ಚೆನ್ನೈ: ಪತಿಯೊಂದಿಗೆ (Husband) ನಡೆದ ಜಗಳದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪತ್ನಿಯನ್ನು (Wife) ಪತಿ ಇರಿದು ಕೊಂದ ಘಟನೆ ತಮಿಳುನಾಡಿನ (Tamil Nadu) ಕರೂರ್ (Karur) ಜಿಲ್ಲೆಯಲ್ಲಿ ನಡೆದಿದೆ.
ಶ್ರುತಿ ಮೃತ ಪತ್ನಿ. ಶ್ರುತಿ ಪಟ್ಟವರ್ತಿಯ ವಿಶ್ರುತ್‌ನನ್ನು ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು. ಶನಿವಾರ ಶ್ರುತಿ ಗಂಡನೊಂದಿಗೆ ಜಗಳವಾಡಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ನಾನು ಹೂತಿಟ್ಟ ಶವಗಳಲ್ಲಿ ಮಹಿಳೆಯರದ್ದೇ ಹೆಚ್ಚು.. ನನಗೆ ಪಾಪಪ್ರಜ್ಞೆ ಕಾಡುತ್ತಿದೆ: ದೂರುದಾರ ಹೇಳಿದ್ದೇನು?
ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಬಂದ ಪತಿ ವಿಶ್ರುತ್, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪತ್ನಿಗೆ ಮೂರು ಬಾರಿ ಇರಿದು ಹತ್ಯೆಮಾಡಿದ್ದಾನೆ. ಬಳಿಕ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಘಟನೆ ಸಂಬಂಧ ಕುಳಿತಲೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರೆಂಟ್ ಶಾಕ್ ನೀಡಿ ಮಾವನ ಕೊಲೆ – ಗಾಯ ಮರೆಮಾಚಲು ರೋಸ್ ವಾಟರ್, ಅರಶಿಣ ಪುಡಿ ಹಚ್ಚಿದ ಸೊಸೆ