ವೋಟ್ ಮಾಡದ ನಟಿ ರಮ್ಯಾ

Public TV
1 Min Read

ಲೋಕಸಭಾ ಚುನಾವಣೆಯ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದ 14 ಕ್ಷೇತ್ರದಲ್ಲಿ ಮೊದಲ ಹಂತದ ಚುನಾವಣೆ ರಂಗೇರಿದೆ. ಸ್ಯಾಂಡಲ್‌ವುಡ್‌ನ ಹಲವು ನಟ-ನಟಿಯರು ಬಂದು ಮತದಾನ ಮಾಡಿ ಮಾದರಿಯಾಗಿದ್ದಾರೆ. ಇದೀಗ ನಟಿ ರಮ್ಯಾ (Actress Ramya) ಮತದಾನ (Vote) ಮಾಡದೇ ಇರುವುದು ನೆಟ್ಟಿಗರಿಂದ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ನಟಿ ರಮ್ಯಾ ಈ ಬಾರಿಯಾದ್ರೂ ವೋಟ್ ಮಾಡ್ತಾರೆ ಎಂದು ಮಂಡ್ಯದಲ್ಲಿ ಅಭಿಮಾನಿಗಳು ಕಾಯುತ್ತಾ ಇದ್ದರು. ಆದರೆ ಅಭಿಮಾನಿಗಳ ನಿರೀಕ್ಷೆಯನ್ನು ನಟಿ ಸುಳ್ಳು ಮಾಡಿದ್ದಾರೆ. ಮತದಾನದಲ್ಲಿ ನಟಿ ಭಾಗವಹಿಸಿಲ್ಲ. ವೋಟ್ ಮಾಡಿಲ್ಲ ಯಾಕೆ ಎಂಬ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಮೂಡಿದೆ.

2019ರ ಲೋಕಸಭೆ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ನಟಿ ರಮ್ಯಾ ತಮ್ಮ ಹಕ್ಕು ಚಲಾಯಿಸಿಲ್ಲ. ಈ ಬಾರಿಯೂ ಕೂಡ ನಟಿ ಮತದಾನದಲ್ಲಿ ಭಾಗವಹಿಸಿಲ್ಲ. ಇದನ್ನೂ ಓದಿ:‘ರಾಮಾಯಣ’ ಸಿನಿಮಾ ಬಗ್ಗೆ ಯಶ್‌ ಹೇಳಿದ್ದೇನು?

ಈ ಬಾರಿ ಸ್ಯಾಂಡಲ್‌ವುಡ್‌ನಲ್ಲಿ ಬಹುತೇಕ ನಟ-ನಟಿಯರು ವೋಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಮತದಾನ ಮಾಡುವಂತೆ ಸಂದೇಶ ನೀಡಿದ್ದರು.

Share This Article