ಈ ವರ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆ ಇಲ್ಲ: ಹೈಕೋರ್ಟ್‌ಗೆ ಎಜಿ ಶಶಿಕಿರಣ್‌ ಶೆಟ್ಟಿ ಸ್ಪಷ್ಟನೆ

Public TV
1 Min Read

ಬೆಂಗಳೂರು: ಈ ವರ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (Greater Bengaluru Authority) ಸ್ಥಾಪನೆ ಇಲ್ಲ ಎಂದು ಹೈಕೋರ್ಟ್‌ಗೆ ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ (Shashi Kiran Shetty) ಸ್ಪಷ್ಟಪಡಿಸಿದ್ದಾರೆ.

ಬಿಬಿಎಂಪಿಯನ್ನು (BBMP) 5 ಪಾಲಿಕೆಗಳಾಗಿ ವಿಭಜಿಸಲಾಗುತ್ತಿದೆ. ಐದು ಪಾಲಿಕೆಗಳಿಗೆ ಜನವರಿ ವೇಳೆಗೆ ಚುನಾವಣೆ ಸಾಧ್ಯತೆ ಇದೆ. ಅಲ್ಲಿಯ ವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ. ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿ ಮುಂದೂಡಲಾಗಿದೆ ಎಂದು ಎಜಿ ತಿಳಿಸಿದ್ದಾರೆ. ಇದನ್ನೂ ಓದಿ: ಗ್ರೇಟರ್‌ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ ಸೇರಿ ಹಲವು ಮಸೂದೆಗಳಿಗೆ ಸಂಪುಟ ಒಪ್ಪಿಗೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ ಯಾವಾಗ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಬಿಬಿಎಂಪಿ ಕಟ್ಟಡ ಬೈಲಾ ಉಲ್ಲಂಘನೆ ವಿಚಾರಣೆ ವೇಳೆ ಈ ಪ್ರಶ್ನೆ ಕೇಳಿತ್ತು. ಈ ಹಿನ್ನೆಲೆ ಹೈಕೋರ್ಟ್‌ಗೆ ಎಜಿ ಶಶಿಕಿರಣ್‌ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು ಮಹಾನಗರ ಪಾಲಿಕೆಯನ್ನು ಐದು ಪಾಲಿಕೆಗಳಾಗಿ ವಿಭಜಿಸಿ, ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಈಚೆಗೆ ಆದೇಶ ಹೊರಡಿಸಿತ್ತು. ಇದನ್ನೂ ಓದಿ: ʻಬಿಬಿಎಂಪಿʼ ಹೆಸರು ಇತಿಹಾಸ ಪುಟಕ್ಕೆ – ಮೇ 15ರಿಂದ ʻಗ್ರೇಟರ್‌ ಬೆಂಗಳೂರುʼ ಆಡಳಿತ ಜಾರಿ

Share This Article