ದಿ.ಡಾ.ವಿಷ್ಣುವರ್ಧನ್, ಸರೋಜಾದೇವಿಯವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಗೆ ನಟಿಯರ ಮನವಿ

By
2 Min Read

– ಕ್ಯಾಬಿನೆಟ್‌ನಲ್ಲಿ ಚರ್ಚಿಸುವುದಾಗಿ ಸಿಎಂ ಭರವಸೆ

ಬೆಂಗಳೂರು: ಕಾವೇರಿ ನಿವಾಸದಲ್ಲಿ ಇವತ್ತು ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯನವರನ್ನು (Siddaramaiah) ಭೇಟಿ ಮಾಡಿದರು. ಹಿರಿಯ ನಟಿಯರಾದ ಜಯಮಾಲ, ಶೃತಿ, ಮಾಳವಿಕ ಭೇಟಿ ಮಾಡಿ ಮಾತುಕತೆ ನಡೆಸಿದರು.

ಸೆಪ್ಟಂಬರ್ 18ಕ್ಕೆ ವಿಷ್ಣುವರ್ಧನ್ (Dr Vishnuvardhan) ಅವರ 75ನೇ ಬರ್ತ್ ಡೇ. ಅವತ್ತು ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ (Posthumous Karnataka Ratna Award) ಘೋಷಣೆ ಮಾಡುವಂತೆ ಮನವಿ ಮಾಡಿದರು. ಅಲ್ಲದೆ ದಿವಂಗತ ನಟಿ ಸರೋಜಾದೇವಿ (Saroja Devi) ಅವರಿಗೂ ಮರಣೋತ್ತರ ಕರ್ನಾಟಕ ರತ್ನ ನೀಡಿ ಗೌರವಿಸಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಿಂದ ಪದೇ ಪದೇ ಕರೆತರಲು ಸಾಧ್ಯವಿಲ್ಲ: ದರ್ಶನ್‌ ಪರ ವಕೀಲ

ಇನ್ನು ಸಿಎಂ ಭೇಟಿ ಬಳಿಕ ಮಾತನಾಡಿದ ಹಿರಿಯ ನಟಿ ಜಯಮಾಲಾ, ದಿವಂಗತ ವಿಷ್ಣುವರ್ಧನ್ ಅವರಿಗೆ 75ನೇ ವರ್ಷದ ಹುಟ್ಟುಹಬ್ಬದಂದು ಮರಣೋತ್ತರ ಕರ್ನಾಟಕ ರತ್ನ ಕೊಡಬೇಕು. ವಿಷ್ಣುವರ್ಧನ್ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಕೊಡಬೇಕು. ರಸ್ತೆಗೆ ಸರೋಜಾದೇವಿ ಹೆಸರು ಇಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ಮಾತಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ. ವಿಷ್ಣುವರ್ಧನ್, ಸರೋಜಾದೇವಿ ಅವರ ಜೊತೆ ಕೆಲಸ ಮಾಡಿದ್ದೇವೆ. ನಾವು ಕಲಾವಿದರು, ನಮಗೆ ಯಾವುದೇ ಜಾತಿ ಇಲ್ಲ, ರಾಜಕೀಯವಿಲ್ಲ. ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಿರಂತರ ಮಳೆಗೆ ಬೆಳೆಹಾನಿ – ಜಮೀನುಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಇದೇ ವೇಳೆ ಹಿರಿಯ ನಟಿ ಶೃತಿ ಮಾತನಾಡಿ, ವಿಷ್ಣುವರ್ಧನ್ ಸರ್ ಅವರ ಅಭಿಮಾನಿಯಾಗಿ ನಾವು ಬಂದಿದ್ದೇವೆ. ಕರ್ನಾಟಕ ರತ್ನ ನೀಡಬೇಕೆಂದು ಮನವಿ ಮಾಡಿದ್ದೇವೆ. ಸರೋಜಾ ದೇವಿ ಅವರಿಗೂ ಕರ್ನಾಟಕ ರತ್ನ ಕೊಡಬೇಕು ಪಕ್ಷಾತೀತವಾಗಿ ನಾವೆಲ್ಲ ಬಂದಿದ್ದೇವೆ. ನಾವೆಲ್ಲರೂ ಕಲಾವಿದರು, ಇದರಲ್ಲಿ ರಾಜಕೀಯ ಇಲ್ಲ ಎಂದರು. ಇದನ್ನೂ ಓದಿ: ವಿಷ್ಣು ಸ್ಮಾರಕ ವಿಚಾರ – ನಾಳೆ ಸಿಎಂ ಭೇಟಿಯಾಗಲಿರುವ ಭಾರತಿ ವಿಷ್ಣುವರ್ಧನ್

ಇನ್ನು ಮಾಳವಿಕಾ ಅವಿನಾಶ್ ಮಾತನಾಡಿ, ವಿಷ್ಣುವರ್ಧನ್, ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಕೊಡಬೇಕು. ಮಲ್ಲೇಶ್ವರಂನಲ್ಲಿ ಸರೋಜಾದೇವಿ ಅವರ ನಿವಾಸವಿದೆ. ಆ ರಸ್ತೆಗೆ ಸರೋಜಾದೇವಿ ಹೆಸರು ಇಡಬೇಕು. ಸಿಎಂ ಸಿದ್ದರಾಮಯ್ಯ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಠಿಣ ಶಿಕ್ಷೆ ಅವಶ್ಯಕ, ಕೇಂದ್ರದ ತನಿಖೆ ಆಗಲಿ: ಡಾ.ಮಂಜುನಾಥ್

Share This Article