ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ, ಮೂಗುತಿ ಸುಂದರಿ ಸುಷ್ಮಿತಾ ಗೌಡ

Public TV
1 Min Read

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ ಸಖತ್ ಸುದ್ದಿ ಮಾಡಿದ ಲವ್ ಮಾಕ್ಟೇಲ್ 2 ಸಿನಿಮಾ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳು ಹರಿದಾಡುತ್ತಿವೆ.

ಅಶ್ವಿನ್ ಗೌಡ ಜೊತೆ ಸುಷ್ಮಿತಾ ಗೌಡ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಭಿಮಾನಿಗಳು ಮತ್ತು ಸ್ನೇಹಿತರು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ. ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ. ಅಭಿಮಾನಿಗಳು, ಚಿತ್ರರಂಗದ ಕಲಾವಿದರು ನವ ಜೋಡಿಗೆ ಶುಭ ಕೋರುತ್ತಿದ್ದಾರೆ. ಇದನ್ನೂ ಓದಿ: ಕೊನೆಗೂ ನಮ್ಮ ಕನಸು ನನಸಾಗಿದೆ: ಆಲಿಯಾ ಹೀಗೆಂದಿದ್ದೇಕೆ?

 

View this post on Instagram

 

A post shared by Sushmitha Gowda (@sushmitha2412)

ಸೋಶಿಯಲ್ ಮೀಡಿಯಾದಲ್ಲಿ ತುಂಬಾ ಫೇಮಸ್ ಆಗಿರುವ ಸುಷ್ಮಿತಾ ಈಗ ಚಿತ್ರರಂಗದಲ್ಲೂ ಕಾಣಿಸಿಕೊಂಡಿದ್ದಾರೆ. ಮದುವೆಯ ಕಾರಣದಿಂದಲೂ ಸುದ್ದಿ ಆಗಿದ್ದಾರೆ. ತುಂಬ ಅದ್ದೂರಿಯಾಗಿ ಸುಷ್ಮಿತಾ ಗೌಡ ವಿವಾಹ ಸಮಾರಂಭ ನೆರವೇರಿದೆ. ಈ ಸಂಭ್ರಮದ ಕ್ಷಣಕ್ಕೆ ಆಶಿಕಾ ರಂಗನಾಥ್, ಅನುಷಾ ರಂಗನಾಥ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸಾಕ್ಷಿಯಾದರು. ಮದುವೆಯ ಫೋಟೋ ಮತ್ತು ವೀಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಸುಷ್ಮಿತಾ ಗೌಡ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

ಲವ್ ಮಾಕ್ಟೇಲ್ 2 ಸಿನಿಮಾ ಫೆ.10ರಂದು ರಾತ್ರಿಯೇ ರಾಜ್ಯದ ತೆರೆಕಂಡಿದೆ. ಲವ್ ಮಾಕ್ಟೇಲ್ 2 ಸಿನಿಮಾದಲ್ಲಿ ಜಂಕಣ ಅಲಿಯಾಸ್ ಜಂಕಿ ಎಂಬ ಪಾತ್ರವನ್ನು ಸುಷ್ಮಿತಾ ಕಾಣಿಸಿಕೊಂಡಿದ್ದಾರೆ. ಉತ್ತರ ಕರ್ನಾಟಕ ಶೈಲಿಯಲ್ಲಿ ಮಾತನಾಡುವ ಹುಡುಗಿಯಾಗಿ ಅವರು ಗಮನ ಸೆಳೆದಿದ್ದಾರೆ. ಈ ಮೂಗುತಿ ಸುಂದರಿಯ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ಸಿಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *