ದರ್ಶನ್ ಫ್ಯಾನ್ಸ್ (Darshan Fans) ವಿರುದ್ಧ ನಟಿ ರಮ್ಯಾ (Actress Ramya) ಕೆಂಡಕಾರುತ್ತಿರುವ ಬೆನ್ನಲ್ಲೇ ಇದೀಗ ಕ್ರೇಜಿ ಕ್ವೀನ್ ರಕ್ಷಿತಾ (Rakshitha Prem) ಡಿ-ಬಾಸ್ ಫ್ಯಾನ್ಸ್‌ಗೆ ಕಿವಿಮಾತು ಹೇಳಿದ್ದಾರೆ. ಈ ಮೂಲಕ ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ಟಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
ಕ್ರೇಜಿ ಕ್ವೀನ್ ರಕ್ಷಿತಾ ಅವರು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿದ್ದಾರೆ. ಸ್ಟೋರಿಯಲ್ಲಿ, ನೀವು ಜನರ ಮಾನಸಿಕ ಸ್ಥಿತಿಗತಿಯನ್ನು ನೋಡೋಕೆ ಸಾಧ್ಯವಿಲ್ಲ, ದಯವಿಟ್ಟು ದಯೆಯಿಂದಿರಿ (ಸಹನೆಯಿಂದಿರಿ) ಎಂದಿದ್ದಾರೆ. ಜೊತೆಗೆ ಇನ್ನೊಂದರಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ `ಮೂಲಭೂತವಾಗಿ ಮಾನವನಿಗಿರಬೇಕಾದ ವಿನಯತೆ’ ನಿಜಕ್ಕೂ ವೈರಲ್ ಆಗಬೇಕೆಂದುಕೊಳ್ಳುತ್ತೇನೆ ಎಂದಿದ್ದಾರೆ.ಇದನ್ನೂ ಓದಿ: ಯುರೋಪಿಯನ್ ಒಕ್ಕೂಟದೊಂದಿಗೆ ಟ್ರಂಪ್ ಬಿಗ್ ಡೀಲ್ – ಆಮದುಗಳ ಮೇಲೆ 15% ಸುಂಕ
ಈ ಮೂಲಕ ನಟಿ ರಕ್ಷಿತಾ ರಮ್ಯಾಗೆ ಟಾಂಗ್ ಕೊಟ್ಟಿದ್ದು, ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ಸದ್ಯ ರಕ್ಷಿತಾ ಪೋಸ್ಟ್ ಡಿ-ಬಾಸ್ ಫ್ಯಾನ್ಸ್ ಪೇಜ್‌ನಲ್ಲಿ ಭಾರೀ ವೈರಲ್ ಆಗುತ್ತಿದ್ದು, ಅಟೆನ್ಷನ್ ಗಿಟ್ಟಿಸಿಕೊಳ್ಳುವವರಿಗೆ ರಕ್ಷಿತಾ ಅವರ ಸಂದೇಶ ಇಲ್ಲ ಎನ್ನುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Renukaswamy Case) ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ. ಜೊತೆಗೆ ಡಿ-ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ.

ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ರಮ್ಯಾಗೆ ಅಶ್ಲೀಲ ಕಮೆಂಟ್ ಮಾಡಿದ್ದವರ ಅಕೌಂಟ್‌ಗಳನ್ನು ಬಹಿರಂಗೊಳಿಸಿದ್ದಾರೆ. ರೇಣುಕಾಸ್ವಾಮಿ ಕಳುಹಿಸಿದ ಸಂದೇಶಕ್ಕೂ, ಡಿಬಾಸ್ ಫ್ಯಾನ್ಸ್ ಕಳುಹಿಸುತ್ತಿರುವ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀ-ದ್ವೇಷಿ ಮನೋಭಾವದವರು. ಇಂತವರಿಂದಲೇ ಹೆಣ್ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ ಅಂತ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ರಮ್ಯಾ ಆಕ್ರೋಶ ಹೊರಹಾಕಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಹೆಸರು ಕೇಳಿ ಬಂದಾಗ, ಅವತ್ತು ಕೂಡ ರಮ್ಯಾ ಮಾತಾಡಿದ್ದರು. ದರ್ಶನ್‌ರಿಂದ ತಪ್ಪಾಗಿದ್ದರೆ ಕಠಿಣ ಶಿಕ್ಷೆಯೇ ಆಗಬೇಕು ಅಂತ ಪ್ರತಿಕ್ರಿಯೆ ನೀಡಿದ್ದರು. ಜಾಮೀನು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದಾಗಲೂ ದರ್ಶನ್ ವಿರುದ್ಧವೇ ಪೋಸ್ಟ್ ಮಾಡಿದ್ದರು. ಹಾಗಾಗಿ ದರ್ಶನ್ ಫ್ಯಾನ್ಸ್ ರಮ್ಯಾ ವಿರುದ್ಧ ತಿರುಗಿಬಿದ್ದಿದ್ದರು. ಈಗೀಗ ತೀರಾ ವೈಯಕ್ತಿಕವಾಗಿ ರಮ್ಯಾಗೆ ಟೀಕೆ ಮಾಡುತ್ತಿದ್ದಾರೆ.
ಈ ಕುರಿತು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿರೋ ಮೋಹಕತಾರೆ, ಕಾನೂನು ಹೋರಾಟ ಮಾಡೋದಾಗಿ ತಿಳಿಸಿದ್ದಾರೆ. ಎಲ್ಲಾ ಮೆಸೇಜ್‌ಗಳೊಂದಿಗೆ ದೂರು ಕೊಡೋದಾಗಿ ತಿಳಿಸಿದ್ದಾರೆ. ಸುದೀಪ್, ಯಶ್ ಅಲ್ಲ, ಅವರ ಹೆಂಡತಿ ಮಕ್ಕಳನ್ನೂ ಬಿಟ್ಟಿಲ್ಲ. ಚಿಕ್ಕಚಿಕ್ಕ ಮಕ್ಕಳ ಬಗ್ಗೆ ಕೆಟ್ಟಕೆಟ್ಟ ಪದ ಬಳಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ಪರಿಶಿಷ್ಟರ 11.8 ಸಾವಿರ ಕೋಟಿಯನ್ನು `ಗ್ಯಾರಂಟಿ’ಗಾಗಿ ದೋಚಲು ಕಾಂಗ್ರೆಸ್ ಮುಂದಾಗಿದೆ: ಅಶೋಕ್ ಕಿಡಿ