ರಾಮಮಂದಿರಕ್ಕೆ ದೇಣಿಗೆ ಸಂಗ್ರಹ ಹೆಸರಿನಲ್ಲಿ ವಂಚನೆ – ಎಚ್ಚರಿಕೆಯಿಂದ ಇರುವಂತೆ ಭಕ್ತರಿಗೆ ಸಲಹೆ

Public TV
2 Min Read

ನವದೆಹಲಿ: ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾರ್ಯಕ್ರಮ ಸಮೀಪಿಸುತ್ತಿದ್ದಂತೆ ದೇವಾಲಯದ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ಆಘಾತಕಾರಿ ದಂಧೆ ಬೆಳಕಿಗೆ ಬಂದಿದೆ.

ಸೈಬರ್ ಕ್ರಿಮಿನಲ್‌ಗಳು ದೇವಸ್ಥಾನದ ಹೆಸರಿನಲ್ಲಿ ದೇಣಿಗೆ ಪಡೆಯಲು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಎಚ್ಚರಿಸಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ರಾಮಮಂದಿರ ದೇವಾಲಯಕ್ಕಾಗಿ ದೇಣಿಗೆ ನೀಡುವಂತೆ ಸಂದೇಶ ಕಳುಹಿಸಲಾಗಿದೆ. ಇದನ್ನೂ ಓದಿ: Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ಈ ವಿಷಯವನ್ನು ದೆಹಲಿ ಮತ್ತು ಉತ್ತರ ಪ್ರದೇಶದ ಗೃಹ ಸಚಿವಾಲಯ ಮತ್ತು ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಮಂದಿರದ ನಿರ್ಮಾಣದ ಉಸ್ತುವಾರಿ ವಹಿಸಿರುವ ಟ್ರಸ್ಟ್ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ ಎಂದು ಒತ್ತಿ ಹೇಳಿದ್ದಾರೆ.

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ನಿಧಿ ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಾನು ಗೃಹ ಸಚಿವಾಲಯ, ಉತ್ತರ ಪ್ರದೇಶ ಡಿಜಿಪಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಜನರು ಇಂತಹ ವಂಚನೆಗಳಿಗೆ ಬಲಿಯಾಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಯಂದು ಪ್ರತಿಯೊಬ್ಬರೂ ಮನೆಯಲ್ಲಿ ದೀಪ ಬೆಳಗಿಸಿ: ಮೋದಿ ಕರೆ

ದೇವಸ್ಥಾನಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಮತ್ತು ದೂರವಾಣಿ ಕರೆಗಳು ಬಂದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಕರೆ ಸ್ವೀಕರಿಸಿದ ವ್ಯಕ್ತಿಗಳಲ್ಲಿ ಒಬ್ಬರು, VHP ಕಾರ್ಯಕರ್ತರೊಂದಿಗೆ ಸಂಖ್ಯೆಯನ್ನು ಹಂಚಿಕೊಂಡಿದ್ದಾರೆ.

ದೇಣಿಗೆ ನೀಡುವವರಂತೆ ವಂಚಕರಿಗೆ ಕರೆ ಮಾಡಿ ಅದರ ಆಡಿಯೋ ರೆಕಾರ್ಡ್‌ನ್ನು ವಿಹೆಚ್‌ಪಿ ಕಾರ್ಯಕರ್ತರೊಬ್ಬರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ವಂಚಕ, ದಾನಿಗಳ ಹೆಸರುಗಳು ಮತ್ತು ಸಂಪರ್ಕ ವಿವರಗಳನ್ನು ನಮೂದಿಸಲಾಗುತ್ತಿದೆ. ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡ ನಂತರ ಅವರನ್ನು ರಾಮ ಮಂದಿರಕ್ಕೆ ಆಹ್ವಾನಿಸಲಾಗುವುದು ಎಂದು ಹೇಳಿದ್ದಾನೆ. ಇದನ್ನೂ ಓದಿ: ಜ.14 ರಿಂದ ದೇಶದ ಎಲ್ಲಾ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ: ಮೋದಿ ಕರೆ

ಹಿಂದೂ ಮತ್ತು ಮುಸ್ಲಿಂ ಸಮಾಜಗಳ ನಡುವೆ ಸಂಘರ್ಷ ಪ್ರಾರಂಭವಾಗಿದೆ. ಮುಸ್ಲಿಮರು ಮಂದಿರ ನಿರ್ಮಾಣವನ್ನು ಮುಂದುವರಿಸಲು ಬಿಡುತ್ತಿಲ್ಲ. ಹಾಗಾಗಿ ದೇಗುಲ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುತ್ತಿದ್ದೇವೆ ವಂಚಕ ಹೇಳಿಕೊಂಡಿದ್ದಾನೆ.

Share This Article