Animal: ರಣ್‌ಬೀರ್ ಜೊತೆ ನಟಿಸಲು 4 ಕೋಟಿ ಸಂಭಾವನೆ ಪಡೆದ ರಶ್ಮಿಕಾ

By
1 Min Read

ನ್ನಡದ ಬ್ಯೂಟಿ ರಶ್ಮಿಕಾ ಮಂದಣ್ಣ (Rashmika Mandanna) ಸೌತ್- ಬಾಲಿವುಡ್‌ನಲ್ಲಿ ಗುರುತಿಸಿಕೊಳ್ತಿದ್ದಾರೆ. ಸಾಲು ಸಾಲು ಸಿನಿಮಾ ಆಫರ್‌ಗಳನ್ನ ನಟಿ ಬಾಚಿಕೊಳ್ತಿದ್ದಾರೆ. ಈಗ ‘ಅನಿಮಲ್’ (Animal) ಸಿನಿಮಾಗಾಗಿ ರಶ್ಮಿಕಾ ಪಡೆದ ಸಂಭಾವನೆ ಬಗ್ಗೆ ಸಖತ್ ಟಾಕ್ ಆಗ್ತಿದೆ. ರಣ್‌ಬೀರ್ ಜೊತೆ ನಟಿಸಲು ‘ಪುಷ್’ ನಟಿ ದುಬಾರಿ ಸಂಭಾವನೆಯನ್ನೇ ಪಡೆದಿದ್ದಾರೆ.

ರಶ್ಮಿಕಾ ಮಂದಣ್ಣಗೆ ‘ಅನಿಮಲ್’ ಬಾಲಿವುಡ್‌ನ 3ನೇ ಸಿನಿಮಾವಾಗಿದ್ದು, ಮೊದಲ ಬಾರಿಗೆ ರಣ್‌ಬೀರ್ ಕಪೂರ್‌ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಹೀಗಿರುವಾಗ ಈ ಚಿತ್ರಕ್ಕಾಗಿ 4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ:ಒಂದು ಹನಿ ನೀರು ಬಿಡದೇ ಇರುವ ಹಾಗೆ ಮಾಡೋಕೆ ಕನ್ನಡಿಗರಿಗೆ ಶಕ್ತಿ ಇದೆ- ಪೂಜಾ ಗಾಂಧಿ

ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ನಿರ್ದೇಶನದ ಈ ಸಿನಿಮಾದಲ್ಲಿ ನಟಿಸಲು ರಣ್‌ಬೀರ್ ಕಪೂರ್ 75 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ.

ಒಟ್ನಲ್ಲಿ ಅನಿಮಲ್ ರಿಲೀಸ್ ಮುನ್ನವೇ ಚಿತ್ರ ಸಖತ್ ಹೈಪ್ ಕ್ರಿಯೇಟ್ ಮಾಡಿದೆ. ಚಿತ್ರದ ಟೀಸರ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಡಿಸೆಂಬರ್ 1ರಂದು ಬಹುಭಾಷೆಗಳಲ್ಲಿ ಚಿತ್ರ ರಿಲೀಸ್ ಆಗಲಿದೆ.

ಗುಡ್ ಬೈ, ಮಿಷನ್ ಮಜ್ನು ಸಿನಿಮಾಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈಗ ಅನಿಮಲ್ ಚಿತ್ರದ ಮೂಲಕ ರಶ್ಮಿಕಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಳ್ಳಲು ದಾರಿಯಾಗುತ್ತಾ, ಹಿಂದಿ ಚಿತ್ರರಂಗದಲ್ಲೂ ಗೆದ್ದು ಬೀಗುತ್ತಾರಾ ಎಂದು ಕಾಯಬೇಕಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್