Exclusive | ರೇಣುಕಾಸ್ವಾಮಿ ಕೇಸ್‌ – ʻಡಿ ಬಾಸ್‌ʼ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಕೆಂಡ

Public TV
2 Min Read

ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy) ಕುಟುಂಬಕ್ಕೆ ನ್ಯಾಯ ಸಿಗುತ್ತದೆ ಎಂದು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದ ನಟಿ ರಮ್ಯಾ (Ramya) ಇದೀಗ ದರ್ಶನ್‌ ಅಭಿಮಾನಿಗಳ ವಿರುದ್ಧ ತಿರುಗಿಬಿದ್ದಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿರುವ ನಟಿ, ಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ ಅಂತಲೂ ಬರೆದುಕೊಂಡಿದ್ದಾರೆ. ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ʻಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣʼ ಎಂದು ತಮ್ಮ ಇನ್‌ಸ್ಟಾ ಸ್ಟೇಟಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದರು. ನಟಿ ರಮ್ಯಾ ಪೋಸ್ಟ್ ವೈರಲ್ ಆಗ್ತಿದ್ದಂತೆ ದರ್ಶನ್ ಅಭಿಮಾನಿಗಳು ಕೆಟ್ಟ ಪದಗಳಿಂದ ರಮ್ಯಾ ವಿರುದ್ದ ಸೋಶಿಯಲ್ ಮಿಡಿಯಾದಲ್ಲಿ ಕಾಮೆಂಟ್ಸ್ ಮಾಡೋದ್ರ ಜೊತೆಗೆ ಟ್ರೋಲ್ ಮಾಡಿದ್ರು. ಇದೀಗ ನಟಿ ರಮ್ಯಾ ಖಡಕ್ ಆಗಿ ತಿರುಗೇಟು ಕೊಟ್ಟಿದ್ದಾರೆ.

ರಮ್ಯಾ ಇನ್‌ಸ್ಟಾ ಸ್ಟೋರಿಯಲ್ಲಿ ಏನಿದೆ?
ಮೊದಲ ಪೋಸ್ಟ್‌ನಲ್ಲಿ ʻಕೇಸ್‌ ಯಾವುದೇ ಇರಲಿ, ಯಾರದ್ದೇ ಇರಲಿ, ಸದಾ ನ್ಯಾಯದ ಪರʼ ಎನ್ನುವ ʻತೆರೆಯಮೇಲಷ್ಟೇ ಅಲ್ಲ ನಿಜ ಜೀವನದಲ್ಲೂ HIROIN ರಮ್ಯಾ ಎಂದು ಬರೆಯಲಾಗಿದೆ. ಅಲ್ಲದೇ ರಮ್ಯಾ ಎರಡು ದಿನಗಳ ಹಿಂದೆ ಮಾಡಿದ ಪೋಸ್ಟ್‌ ಇದೆ. ಇದರೊಂದಿಗೆ ʻಎಲ್ಲಾ ಡಿಬಾಸ್ ಅಭಿಮಾನಿಗಳಿಗೆ ನನ್ನ ಇನ್ ಸ್ಟಾಗ್ರಾಂಗೆ ಸ್ವಾಗತ… ರೇಣುಕಾಸ್ವಾಮಿ ಅವರ ಕುಟುಂಬಕ್ಕೆ ಯಾಕೆ ನ್ಯಾಯ ಸಿಗಬೇಕು ಅನ್ನೋದಕ್ಕೇ ನಿಮ್ಮ ಕಾಮೆಂಟ್ಸ್‌ಗಳೇ ಸಾಕ್ಷಿʼ ಅಂತ ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರಾಗೌಡ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲಾ ಆರೋಪಿಗಳು ಜಾಮೀನು ಪಡೆದು ಆಚೆ ಬಂದಿದ್ದರು. ಇದೀಗ ದರ್ಶನ್‌ಗೆ ರಾಜ್ಯ ಹೈಕೋರ್ಟ್‌ (Karnataka High Court) ನೀಡಿ‌ದ್ದ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿದಿದೆ. ನ್ಯಾ.ಪಾರ್ದಿವಾಲಾ ನೇತೃತ್ವದ ದ್ವಿ-ಸದಸ್ಯ ಪೀಠದಲ್ಲಿ ನಡೆಸಿದ್ದು, ಆದೇಶ ಕಾಯ್ದಿರಿಸಲಾಗಿದೆ. ಇದನ್ನೂ ಓದಿ: ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ

ಹೈಕೋರ್ಟ್‌ ರೀತಿ ತರಾತುರಿಯಲ್ಲಿ ಆದೇಶ ನೀಡುವುದಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಒಂದು ವಾರದಲ್ಲಿ ಆದೇಶ ಪ್ರಕಟಿಸುವುದಾಗಿ ಹೇಳಿದೆ. ಒಂದೂವರೆ ಗಂಟೆಗಳ ಕಾಲ ವಾದ-ಪ್ರತಿವಾದ ಆಲಿಸಿ ಕಡೆಯಲ್ಲಿ ಇತರೇ ಆರೋಪಿಗಳ ಪರ ವಕೀಲರ ಮಾಹಿತಿ ಕೇಳಿದೆ. ಎಲ್ಲ ಆರೋಪಿಗಳ ಪರ ವಕೀಲರು ಲಿಖಿತ ವಾದ ಮಂಡಿಸಬಹುದು. ಒಂದು ವಾರದಲ್ಲಿ ಮೂರು ಪುಟಗಳ ಮಾಹಿತಿ ನೀಡಬೇಕು. ಬಳಿಕ ಆದೇಶ ನೀಡುವುದಾಗಿ ಕೋರ್ಟ್‌ ಹೇಳಿದೆ. ಇದನ್ನೂ ಓದಿ: ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ

Share This Article