ನವದೆಹಲಿ: ದೆಹಲಿಯ ಕೆಂಪುಕೋಟೆಯ (Red Fort) ಬಳಿ ನಡೆದ ಕಾರು ಸ್ಫೋಟ (Delhi Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ ಫಲಾಹ್ ವಿಶ್ವವಿದ್ಯಾಲಯದ (Al Falah University) 200ಕ್ಕೂ ಹೆಚ್ಚು ವೈದ್ಯರು ಮತ್ತು ಸಿಬ್ಬಂದಿ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಮೇಲೆಯೂ ತನಿಖಾ ಸಂಸ್ಥೆಗಳು ಕಣ್ಣಿಟ್ಟಿವೆ.
ಘಟನೆ ಬೆನ್ನಲ್ಲೇ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ನಿರಂತರ ತಪಾಸಣೆಗಳು ನಡೆಯುತ್ತಿವೆ. ಈ ನಡುವೆ ಕ್ಯಾಂಪಸ್, ಹಾಗೂ ಯೂನಿವರ್ಸಿಟಿ ಸುತ್ತಲೂ ರೂಂ ಮಾಡಿಕೊಂಡಿದ್ದ ವಿದ್ಯಾರ್ಥಿಗಳು ಖಾಲಿ ಮಾಡಿಕೊಂಡು ತೆರಳಿದ್ದಾರೆ. ಇಂತಹ ಸಿಬ್ಬಂದಿ, ವಿದ್ಯಾರ್ಥಿಗಳನ್ನು ಗುರುತಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: Delhi Blast | ಕಾರಿನಲ್ಲೇ ಕುಳಿತು ಬಾಂಬ್ ರೆಡಿ ಮಾಡಿದ್ದ ಉಗ್ರ ಉಮರ್
ಈವರೆಗೂ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ವಿಚಾರಣೆ ನಡೆಸಲಾಗಿದೆ. ಉಗ್ರ ಚಟುವಟಿಕೆ ಹೊಂದಿರುವವರ ಜೊತೆಗೆ ಸಂಪರ್ಕ ಹೊಂದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ನ.10ರ ಸಂಜೆ 6:52ಕ್ಕೆ ಕಾರು ಸ್ಫೋಟ ಸಂಭವಿಸಿತ್ತು. ಪರಿಣಾಮ 15 ಜನರು ಸಾವನ್ನಪ್ಪಿ, 20ಕ್ಕೂ ಅಧಿಕ ಜನರು ಗಾಯಗೊಂಡಿದ್ದರು. ಈ ಸಂಬಂಧ ಸ್ಫೋಟದಲ್ಲಿ ಭಾಗಿಯಾಗಿದ್ದ ವೈದ್ಯ ಉಮರ್ನ ಮನೆಯನ್ನು ಭದ್ರತಾ ಪಡೆಗಳು ಧ್ವಂಸ ಮಾಡಿದ್ದವು. ಇದನ್ನೂ ಓದಿ: Delhi Blast | ಅಕ್ರಮವಾಗಿ 20 ಲಕ್ಷ ಗಳಿಸಿದ್ದ I20 ಕಾರು ಚಾಲಕ; ಭಾರೀ ಪ್ರಮಾಣದ ರಸಗೊಬ್ಬರ ಖರೀದಿ
