ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

Public TV
1 Min Read

ನವದೆಹಲಿ: ದ್ವೀಪಸಮೂಹದಲ್ಲಿ ಜ್ವಾಲಾಮುಖಿ ಸ್ಫೋಟದಿಂದಾಗಿ (Volcanic Eruption) ದೆಹಲಿಯಿಂದ ಇಂಡೋನೇಷ್ಯಾದ ಬಾಲಿಗೆ (Bali) ತೆರಳುತ್ತಿದ್ದ ಏರ್‌ ಇಂಡಿಯಾ (Air India Flight) ವಿಮಾನವು ದೆಹಲಿಗೆ ವಾಪಸ್‌ ಆಗಿದೆ.

ದೆಹಲಿಯಿಂದ (Delhi) ಹೊರಟಿದ್ದ ಏರ್ ಇಂಡಿಯಾ ವಿಮಾನ AI2145, ಬಾಲಿಯ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟದ ವರದಿಗಳ ಕಾರಣ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು ಎಂದು ವಿಮಾನ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ – 9 ಜನರಿದ್ದ ಇಕೋ ಕಾರು ನೀರುಪಾಲು, ನಾಲ್ವರು ಸಾವು

ಬುಧವಾರ ದೆಹಲಿಯಿಂದ ಬಾಲಿಗೆ ಏರ್ ಇಂಡಿಯಾ ವಿಮಾನ AI2145 ಹೊರಟಿತ್ತು. ಬಾಲಿಯ ಗಮ್ಯಸ್ಥಾನ ವಿಮಾನ ನಿಲ್ದಾಣದ ಬಳಿ ಜ್ವಾಲಾಮುಖಿ ಸ್ಫೋಟದ ವರದಿಗಳು ಕೇಳಿಬಂದವು. ಸುರಕ್ಷತೆಯ ದೃಷ್ಟಿಯಿಂದ ದೆಹಲಿಗೆ ಹಿಂತಿರುಗಲು ಸೂಚಿಸಲಾಯಿತು ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು. ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಯಿತು. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ. ತೊಂದರೆಗೊಳಗಾದ ಪ್ರಯಾಣಿಕರಿಗೆ ಹೋಟೆಲ್ ವಸತಿ ಒದಗಿಸಲಾಗಿದೆ. ಟಿಕೆಟ್‌ ಹಣವನ್ನು ಪ್ರಯಾಣಿಕರಿಗೆ ಹಿಂದಿರುಗಿಸಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಕೇದಾರನಾಥ ಟ್ರಕ್ಕಿಂಗ್ ದಾರಿಯಲ್ಲಿ ಭೂಕುಸಿತ – ಇಬ್ಬರು ಸಾವು, ಮೂವರಿಗೆ ಗಾಯ

ಬಾಲಿಯ ಪೂರ್ವದಲ್ಲಿರುವ ಜ್ವಾಲಾಮುಖಿ ಸ್ಫೋಟಗೊಂಡ ನಂತರ ಬುಧವಾರ ಬಾಲಿಗೆ ಹೋಗುವ ಮತ್ತು ಬರುವ ಹಲವಾರು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share This Article