ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ತೇಜಸ್ವಿನಿ ಪ್ರಕಾಶ್

Public TV
1 Min Read

‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ತೇಜಸ್ವಿನಿ ಪ್ರಕಾಶ್ (Tejaswini Prakash) ಇದೀಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಪತಿ ಜೊತೆ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಡುತ್ತಿರುವ ಬೇಬಿ ಬಂಪ್ ಫೋಟೋವನ್ನ ನಟಿ ಹಂಚಿಕೊಂಡಿದ್ದಾರೆ.

ತಾಯಿಯಾಗುತ್ತಿರುವ ವಿಚಾರವನ್ನು ಇತ್ತೀಚೆಗೆ ತೇಜಸ್ವಿನಿ ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದರು. ಈಗ ಮತ್ತೆ ಬೇಬಿ ಬಂಪ್ ಫೋಟೋವನ್ನು ನಟಿ ಶೇರ್ ಮಾಡಿದ್ದಾರೆ. ಪತಿ ಫಣಿ ವರ್ಮಾ ಕಪ್ಪು ಉಡುಗೆಯಲ್ಲಿ ಮಿಂಚಿದ್ರೆ, ನಟಿ ಗೌನ್ ಧರಿಸಿ ಬೇಬಿ ಬಂಪ್ ಲುಕ್ ತೋರಿಸಿದ್ದಾರೆ. ಇದನ್ನೂ ಓದಿ:ರಜನಿ 170ನೇ ಸಿನಿಮಾಗೆ ಇಬ್ಬರು ನಾಯಕಿಯರು

ಕೆಲ ದಿನಗಳ ಹಿಂದೆ ಬೇಬಿ ಬಂಪ್ ಫೋಟೋ ಶೇರ್ ಮಾಡಿ ಪತಿಯ ಹುಟ್ಟುಹಬ್ಬಕ್ಕೆ ವಿಶೇಷವಾಗಿ ನಟಿ ಶುಭಕೋರಿದ್ದರು. ನಮ್ಮ ಮಗು ಸಂತೋಷದಿಂದ ಹೊಳೆಯುತ್ತಿದ್ದು, ನಾವು ನಮ್ಮ ಜೀವನದ ಅತ್ಯಂತ ಅಮೂಲ್ಯ ಉಡುಗೊರೆಯನ್ನು ಸ್ವೀಕರಿಸಲಿದ್ದೇವೆ. ಜನ್ಮದಿನದ ಶುಭಾಶಯಗಳು ಗಂಡ, ನೀವು ನನಗೆ ತೋರಿದ ಪ್ರೀತಿ, ಕಾಳಜಿ, ವಾತ್ಸಲ್ಯಕ್ಕೆ ನಾನು ಆಭಾರಿಯಾಗಿದ್ದೇನೆ. ನಿಮ್ಮನ್ನು ನನ್ನ ಪತಿಯಾಗಿ ಹೊಂದಲು ನಿಜವಾಗಿಯೂ ಪುಣ್ಯ ಮಾಡಿದ್ದೇನೆ ಎಂದು ತೇಜಸ್ವಿನಿ ಬರೆದುಕೊಂಡಿದ್ದರು.

ಕಳೆದ ವರ್ಷ ಮಾರ್ಚ್ 20ರಂದು ಫಣಿ ವರ್ಮಾ ಜೊತೆ ನಟಿ ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಸರಳವಾಗಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು.

ನನ್ನರಸಿ ರಾಧೆ, ನಿಹಾರಿಕಾ (Niharika) ಸೀರಿಯಲ್ ಮತ್ತು ಬಿಗ್ ಬಾಸ್ ರಿಯಾಲಿಟಿ ಶೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ತೇಜಸ್ವಿನಿ ಪ್ರಕಾಶ್ ನಟಿಸಿದ್ದಾರೆ. ದರ್ಶನ್ ನಟನೆಯ ‘ಗಜ’ (Gaja Film) ಸಿನಿಮಾದಲ್ಲಿ ತೇಜಸ್ವಿನಿ ನಟನೆ ಅಭಿಮಾನಿಗಳ ಗಮನ ಸೆಳೆದಿತ್ತು.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್