ಭಾರತ ಟಿ20 ವಿಶ್ವಕಪ್‌ ಗೆಲ್ಲುತ್ತೆ ಎಂದು ಭವಿಷ್ಯ ನುಡಿದಿದ್ದ ಜಯ್‌ ಶಾ – ವೀಡಿಯೋ ವೈರಲ್‌

By
2 Min Read

ಬ್ರಿಡ್ಜ್‌ಟೌನ್: ಟಿ20 ವಿಶ್ವಕಪ್‌ (T20 World Cup 2024) ಟೂರ್ನಿ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ (South Africa) ತಂಡವನ್ನು ಬಗ್ಗು ಬಡಿದ ಟೀಂ ಇಂಡಿಯಾ ವಿಶ್ವ ಚಾಂಪಿಯನ್‌ ಆಗಿದೆ. ಭಾರತ ಟ್ರೋಫಿ ಗೆಲ್ಲುವ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ (Jai Shah) ಈ ಹಿಂದೆಯೇ ಭವಿಷ್ಯ ನುಡಿದಿದ್ದರು. ಅವರ ಭವಿಷ್ಯವಾಣಿ ಈಗ ಎಲ್ಲೆಡೆ ವೈರಲ್‌ ಆಗುತ್ತಿದೆ.

‘ವಿಶ್ವಕಪ್‌ನಲ್ಲಿ ನನ್ನ ಹೇಳಿಕೆಗಾಗಿ ಎಲ್ಲರೂ ಕಾಯುತ್ತಿದ್ದರು. 2023 ರಲ್ಲಿ, ಭಾರತವು ಸತತ 10 ಪಂದ್ಯಗಳನ್ನು ಗೆದ್ದು ಫೈನಲ್‌ ಪ್ರವೇಶಿಸಿ ವಿಶ್ವಕಪ್ ಗೆಲ್ಲಲಿಲ್ಲ. ಆದರೆ ನಾವು ಹೃದಯವನ್ನು ಗೆದ್ದಿದ್ದೇವೆ. ಆದರೆ 2024 ರಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತವು ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್ ಗೆಲ್ಲುತ್ತದೆ ಎಂದು ನಾನು ಭರವಸೆ ನೀಡಲು ಬಯಸುತ್ತೇನೆ’ ಎಂದು ರಾಜ್‌ಕೋಟ್‌ನ ಎಸ್‌ಸಿಎ ಸ್ಟೇಡಿಯಂ ಅನ್ನು ನಿರಂಜನ್ ಶಾ ಸ್ಟೇಡಿಯಂ ಎಂದು ಮರುನಾಮಕರಣ ಮಾಡುವ ಮೊದಲು ಜಯ್‌ ಶಾ ಹಿಂದೆಯೇ ಭವಿಷ್ಯ ನುಡಿದಿದ್ದರು. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಉಡುಗೊರೆ ನೀಡಿದ್ದಕ್ಕೆ ಧನ್ಯವಾದ: ವಿಶ್ವಕಪ್‌ ಗೆದ್ದ ಭಾರತಕ್ಕೆ ಧೋನಿ ವಿಶ್‌

ಚೆನ್ನಾಗಿದೆ ಜಯ್‌ ಶಾ. ನಿಮ್ಮ ಹೊಸ ಹೆಸರು ಜಯ್‌ ನಾಸ್ಟ್ರಾಡಾಮಸ್ ಶಾ. ನೀವು 4 ತಿಂಗಳ ಹಿಂದೆ ರೋಹಿತ್‌ ಶರ್ಮಾ ನಾಯಕನನ್ನು ನೇಮಿಸಿದ್ದಿರಿ. ಭಾರತವು ಕಪ್ ಎತ್ತುತ್ತದೆ ಎಂದು ಭವಿಷ್ಯ ನುಡಿದಿದ್ದೀರಿ ಎಂದು ರವಿಶಾಸ್ತ್ರಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ ಜಯ್‌ ಶಾ ಮಾತುಗಳನ್ನು ನೆನಪಿಸಿಕೊಂಡಿದ್ದಾರೆ.

ಜಯ್‌ ಶಾ ಅವರು ಮಾತನಾಡಿರುವ ವೀಡಿಯೋವನ್ನು ಮೋಹಿತ್‌ ಬಾಬು ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇವರು ಜಯ್‌ ಶಾ ಅವರ ಗ್ಯಾರಂಟಿ. ದಿ ಅಲ್ಟಿಮೇಟ್ ಸ್ಕ್ರಿಪ್ಟ್ ರೈಟರ್ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕೊಹ್ಲಿ ಜೊತೆಗೆ ಟಿ20 ವಿಶ್ವಕಪ್‌ಗೆ ವಿದಾಯ ಹೇಳಿದ ಹಿಟ್‌ಮ್ಯಾನ್‌

ಶನಿವಾರ ನಡೆದ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಐತಿಹಾಸಿಕ ಗೆಲುವು ದಾಖಲಿಸಿತು. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಿಗೆ 176 ರನ್‌ ಗಳಿಸಿತ್ತು. 177 ರನ್‌ ಗುರಿ ಬೆನ್ನತ್ತಿದ ಆಫ್ರಿಕಾ ಪಡೆ 20 ಓವರ್‌ಗೆ 8 ವಿಕೆಟ್‌ ನಷ್ಟಕ್ಕೆ 168 ರನ್‌ ಗಳಿಸಿ ಸೋತಿತು. ಭಾರತ 7 ರನ್‌ಗಳ ಭರ್ಜರಿ ಜಯ ದಾಖಲಿಸಿತು.

Share This Article