ಬಾವಲಿ, ಮೊಲದಿಂದ ಹರಡಲ್ಲ ಜ್ವರ – ನಿಪಾ ಹಿಂದಿನ ಕಾರಣ ಇನ್ನಷ್ಟು ನಿಗೂಢ

Public TV
1 Min Read

ಬೆಂಗಳೂರು: ಬಾವಲಿ, ಕೋಳಿಯಿಂದ ಮಾತ್ರವಲ್ಲ ಇದೀಗ ಮೊಲದಿಂದಲೂ ನಿಪಾ ಜ್ವರ ಹರಡಲ್ಲ ಎನ್ನುವುದು ಸಾಬೀತಾಗಿದೆ.

ದೇಶಾದ್ಯಂತ ನಿಪಾ ಸೋಂಕು ಬಗ್ಗೆ ಸುದ್ದಿಯಾಗುತ್ತಿದ್ದಂತೆಯೇ ಬಾವಲಿ ಕಚ್ಚಿದ್ದ ಹಣ್ಣುಗಳ ಪರೀಕ್ಷೆ ವೇಳೆ ನೆಗೆಟಿವ್ ಬಂದಿದೆ. ಪ್ರಾಣಿಗಳಿಂದ ಹರಡುವ ರೋಗ ಸಂಬಂಧಿತ ರಾಷ್ಟ್ರೀಯ ಸಂಸ್ಥೆಯ ಪ್ರಯೋಗಾಲಯಕ್ಕೆ ಮಾದರಿಗಳನ್ನು ಕಳುಹಿಸಿಕೊಡಲಾಗಿತ್ತು.

ಮೊಲಗಳು ತಿಂದಿದ್ದ ಹಣ್ಣಿನ ಮಾದರಿಯನ್ನು ಕಳುಹಿಸಿಕೊಡಲಾಗಿತ್ತು. ಅದೂ ನೆಗೆಟಿವ್ ತೋರಿಸಿದೆ. ಇದು ಪ್ರಯೋಗಾಲಯಕ್ಕೆ ಕುಳುಹಿಸಿಕೊಡಲಾದ ಎರಡನೇ ಮಾದರಿ. ಈ ಹಿಂದೆ ಹಂದಿ, ಮೇಕೆ, ಜಾನುವಾರಗಳ ಮಾದರಿಗಳನ್ನು ಕಳುಹಿಸಿಕೊಡಲಾಗಿತ್ತು. ಆದ್ರೆ ಅದ್ಯಾವುದರಿಂದಲೂ ನಿಪಾ ವೈಎಸ್ ಹರಡಲ್ಲ ಅಂತ ವರದಿಯಾಗಿತ್ತು.

ಈ ಹಿಂದೆ ಮಧ್ಯ ಪ್ರದೇಶ ರಾಜ್ಯದ ಭೋಪಾಲ ನಗರದ `ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ ಲ್ಯಾಬೊರೆಟರಿ’ ನಿಪಾ ವೈರಸ್ ಬಾವಲಿಗಳಿಂದ ಬರಲ್ಲ ಎಂದು ಸ್ಪಷ್ಟಪಡಿಸಿತ್ತು. ಕೇರಳದಿಂದ ಒಟ್ಟು ಸ್ಯಾಂಪಲ್ ರೂಪದಲ್ಲಿ 21 ಬಾವಲಿ ಮತ್ತು ಹಂದಿಗಳನ್ನು ಭೋಪಾಲ್ ನ ಲ್ಯಾಬೊರೇಟರಿಗೆ ಕಳುಹಿಸಿಕೊಡಲಾಗಿತ್ತು. ಈ ಸ್ಯಾಂಪಲ್‍ಗಳ ವರದಿ ಬಂದಿದ್ದು, ಎಲ್ಲ ಪ್ರಾಣಿಗಳಲ್ಲಿ ನಿಪಾ ವೈರಸ್ ಲಕ್ಷಣಗಳು ಕಂಡುಬಂದಿಲ್ಲ.

ಕೇಂದ್ರ ಪ್ರಾಣಿ-ಪಶು ಇಲಾಖೆಯ ಕಮಿಷನರ್ ಎಸ್‍ಪಿ ಸುರೇಶ್, ನಿಪಾ ವೈರಸ್ ನಿಂದ ಸಾವನ್ನಪ್ಪಿದವರ ಕುಟುಂಬಗಳ ಸುತ್ತಲಿನ ಪ್ರಾಣಿಗಳನ್ನು ಪರೀಕ್ಷೆಗೆ ಒಳಪಡಿಸಿದ್ರು. ಆದ್ರೆ ಅಲ್ಲಿಯ ಪ್ರಾಣಿಗಳಲ್ಲಿ ನಿಪಾ ವೈರಸ್ ಲಕ್ಷಣಗಳು ಕಂಡು ಬಂದಿರಲಿಲ್ಲ ಅಂತಾ ತಿಳಿಸಿದ್ರು.

ನಿಪಾ ವೈರಸ್ ದಾಳಿಗೆ ತುತ್ತಾಗಿರುವ ಕೇರಳದ ಪೆರಂಬರಾ ಗ್ರಾಮದಿಂದ ಕೆಲ ಪ್ರಾಣಿಗಳನ್ನು ಸ್ಯಾಂಪಲ್ ರೂಪದಲ್ಲಿ ತೆಗೆದುಕೊಂಡು ಭೋಪಾಲ್‍ನ ಲ್ಯಾಬೋರೆಟರಿಗೆ ಕಳುಹಿಸಲಾಗಿತ್ತು. ಭೋಪಾಲ್ ಲ್ಯಾಬೊರೇಟರಿ ವರದಿಯ ಪ್ರಕಾರ, ನಿಪಾ ವೈರಸ್ ಬಾವಲಿಗಳಿಂದ ಬಂದಿಲ್ಲ ಅಂತಾ ಹೇಳಲಾಗಿತ್ತು. ಸದ್ಯ ಈ ಗೊಂದಲ ಇನ್ನು ಮುಂದುವರೆದಿದ್ದು, ಮತ್ತಷ್ಟು ನಿಪಾ ವೈರಸ್ ಪೀಡಿತ ಗ್ರಾಮಗಳಿಂದ ಪ್ರಾಣಿಗಳ ರಕ್ತವನ್ನು ಪಡೆದು ಪರೀಕ್ಷೆ ನಡೆಸಲಾಗುವುದು ಎಂದು ಲ್ಯಾಬೊರೇಟರಿ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *