ಮೋದಿ ಭೇಟಿಗೂ ಮುನ್ನ ನಕ್ಸಲರಿಂದ ಮೂವರು ಗ್ರಾಮಸ್ಥರ ಹತ್ಯೆ

Public TV
1 Min Read

ರಾಯ್ಪುರ್: ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಮಾವೋವಾದಿಗಳು (Maoist) ಮೂವರು ಗ್ರಾಮಸ್ಥರನ್ನು ಹತ್ಯೆ ಮಾಡಿದ ಘಟನೆ ಛತ್ತೀಸ್‍ಗಢದ (Chhattisgarh) ಬಸ್ತಾರ್ ಪ್ರದೇಶದಲ್ಲಿ ನಡೆದಿದೆ.

ಮೂವರು ಗ್ರಾಮಸ್ಥರು ಪೊಲೀಸ್ ಮಾಹಿತಿದಾರರೆಂದು ಭಾವಿಸಿ ನಕ್ಸಲರು ಈ ಕೃತ್ಯ ಎಸಗಿದ್ದಾರೆ. ಮಹಾರಾಷ್ಟ್ರದ ಗಡಿಯಲ್ಲಿರುವ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ನಕ್ಸಲ್ ಪೀಡಿತ ಪ್ರದೇಶಕ್ಕೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಈ ಘಟನೆ ನಡೆದಿದ್ದು ಆತಂಕಕ್ಕೆ ಸಹ ಕಾರಣವಾಗಿದೆ. ಇದನ್ನೂ ಓದಿ: ಹಾಸನ ಕಾಲೇಜಿನ 5ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೃತರನ್ನು ಕುಳ್ಳೆ ಕಟ್ಲಾಮಿ (35) ಮನೋಜ್ ಕೊವಾಚಿ (22) ಮತ್ತು ದುಗ್ಗೆ ಕೊವಾಚಿ (27) ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಕರಪತ್ರಗಳನ್ನು ಎರಚಲಾಗಿದ್ದು, ಈ ಮೂವರು ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಮಾಡಲಾದ ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು. ಇದಕ್ಕಾಗಿ ಕೊಲ್ಲಲಾಗಿದೆ ಎಂದು ಬರೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ಇಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ಇದಕ್ಕಾಗಿ ಛತ್ತೀಸ್‍ಗಢದ ಕಂಕೇರ್‌ನಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಇದನ್ನೂ ಓದಿ: ರೈತರ ಮೇಲೆ ಗ್ಯಾರಂಟಿ ಬರೆ – ಟಿಸಿ ಸಹಿತ ‌ವಿದ್ಯುತ್ ಸಂಪರ್ಕ ಯೋಜನೆ ರದ್ದು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್