ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಆ್ಯಕ್ಟಿವ್ ಆಯ್ತಾ ಇರಾನಿ ಗ್ಯಾಂಗ್?

Public TV
2 Min Read

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೆ ಇರಾನಿ ಗ್ಯಾಂಗ್ ಆ್ಯಕ್ಟಿವ್ ಆಗಿದ್ದು, ಒಂದು ವಾರದ ಅಂತರದಲ್ಲಿಯೇ ಎರಡು ಸರಗಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ. ಬೈಕ್‍ನಲ್ಲಿ ಬರುವ ಖದೀಮರು ವೃದ್ಧ ಮಹಿಳೆಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದಾರೆ.

ಬೆಳಗಾವಿ ನಗರದ ಹೊರವಲಯ ಗಣೇಶಪುರದಲ್ಲಿ ಸಂಬಂಧಿಕರ ಮದುವೆಗೆ ಹೊರಟಿದ್ದ ವೃದ್ಧ ದಂಪತಿಯನ್ನ ಪೊಲೀಸರೆಂದು ಹೇಳಿ ಯಾಮಾರಿಸಿ 50 ಗ್ರಾಂ ಚಿನ್ನಾಭರಣಗಳನ್ನು ತೆಗೆದುಕೊಂಡು ಕಳ್ಳರು ಪರಾರಿ ಆಗಿದ್ದಾರೆ. ಈ ಕುರಿತು ವೃದ್ಧರು ಪೊಲೀಸರಿಗೆ ದೂರು ಕೊಟ್ಟಿದ್ದು, ಪ್ರಸ್ತುತ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಕಾಲ ಕುತ್ತಿಗೆಯಲ್ಲಿ ಟೈರ್ ಸಿಕ್ಕಿಸಿಕೊಂಡಿದ್ದ ಮೊಸಳೆಗೆ ಕೊನೆಗೂ ಸಿಕ್ತು ಮುಕ್ತಿ!

ಪ್ರಕರಣ ಹಿನ್ನೆಲೆ:
ಸೋದರಸಂಬಂಧಿ ಮದುವೆಗೆ ಪತ್ನಿ ಜೊತೆಗೆ ಹೊರಟಿದ್ದ ಗಣಪತ್ ಪಾಟೀಲ್ ಅವರನ್ನು ಪೊಲೀಸರೆಂದು ಹೇಳಿಕೊಂಡು ಬಂದ ಖದೀಮರು ತಡೆದಿದ್ದಾರೆ. ಈ ವೇಳೆ ತಾನು ಪೊಲೀಸ್ ವಿಸಲ್ ಹಾಕ್ತಿದ್ರೂ ಬೈಕ್ ಏಕೆ ನಿಲ್ಲಿಸುತ್ತಿಲ್ಲ ಎಂದು ಅವಾಜ್ ಹಾಕಿದ್ದಾರೆ. ಬಳಿಕ ನಿಮ್ಮ ದ್ವಿಚಕ್ರವಾಹನದಲ್ಲಿ ಗಾಂಜಾ, ಅಫೀಮು ಸಾಗಿಸುತ್ತಿದ್ದೀರಿ ಅಂತಾ ನಮಗೆ ಮಾಹಿತಿ ಇದೆ ಅಂತಾ ಚೆಕಿಂಗ್ ಮಾಡಿದ್ದಾರೆ.

ಬಳಿಕ ವಾಹನ ತಪಾಸಣೆ ನಡೆಸಿದಾಗ ಮದುವೆಗೆ ಹೊರಟಿದ್ದೇವೆ ಎಂದು ವೃದ್ಧ ದಂಪತಿ ಆಮಂತ್ರಣ ಪತ್ರಿಕೆಯನ್ನು ತೋರಿಸಿದ್ದಾರೆ. ಈ ವೇಳೆ ಪಕ್ಕದಲ್ಲಿದ್ದ ವೃದ್ಧೆ ಬಂಗಾರ ಆಭರಣಗಳನ್ನು ಹಾಕಿಕೊಂಡಿದ್ದನ್ನು ಗಮನಿಸಿದ್ದಾರೆ. ಈ ಮಾರ್ಗದಲ್ಲಿ ಕಳ್ಳತನ ಪ್ರಕರಣ ಹೆಚ್ಚಳವಾಗಿದೆ. ಹೀಗಾಗಿ ಬಂಗಾರದ ಆಭರಣಗಳನ್ನು ಹಾಕಿಕೊಂಡು ಹೋಗದಂತೆ ಎಚ್ಚರಿಕೆ ನೀಡಿದ್ದಾರೆ.

ಬಳಿಕ ಆಭರಣಗಳನ್ನು ಒಂದು ಕೈವಸ್ತ್ರದಲ್ಲಿ ಕಟ್ಟಿ ಸ್ಕೂಟಿಯಲ್ಲಿ ಇಡುವಂತೆ ಹೇಳಿದ್ದಾರೆ. ಇದಾದನಂತರ ಕೈವಸ್ತ್ರದಲ್ಲಿ ಕಟ್ಟಿದ್ದ ಬಂಗಾರದ ಆಭರಣಗಳನ್ನು ತೆಗೆದುಕೊಂಡು ಬೈಕ್ ಡಿಕ್ಕಿಯಲ್ಲಿ ಇಟ್ಟಂತೆ ಮಾಡಿದ್ದಾರೆ. ಆದರೆ ಆ ಐದು ತೊಲೆ ಬಂಗಾರದ ಆಭರಣಗಳು ಎಸ್ಕೇಪ್ ಮಾಡಿಕೊಂಡು ಪರಾರಿ ಆಗಿದ್ದಾರೆ. ಈ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

ಮತ್ತೊಂದೆಡೆ ಇಂದು ಬೆಳ್ಳಂಬೆಳಗ್ಗೆ ಮಹಾಂತೇಶ್ ನಗರದ ಎಸ್‍ಬಿಐ ಬ್ಯಾಂಕ್ ಬಳಿ ಹಾಲು ತರಲು ಹೋಗಿದ್ದ, ವೃದ್ಧೆ ಕವಿತಾ ಡೊಳ್ಳಿ(60) ಕೊರಳಲ್ಲಿದ್ದ 20ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣದ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *