆ.

 

ರೇಣುಕಾಸ್ವಾಮಿ ಮೊಬೈಲ್ ನಲ್ಲಿ ನಾವು ರಾಗಿಣಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ  ರೇಣುಕಾಸ್ವಾಮಿ ಅಶ್ಲೀಲ ಮಸೇಜ್ ಕಳುಹಿಸಿದ್ದನ್ನು ನಾವು ನೋಡಿದ್ದೇವೆ ಎಂದು ಪೊಲೀಸರಿಗೆ ಆರೋಪಿಗಳು ಹೇಳಿದ್ದಾರೆ. ಅವರ ಮಾತುಗಳನ್ನು ಚಾರ್ಜ್‌ಶೀಟ್‌ನಲ್ಲೂ ದಾಖಲಿಸಲಾಗಿದೆ.

Share This Article