‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ

Public TV
2 Min Read

ನವದೆಹಲಿ: ಅಗ್ನಿಪಥ್ ವಿರೋಧದ ನಡುವೆಯೇ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ ನೀಡಲು ನಿರ್ಧರಿಸಿದೆ.

ಅಗ್ನಿಪಥ್ ವಿರೋಧಿಸಿ ಈಗಾಗಲೇ ದೇಶದ್ಯಾಂತ ಪ್ರತಿಭಟನೆ ನಡೆಯುತ್ತಿದೆ. ಉತ್ತರಪ್ರದೇಶ, ಬಿಹಾರ ಹಾಗೂ ತೆಲಂಗಾಣಗಳಲ್ಲಿ ಪ್ರತಿಭಟನೆಯೂ ಹಿಂಸಾತ್ಮಕಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲು ಬೋಗಿಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಕೇಂದ್ರ ಗೃಹ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಇಲಾಖೆ, ಅಗ್ನಿವೀರರಿಗೆ 10% ಮೀಸಲಾತಿ ನೀಡಿದ್ದು, CAPF ಮತ್ತು ಅಸ್ಸಾಂ ರೈಫಲ್ಸ್ ನೇಮಕಾತಿಯಲ್ಲಿ ಮೀಸಲಾತಿ ನೀಡಲಾಗಿದೆ ಎಂದು ತಿಳಿಸಿದೆ.

ಅಷ್ಟೇ ಅಲ್ಲದೇ ಎರಡು ಪಡೆಗಳ ನೇಮಕಾತಿಯಲ್ಲಿ ಅಗ್ನಿವೀರರಿಗೆ ಗರಿಷ್ಠ ವಯಸ್ಸಿನ ಮಿತಿಯನ್ನು 3 ವರ್ಷಕ್ಕೆ ಸಡಿಲಿಕೆ ಮಾಡಿದ್ದು, ಅಗ್ನಿವೀರ್ ಮೊದಲ ಬ್ಯಾಚ್ ನೇಮಕಾತಿಗೆ 5 ವರ್ಷ ಸಡಿಲಿಸಿದೆ. ಇದನ್ನೂ ಓದಿ: ಲಾಲೂ ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್

ಅಗ್ನಿಪಥ್‍ಗೆ ಯಾಕಿಷ್ಟು ವಿರೋಧ?: ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಮತ್ತು ದೇಶದ ಮಿಲಿಟರಿಯಲ್ಲಿ ಸೇವೆ ಮಾಡಲು ಯುವ ಜನರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಅಗ್ನಿಪಥ್ ಯೋಜನೆ ಆರಂಭಿಸಲಾಗಿದೆ ಎಂದು ಸರ್ಕಾರ ತಿಳಿಸಿತ್ತು. ಆದರೆ ಇದು ತಾತ್ಕಾಲಿಕ ಪರಿಹಾರ ಎನ್ನುವುದು ವಿರೋಧಿಸುತ್ತಿರುವವರ ವಾದವಾಗಿದೆ. ಇದನ್ನೂ ಓದಿ: ಇಸ್ರೇಲ್ ಮಾದರಿಯ ʼಅಗ್ನಿಪಥ್ʼ- ಏನಿದು ಯೋಜನೆ, ಯಾಕಿಷ್ಟು ವಿರೋಧ?

4 ವರ್ಷದ ಬಳಿಕ ವಾಟ್ ನೆಕ್ಸ್ಟ್ ಎನ್ನುವ ಪ್ರಶ್ನೆಯೂ ಮೂಡುತ್ತದೆ. ಇದರ ಬದಲು ಬೇರೆ ವಲಯಕ್ಕೆ ಸೀಮಿತವಾಗುವಂತೆ ಉದ್ಯೋಗಾವಕಾಶವನ್ನು ಮಾಡಬಹುದು. 4 ವರ್ಷದ ಅವಧಿಗೆ ಕೆಲಸ ಮಾಡುವ ಉದ್ದೇಶ ಇದ್ದರೆ ಇವರಲ್ಲಿ ದೇಶ ಸೇವೆಯ ಮನೋಭಾವ ಬರಲ್ಲ ಎನ್ನುವ ವಾದದ ಮೇಲೆ ವಿರೋಧ ವ್ಯಕ್ತವಾಗುತ್ತಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *