ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್‍ಗೆ ಕರೆ- 150ಕ್ಕೂ ಅಧಿಕ ಯುವಕರು ಪೊಲೀಸರು ವಶಕ್ಕೆ

Public TV
1 Min Read

ಬೆಳಗಾವಿ: ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈವರೆಗೆ 150ಕ್ಕೂ ಅಧಿಕ ಯುವಕರನ್ನು ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದಿದ್ದಾರೆ.

ಬೆಳಗಾವಿ ನಗರದ ವಿವಿಧೆಡೆ ಗುಂಪು ಸೇರಿ ನಿಂತಿದ್ದ 150ಕ್ಕೂ ಯುವಕರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅದರಲ್ಲಿ ಪ್ರಮುಖವಾಗಿ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಿಂದ ಆಗಮಿಸಿದ್ದ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಅಶೋಕ ವೃತ್ತ, ಚೆನ್ನಮ್ಮ ವೃತ್ತ ಹಾಗೂ ಮಾರ್ಕೆಟ್ ಪೊಲೀಸ್ ಠಾಣೆ, ಬಸ್ ಸ್ಟ್ಯಾಂಡ್ ರಸ್ತೆ ಸೇರಿದಂತೆ ವಿವಿಧೆಡೆ ಗುಂಪು ಕಟ್ಟಿಕೊಂಡು ನಿಂತಿದ್ದ ಯುವಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇತ್ತ ವಶಕ್ಕೆ ಪಡೆದುಕೊಂಡ ಯುವಕರನ್ನು ಬೆಳಗಾವಿಯ ಕಂಗ್ರಾಳಿಯ ಕೆಎಸ್‍ಆರ್‌ಪಿ ತರಬೇತಿ ಕೇಂದ್ರಕ್ಕೆ ಪೊಲೀಸರು ಕರೆದೊಯ್ದಿದ್ದಾರೆ.

ಸ್ವತಃ ಫೀಲ್ಡಿಗಿಳಿದ ಕಮಿಷನರ್ ಡಾ.ಬೋರಲಿಂಗಯ್ಯ: ಬೆಳಗಾವಿಯಲ್ಲಿ ಯುವಕರು ಬೆಳಗಾವಿ ಬಂದ್ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ ಸ್ವತಃ ಫೀಲ್ಡಿಗಿಳಿದು, ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದು, ಬೆಳಗಾವಿ ನಗರದಲ್ಲಿ ಆಯುಕ್ತರು ಸಿಟಿ ರೌಂಡ್ಸ್ ಹೊಡೆದರು. ಇದನ್ನೂ ಓದಿ: ಅಮಿತ್ ಶಾ ಮಗ ಜಯ್ ಶಾಗೆ ಅಗ್ನಿಪಥ್ ಕೆಲಸಕ್ಕೆ ಹೋಗೋಕೆ ಹೇಳಿ: ಲಕ್ಷ್ಮೀ ಹೆಬ್ಬಾಳ್ಕರ್

ಈ ಸಂದರ್ಭದಲ್ಲಿ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಗುಂಪುಗೂಡಿ ನಿಂತಿದ್ದ ಯುವಕರನ್ನು ಆಯುಕ್ತರ ತರಾಟೆಗೆ ತೆಗೆದುಕೊಂಡರು. ಬಳಿಕ ಅಗತ್ಯ ಮಾಹಿತಿ ಇಲ್ಲದ ಇರುವ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಗ್ನಿಪಥವನ್ನು ರಾಜಕೀಯಮಯ ಮಾಡುತ್ತಿದೆ: ಬಿ.ಸಿ.ಪಾಟೀಲ್

Live Tv

Share This Article
Leave a Comment

Leave a Reply

Your email address will not be published. Required fields are marked *