ಪ್ರಜ್ವಲ್ ಜಾಮೀನು ಅರ್ಜಿ ವಿಚಾರಣೆ ಜೂ.24ಕ್ಕೆ ಮುಂದೂಡಿಕೆ

Public TV
1 Min Read

-ಪ್ರತಿ ಪ್ರಕರಣದಲ್ಲೂ ಪುರುಷತ್ವ ಪರೀಕ್ಷೆಯಿಂದ ಮುಜುಗರ ಎಂದ ಪ್ರಜ್ವಲ್

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Court) ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.

ಎರಡನೇ ಕೇಸ್‍ನಲ್ಲಿ ಬಾಡಿ ವಾರೆಂಟ್ ಪಡೆದಿದ್ದ ಎಸ್‍ಐಟಿ, ಇಂದು ಕೋರ್ಟ್‍ಗೆ ಹಾಜರುಪಡಿಸಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಂತೋಷ್ ಗಜಾನನ ಭಟ್, ಎಸ್‍ಐಟಿಗೆ ನೋಟಿಸ್ ನೀಡಿ ಅರ್ಜಿ ವಿಚಾರಣೆಯನ್ನು ಮುಂದೂಡಿದ್ದಾರೆ. ಈ ಮೂಲಕ ಪ್ರಜ್ವಲ್‍ಗೆ ನ್ಯಾಯಾಂಗ ಬಂಧನ ಮುಂದುವರಿಸಲಾಗಿದೆ. ಇದನ್ನೂ ಓದಿ: ಇಂಡಿಯಾ ಒಕ್ಕೂಟದ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ಕೇಳಿದ ಸ್ವಾತಿ ಮಲಿವಾಲ್

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ನಿಮಗೆ ಆರೋಗ್ಯ ಸಮಸ್ಯೆ ಇದೆಯೇ ಎಂದು ವಿಚಾರಿಸಿದ್ದಾರೆ. ಈ ವೇಳೆ ಪ್ರಜ್ವಲ್ ಉಸಿರಾಟದ ಸಮಸ್ಯೆ ಇದೆ. ಎಂಆರ್‍ಐ ಮಾಡಿಸಬೇಕಿದೆ ಎಂದು ಹೇಳಿದ್ದಾರೆ. ನಾನು ಎರಡು ಕೇಸ್‍ನಲ್ಲಿ ಪುರುಷತ್ವ ಪರೀಕ್ಷೆ ಒಪ್ಪಿ ಮಾಡಿಸಿಕೊಂಡಿದ್ದೇನೆ. ಇದರಿಂದ ತುಂಬಾ ಮುಜುಗರ ಆಗತ್ತೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳ್ತಾರೆ. ಈಗಾಗಲೇ ಎರಡು ಬಾರಿ ಒಂದೇ ಟೆಸ್ಟ್ ಮಾಡಲಾಗಿದೆ ಎಂದು ಅವರು ಜಡ್ಜ್ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಈ ವೇಳೆ ಮೂರನೇ ಕೇಸ್‍ನಲ್ಲಿ ಕಸ್ಟಡಿಗೆ ಬಾಡಿ ವಾರಂಟ್ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಜೂ.19 ರಂದು ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ

Share This Article