ಹುಬ್ಬಳ್ಳಿಯಿಂದ ಅಹಮದಾಬಾದ್, ಚೆನ್ನೈಗೆ ವಿಮಾನ: ಕೇಂದ್ರ ಸಚಿವರ ಸಮಾಲೋಚನೆ

Public TV
1 Min Read

– ವಿಮಾನಯಾನ ಸಚಿವರ ಜೊತೆ ಪ್ರಹ್ಲಾದ್ ಜೋಶಿ ಚರ್ಚೆ

ನವದೆಹಲಿ: ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ (Hubbali) ಅಹಮದಾಬಾದ್ (Ahmadabad) ಹಾಗೂ ಚೆನ್ನೈಗೆ (Chennai) ವಿಮಾನಯಾನ ಸೌಲಭ್ಯ ಕಲ್ಪಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ನಾಗರಿಕ ವಿಮಾನಯಾನ ಸಚಿವ ರಾಮ್‌ಮೋಹನ್ ನಾಯ್ಡು (Rammohan Naidu) ಅವರ ಗಮನ ಸೆಳೆದಿದ್ದಾರೆ.

ರಾಷ್ಟç ರಾಜಧಾನಿಯ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಇಂದು (ಅ.17) ಸಚಿವ ರಾಮ್‌ಮೋಹನ್ ನಾಯ್ದು ಅವರನ್ನು ಭೇಟಿ ಮಾಡಿ ಚರ್ಚಿಸಿದರು.ಇದನ್ನೂ ಓದಿ: ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ದಾಳಿ – ಮೃತರ ಸಂಖ್ಯೆ 16ಕ್ಕೆ ಏರಿಕೆ

ಹುಬ್ಬಳ್ಳಿಯಿಂದ ಅಹಮದಾಬಾದ್ ನಡುವೆ ವಿಮಾನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಜೊತೆಗೆ ಹುಬ್ಬಳ್ಳಿಯಿಂದ ಚೆನ್ನೈಗೆ ಇರುವ ವಿಮಾನ ಸಂಪರ್ಕವನ್ನು ಸ್ಥಗಿತಗೊಳಿಸುವುದು ಬೇಡ. ಈ ವಿಮಾನಯಾನವನ್ನು ಮುಂದುವರೆಸುವಂತೆ ಮನವಿ ಮಾಡಿದರು.

ಛೋಟಾ ಮುಂಬೈ ಎಂದೇ ಹೆಸರಾದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಅನೇಕ ಉದ್ಯಮಿಗಳ ಸಂಪರ್ಕವಿದೆ. ಅಹಮದಾಬಾದ್ ಮತ್ತು ಚೆನ್ನೈ ನಗರಗಳಿಗೆ ವಿಮಾನ ಸಾರಿಗೆ ಸೌಲಭ್ಯಕ್ಕೆ ಹೆಚ್ಚು ಆದ್ಯತೆ ನೀಡಿದ್ದಲ್ಲಿ ಉದ್ಯಮಿಗಳ ತ್ವರಿತ ಸಂಚಾರ ಮತ್ತು ನಿಕಟ ಸಂಪರ್ಕಕ್ಕೆ ಅನುಕೂಲವಾಗುತ್ತದೆ. ಹುಬ್ಬಳ್ಳಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹ ಗುರುತಿಸಿಕೊಳ್ಳುತ್ತಿದೆ. ಅಂತೆಯೇ ರೈಲ್ವೇ ನಿಲ್ದಾಣದ ಜೊತೆ ವಿಮಾನ ನಿಲ್ದಾಣವೂ ಅಂತಾರಾಷ್ಟ್ರೀಯ ಮೆರುಗಿನಲ್ಲಿ ಅಭಿವೃದ್ಧಿ ಹೊಂದುತ್ತಿದೆ ಎಂದು ಮಾತುಕತೆ ನಡೆಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದ ವಿಶಾಲವಾದ ಪ್ರದೇಶದಲ್ಲಿ ಹೊಸ ಟರ್ಮಿನಲ್ ಸಹ ನಿರ್ಮಾಣವಾಗುತ್ತಿದೆ. ಪ್ರಯಾಣಿಕರಿಗೆ ಮತ್ತು ವಿಮಾನಗಳಿಗೆ ಅಗತ್ಯ ಮೂಲ ಸೌಲಭ್ಯ ಇಲ್ಲಿದ್ದು, ಚೆನ್ನೈ ಸಂಪರ್ಕದ ವಿಮಾನಯಾನ ಸ್ಥಗಿತಗೊಳಿಸದೇ ಅದನ್ನು ಮುಂದುವರೆಸಿ ಎಂದು ಸಮಾಲೋಚನೆ ನಡೆಸಿದರು.ಇದನ್ನೂ ಓದಿ: CJI ಹುದ್ದೆಗೆ ನ್ಯಾ. ಸಂಜೀವ್ ಖನ್ನಾ ಹೆಸರು ಶಿಫಾರಸು

Share This Article