ಮದುವೆ ಬಳಿಕ ಸತ್ಯ ಹೇಳಿದ ಯಾಮಿ ಗೌತಮ್

By
2 Min Read

ಮುಂಬೈ: ಕೆಲವು ದಿನಗಳಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಯಾಮಿ ಗೌತಮ್ ಮದುವೆಯಾದ ಬಳಿಕ ಒಂದು ಸತ್ಯವನ್ನು ಬಾಯಿ ಬಿಟ್ಟಿದ್ದಾರೆ. ಅವರಿಗೆ ಇರುವ ಒಂದು ಕಾಯಿಲೆ ಕುರಿತಾಗಿ ಹೇಳಿಕೊಂಡಿರುವುದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗುತ್ತಿದೆ.

ಇತ್ತೀಚೆಗೆ ಒಂದು ಫೋಟೋಶೂಟ್ ಮಾಡಲಾಯಿತು. ಸಾಮಾನ್ಯವಾಗಿ ನಮ್ಮ ಚರ್ಮದ ಸಮಸ್ಯೆಯನ್ನು ಮರೆಮಾಚುವ ಸಲುವಾಗಿ ಆ ಫೋಟೋಗಳನ್ನು ಪೋಸ್ಟ್​ ಪ್ರೊಡಕ್ಷನ್​ಗೆ ಕಳಿಸುತ್ತೇವೆ. ಆದರೆ ಈ ಬಾರಿ ಬೇರೆ ಆಲೋಚನೆ ಬಂತು. ನಾನೇಕೆ ಈ ಸಮಸ್ಯೆಯನ್ನು ಒಪ್ಪಿಕೊಳ್ಳಬಾರದು ಎನಿಸಿತು ಎಂದು ಯಾಮಿ ಗೌತಮ್ ಪೋಸ್ಟ್ ಮಾಡಿದ್ದಾರೆ.

ಸತ್ಯವನ್ನು ನಿಮ್ಮೆದುರು ಒಪ್ಪಿಕೊಳ್ಳಲು ಧೈರ್ಯ ಮಾಡಿದ್ದೇನೆ. ನಾನು ಹದಿಹರೆಯದಲ್ಲಿ ಇರುವಾಗಲೇ ಈ ಸಮಸ್ಯೆ ಇರುವುದು ಗೊತ್ತಾಯಿತು. ಇನ್ನೂ ಇದು ವಾಸಿ ಆಗಿಲ್ಲ. ತುಂಬ ವರ್ಷಗಳಿಂದ ಇದನ್ನು ನಿಭಾಯಿಸುತ್ತಿದ್ದೇನೆ. ಆದರೆ ಇಂದು ನನ್ನ ನ್ಯೂನತೆಯನ್ನು ಒಪ್ಪಿಕೊಂಡು, ಭಯ ಮತ್ತು ಅಭದ್ರತೆಯನ್ನು ತೊಲಗಿಸುವ ಧೈರ್ಯ ಮಾಡಿದ್ದೇನೆ ಎಂದು ಯಾಮಿ ಗೌತಮ್ ಹೇಳಿದ್ದಾರೆ.

 

View this post on Instagram

 

A post shared by Yami Gautam Dhar (@yamigautam)

ಕೆರಟೋಸಿಸ್ ಪಿಲಾರಸ್ (Keratosis-Pilaris) ಎಂಬ ಚರ್ಮದ ಸಮಸ್ಯೆ ಯಾಮಿ ಗೌತಮ್ ಅವರನ್ನು ಕಾಡುತ್ತಿದೆ. ಇದೇನೂ ಗಂಭೀರ ಸಮಸ್ಯೆ ಅಲ್ಲ. ಆದರೆ ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್ ಲಕ್ಷಣ. ಹದಿಹರೆಯಲ್ಲಿ ಇದ್ದಾಗಲೇ ಯಾಮಿ ಗೌತಮ್ ಅವರಿಗೆ ಈ ಸಮಸ್ಯೆ ಕಾಣಿಸಿಕೊಂಡಿತು. ಅಂದಿನಿಂದ ಇದನ್ನು ಮುಚ್ಚಿಟ್ಟುಕೊಂಡೇ ಬಂದಿದ್ದ ಅವರು ಈಗ ಎಲ್ಲವನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ:  ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಯಾಮಿ ಗೌತಮ್

ನಟಿಯರು ಚರ್ಮದ ಬಗ್ಗೆ ಕಾಳಜಿ ವಹಿಸುತ್ತಾರೆ. ಹಾಗಾಗಿ ಅವರು ಸ್ವಸ್ಥವಾದ ಚರ್ಮ ಹೊಂದಬೇಕಾಗಿರುವುದು ಅನಿವಾರ್ಯ. ಹಾಗಾಗಿ ಕೆರಟೋಸಿಸ್ ಪಿಲಾರಸ್ ಸಮಸ್ಯೆಯಿಂದ ಮುಕ್ತಿ ಪಡೆಯಲು ಯಾಮಿ ಗೌತಮ್ ಸಾಕಷ್ಟು ಪ್ರಯತ್ನಿಸಿದರು ಸಾಧ್ಯವಾಗಿಲ್ಲ. ಆ ಬಗ್ಗೆ ಅವರೀಗ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಬಾಲಿವುಡ್ ನಟಿ ಯಾಮಿ ಗೌತಮ್ ತಮ್ಮ ಬಹುಕಾಲದ ಗೆಳೆಯ ಆದಿತ್ಯ ಧಾರ್ ಜೊತೆ ನಾಲ್ಕು ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಯುಆರ್‍ಐ ಸಂಸ್ಥೆಯಲ್ಲಿ ನಿರ್ದೇಶಕರಾಗಿದ್ದ, ಆದಿತ್ಯ ಧಾರ್, ಯಾಮಿ ಗೌತಮ್ ಅವರ ಜೊತೆ ಸರಳ ಹಾಗೂ ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿದ್ದಾರೆ. ವಿವಾಹದ ಫೋಟೋವನ್ನು ಯಾಮಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಆದರೆ ಇದೀಗ ಅವರಿಗೆ ಇರುವ ಕಾಯಿಲೆ ಕುರಿತಾಗಿ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *