ಆಸ್ಪತ್ರೆಯಿಂದ ಹೊಸಕೆರೆಹಳ್ಳಿ ಫ್ಲ್ಯಾಟ್‌ಗೆ ಆಗಮಿಸಿದ ದರ್ಶನ್

Public TV
1 Min Read

ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ಆರೋಪಿ ದರ್ಶನ್ (Darshan) 7 ವಾರಗಳ ಬಳಿಕ ಶಸ್ತ್ರ ಚಿಕಿತ್ಸೆ ಮಾಡಿಸದೇ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊಸಕೆರೆಹಳ್ಳಿ ಅಪಾರ್ಟ್‌ಮೆಂಟ್‌ಗೆ ತೆರಳಿದ್ದಾರೆ. ಇದನ್ನೂ ಓದಿ:ಅಲ್ಲು ಅರ್ಜುನ್‌ಗೆ ಮತ್ತೆ ಸಂಕಷ್ಟ – ಜಾಮೀನು ಪ್ರಶ್ನಿಸಿ ತೆಲಂಗಾಣ ಪೊಲೀಸರು ಸುಪ್ರೀಂ ಮೆಟ್ಟಿಲೇರುವ ಸಾಧ್ಯತೆ

ಪತ್ನಿ ವಿಜಯಲಕ್ಷ್ಮಿ (Vijayalakshmi) ಹೊಸಕೆರೆಹಳ್ಳಿಯ ಫ್ಲ್ಯಾಟ್‌ಗೆ ದರ್ಶನ್ ಆಗಮಿಸಿದ್ದಾರೆ. ಪತ್ನಿ, ಮಗ ಮತ್ತು ಧನ್ವೀರ್ (Dhanveer Gowda) ಜೊತೆ ಮನೆಗೆ ಬಂದಿದ್ದಾರೆ. ದರ್ಶನ್ ಬರುತ್ತಿದ್ದಂತೆ ಸೆಕ್ಯೂರಿಟಿ ಸಿಬ್ಬಂದಿ ಗೇಟ್ ಅನ್ನು ಕ್ಲೋಸ್ ಮಾಡಿದ್ದಾರೆ. ದರ್ಶನ್ ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದಾರೆ.

ಡಿಸ್ಚಾರ್ಜ್‌ ಆಗಿ ಮನೆಗೆ ಬಂದಿರುವ ನೆಚ್ಚಿನ ನಟನ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಶೀಘ್ರದಲ್ಲಿ ಗುಣಮುಖರಾಗಲಿ, ಈ ಪ್ರಕರಣಕ್ಕೊಂದು ಅಂತ್ಯ ಸಿಗಲಿ ಎಂಬುದು ಅಭಿಮಾನಿಗಳ ಆಶಯ.

Share This Article