ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ತಿದ್ದಾರೆ ಎಂದಿದ್ದ ನಟಿ ಕ್ಷಮೆ

Public TV
2 Min Read

ಭೋಪಾಲ್: ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಇದೀಗ ಕ್ಷಮೆಯಾಚಿಸಿದ್ದಾರೆ.

ತನ್ನ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಫ್‍ಐಆರ್ ದಾಖಲಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ನಟಿ, ಪತ್ರಿಕಾಗೋಷ್ಠಿ ನಡೆಸಿ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ನಾನು ಕೂಡ ದೇವರನ್ನು ಆರಾಧಿಸುತ್ತೇನೆ. ಹೀಗಾಗಿ ಉದ್ದೇಶಪೂರ್ವಕವಾಗಿ ನಾನು ಆ ಹೇಳಿಕೆಯನ್ನು ನೀಡಿಲ್ಲ. ನನ್ನ ನಿರ್ದಿಷ್ಟ ಹೇಳಿಕೆಯೇ ಬೇರೆ ಇದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಯಾರ ಭಾವನೆಗಳನ್ನು ನೋಯಿಸಲು ನಾನು ಇಷ್ಟಪಡುವುದಿಲ್ಲ. ಆದರೆ ಇದೀಗ ನನ್ನ ಹೇಳಿಕೆಯಿಂದ ಜನರ ಭಾವನೆಗಳಿಗೆ ಧಕ್ಕೆ ಆಗಿದೆ ಎಂಬುದು ತಿಳಿದಿದೆ. ಹಾಗಾಗಿ ನನ್ನ ಈ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ. ನಟ ಸೌರಭ್ ರಾಜ್ ಜೈನ್ ಬಗ್ಗೆ ಮಾತನಾಡುತ್ತಿದ್ದ ವೇಳೆ ಅವರನ್ನು ಭಗವಾನ್ ಎಂದು ಉದಾಹರಣೆಯಾಗಿ ಬಳಸಿದ್ದೇನೆ. ಉದ್ದೇಶಪೂರ್ವಕವಾಗಿ ಈ ಹೇಳಿಕೆ ನೀಡಿಲ್ಲ ಎಂದು ನಟಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 15 ದಿನದ ಹಿಂದೆಯಷ್ಟೇ ಪತಿ ಜೊತೆಗೆ ಕಾಲೇಜಿಗೆ ತೆರಳಿ ಹಳೆ ಸ್ನೇಹಿತರನ್ನು ಮಾತಾಡಿಸಿದ್ದ ಸೌಂದರ್ಯ!

ವೈರಲ್ ಆಗಿದ್ದೇನು..?
ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್ ಜೊತೆ ಫ್ಯಾಷನ್ ಸಂಬಂಧಿತ ವೆಬ್ ಸರಣಿಯಲ್ಲಿ ಶ್ವೇತಾ ತಿವಾರಿ ನಟಿಸಿದ್ದಾರೆ. ಈ ವೆಬ್ ಸೀರಿಸ್ ಪ್ರಮೋಷನ್ ಇತ್ತೀಚೆಗೆ ಭೋಪಾಲ್ ನಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶ್ವೇತಾ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಶ್ವೇತಾ, ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಮಾತಿನ ಭರದಲ್ಲಿ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅನೇಕ ಬಳಕೆದಾರರು, ದೇವರ ಬಗ್ಗೆ ತಮಾಷೆಯಾಗಿ ಮಾತನಾಡಿದ್ದಕ್ಕೆ ಕಿಡಿಕಾರಿದ್ದರು. ಇದನ್ನೂ ಓದಿ: ಅತ್ತಿಗೆಯಾಗಬೇಕಿದ್ದವಳ ಮೇಲೆ ಕಣ್ಣಾಕಿದ್ದ ಸಹೋದರನ ಕತ್ತು ಸೀಳಿದ ಅಣ್ಣ!

ತನಿಖೆಗೆ ಸೂಚನೆ:
ನಟಿಯ ಈ ಹೇಳಿಕೆಯ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಕಮಿಷನರ್ ಗೆ ತ ಈ ಬಗ್ಗೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವರು, ಶ್ವೇತಾ ತಿವಾರಿ ಅವರು ನೀಡಿರುವ ಹೇಳಿಕೆಯನ್ನು ನಾನು ಗಮನಿಸಿದ್ದೇನೆ. ಅಲ್ಲದೆ ಅವರ ಹೇಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಬಗ್ಗೆ ತನಿಖೆ ನಡೆಸಿ ವರದಿಯನ್ನು ನನಗೆ ಸಲ್ಲಿಸುವಂತೆ ಭೋಪಾಲ್ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *