ಓವೈಸಿಗೆ ಝಡ್ ಮಾದರಿಯ ಭದ್ರತೆ ನೀಡಿದ ಕೇಂದ್ರ ಸರ್ಕಾರ

Public TV
2 Min Read

ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾರಿನ ಮೇಲೆ ಗುಂಡು ಹಾರಿಸಿದ ಘಟನೆ ದೆಹಲಿ-ಮೀರತ್ ಇ-ವೇನಲ್ಲಿ ಛಜರ್ಸಿ ಟೋಲ್ ಬಳಿ ನಡೆದಿತ್ತು. ಈ ಹಿನ್ನೆಲೆಯಲ್ಲಿ( Z )ಝಡ್ ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ ನೀಡಿದೆ.

ಓವೈಸಿಗೆ ಭದ್ರತೆಗೆ ಕೇಂದ್ರ ಸರ್ಕಾರ ಝಡ್ ಮಾದರಿಯ ಭದ್ರತೆ ನೀಡಲು ಆದೇಶ ನೀಡಿದ್ದು, ಸಿಆರ್‌ಪಿಎಫ್‌ನ Z ಕೆಟಗರಿ ಭದ್ರತೆ ಇರಲಿದೆ. ಪ್ರಾಣ ಬೆದರಿಕೆ ಇರುವವರಿಗೆ 4-6 NSG ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 22 ಸಿಬ್ಬಂದಿ ಇರುವುದು ‘ಝಡ್ ಕೆಟಗರಿ’ ಭದ್ರತೆಯಾಗಿದೆ. ಇದನ್ನು ದೆಹಲಿ ಪೊಲೀಸ್ ಅಥವಾ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ((ITBP) ಅಥವಾ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF)) ಸಿಬ್ಬಂದಿ   ಕಾರ್ ಜೊತೆಗೆ  ಭದ್ರತೆಗೆ ಒದಗಿಸುತ್ತಾರೆ. ಇದನ್ನೂ ಓದಿ:  ದೆಹಲಿಯತ್ತ ತೆರಳುತ್ತಿದ್ದ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ

ನಡೆದಿದ್ದೇನು?: ಉತ್ತರಪ್ರದೇಶದ ಮೀರತ್‍ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓವೈಸಿ ವಾಹನದ ಮೇಲೆ 3-4 ಸುತ್ತು ಗುಂಡು ಹಾರಿಸಲಾಗಿದೆ. ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಬಳಿಕ ಓರ್ವನನ್ನು ಬಂಧಿಸಲಾಗಿತ್ತು.

ಈ ಸಂಬಂಧ ಟ್ವೀಟ್ ಮಾಡಿರುವ ಓವೈಸಿ, ಎಲ್ಲರೂ ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದರು. ಅಲ್ಲದೆ ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದರು. ನಾನು ಮೀರತ್ ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು. ಗುಂಡು ಹಾರಿಸಿದ ಪರಿಣಾಮ ನನ್ನ ವಾಹನ ಪಂಕ್ಚರ್ ಆಯಿತು. ಹೀಗಾಗಿ ನಾನು ಬೇರೆ ವಾಹನದಲ್ಲಿ ಅಲ್ಲಿಂದ ತೆರಳಿದೆ ಎಂದು ಓವೈಸಿ ತಮ್ಮ ಟ್ವೀಟ್ ನಲ್ಲಿ ವಿವರಿಸಿದ್ದರು.

ಫೋಟೋ ಸಮೇತ ಓವೈಸಿ ಟ್ವೀಟ್ ಮಾಡಿದ್ದು, ಫೋಟೋದಲ್ಲಿ ಓವೈಸಿ ಇದ್ದ ಕಾರಿಗೆ ಗುಂಡು ತಾಗಿರುವುದನ್ನು ಹಾಗೂ ಟೈಯರ್ ಗಳು ಪಂಕ್ಚರ್ ಆಗಿರುವುದನ್ನು ಕಾಣಬಹುದಾಗಿದೆ. ಘಟನೆ ನಡೆದ ಬಳಿಕ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದರು. ಇದೀಗ ಅವರಿಗೆ Z ಮಾದರಿಯ ಭದ್ರತೆ ನೀಡಲು ಕೇಂದ್ರ ಸರ್ಕಾರ ಆದೇಶ ನೀಡಿದೆ.

Share This Article
Leave a Comment

Leave a Reply

Your email address will not be published. Required fields are marked *