ಮಲಯಾಳಂ ನಿರ್ಮಾಪಕನ ಜೊತೆ ಮದುವೆಗೆ ಸಜ್ಜಾದ ತ್ರಿಷಾ ಕೃಷ್ಣನ್

By
1 Min Read

ನ್ನಡದ ‘ಪವರ್’ ಚಿತ್ರದ ನಟಿ ತ್ರಿಷಾ ಕೃಷ್ಣನ್ (Thrisha Krishnan) ತಮ್ಮ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಡಲು ಸಜ್ಜಾಗಿದ್ದಾರೆ. ಮಲಯಾಳಂ ಖ್ಯಾತ ನಿರ್ಮಾಪಕನ (Producer) ಜೊತೆ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಈ ಸುದ್ದಿ ಕಾಲಿವುಡ್ ಗಲ್ಲಿಯಲ್ಲಿ ಗಾಸಿಪ್‌ ಪ್ರಿಯರ ಚರ್ಚೆಗೆ ಗ್ರಾಸವಾಗಿದೆ.

40 ವರ್ಷ ಪೂರೈಸಿರೋ ನಟಿ ಬಗ್ಗೆ ಮದುವೆ ಮ್ಯಾಟರ್ ಮತ್ತೆ ಮುನ್ನೆಲೆಗೆ ಬರುತ್ತಿದೆ. ಮಲಯಾಳಂನ ಖ್ಯಾತ ನಿರ್ಮಾಪಕನ ಜೊತೆ ತ್ರಿಷಾ ಎಂಗೇಜ್ ಆಗಿದ್ದು, ಸದ್ಯದಲ್ಲೇ ದಾಂಪತ್ಯ (Wedding) ಜೀವನಕ್ಕೆ ನಟಿ ಕಾಲಿಡಲಿದ್ದಾರೆ ಎನ್ನಲಾಗ್ತಿದೆ. ಮದುವೆಯಾಗುವ ವರನ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ.

ಇಬ್ಬರ ಮದುವೆಗೆ ಗುರುಹಿರಿಯರ ಸಮ್ಮತಿ ಕೂಡ ಸಿಕ್ಕಿದೆ. ತನ್ನನ್ನು ಇಷ್ಟಪಡುವ ವ್ಯಕ್ತಿಯ ಜೊತೆ ತ್ರಿಷಾ ಮದುವೆಯಾಗಲು ನಿರ್ಧರಿಸಿದ್ದಾರಂತೆ. ಈ ಹಿಂದೆ ಉದ್ಯಮಿ ವರುಣ್ (Varun) ಜೊತೆ ಅದ್ದೂರಿಯಾಗಿ ನಿಶ್ಚಿತಾರ್ಥವಾಗಿತ್ತು. ಹಲವು ವೈಯಕ್ತಿಕ ಕಾರಣ, ಭಿನ್ನಾಭಿಪ್ರಾಯಗಳಿಂದ ವರುಣ್ ಜೊತೆಗಿನ ಸಂಬಂಧ ಮುರಿದು ಬಿತ್ತು. 2015ರಲ್ಲಿ ನಡೆದ ಈ ಕಹಿ ಘಟನೆಯಿಂದ ಹೊರಬಂದು ಈಗ ಸಿನಿಮಾಗಳಲ್ಲಿ ಪವರ್ ಚಿತ್ರದ ನಟಿ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ:ಸಲ್ಲು, ಶಾರುಖ್ ಖಾನ್ ಮನೆಯಲ್ಲಿ ಗಣೇಶ ಹಬ್ಬ: ಮೆಚ್ಚಿಕೊಂಡ ಫ್ಯಾನ್ಸ್

‘ಪೊನ್ನಿಯನ್ ಸೆಲ್ವನ್’ (Ponniyin Selvan) ಚಿತ್ರದ ಸಕ್ಸಸ್ ನಂತರ ಮತ್ತೆ ಸಾಲು ಸಾಲು ಬಿಗ್ ಪ್ರಾಜೆಕ್ಟ್‌ಗಳಿಗೆ ತ್ರಿಷಾ ನಾಯಕಿಯಾಗಿದ್ದಾರೆ. ಕೆರಿಯರ್ ಸಕ್ಸಸ್ ಜೊತೆಗೆ ವೈಯಕ್ತಿಕ ಜೀವನದಲ್ಲೂ ತನ್ನ ಸಂಗಾತಿಯನ್ನ ನಟಿ ಕಂಡುಕೊಂಡಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಮಾಹಿತಿ ಸಿಗಲಿದೆ.

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್