ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

Public TV
1 Min Read

ಚಿಕ್ಕೋಡಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ ಎಂದು ಅಥಣಿಯಲ್ಲಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಅಚ್ಚರಿ ಹೇಳಿಕೆ ನೀಡಿದರು.

ಅಗ್ನಿಪಥ್ ಯೋಜನೆ ಕುರಿತು ಇತ್ತೀಚೆಗೆ ಹಲವು ವಿವಾದಾತ್ಮಕ ಹೇಳಿಕೆಗಳು ಕೇಳಿಬರುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸವದಿ ಅವರು, ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಕಳೆದ 30 ವರ್ಷದ ಹಿಂದೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹೆಚ್ಚುತ್ತಿರುವ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಅಗ್ನಿಪಥ್ ಒಂದು ಒಳ್ಳೆಯ ಯೋಜನೆ. ಇದನ್ನು ಮುಂದಿಟ್ಟು ಯುವಕರನ್ನು ಕಟ್ಟಿಕೊಂಡು ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮೋದಿ, ರಾಜನಾಥ್ ಸಿಂಗ್‍ಗೆ ಕರೆ ಮಾಡಿ ಬೆಂಬಲ ಕೋರಿದ ಯಶವಂತ್ ಸಿನ್ಹಾ

ಮೋದಿ ಅವರಿಗೆ ಕುಟುಂಬ, ಮಕ್ಕಳು ಇಲ್ಲ. ದೇಶದ ಒಳಿತಿಗಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಗಲು-ರಾತ್ರಿಯೆನ್ನದೆ ದೇಶದ ಸೇವೆಯಲ್ಲಿ ತೊಡಗಿದ್ದಾರೆ ಎಂದು ಪ್ರಶಂಸಿಸಿದರು.

Live Tv

Share This Article
Leave a Comment

Leave a Reply

Your email address will not be published. Required fields are marked *