ಗಾಂಧೀನಗರ: ಅಹಮದಾಬಾದ್‌ನಿಂದ (Ahmedabad) ದಿಯುಗೆ (Diu) ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕ್ ಆಫ್ ಆಗುವಾಗ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿಮಾನಯಾನವನ್ನು ಸ್ಥಗಿತಗೊಳಿಸಲಾಯಿತು.
ಸರ್ದಾರ್ ವಲ್ಲಭಬಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳಿಗ್ಗೆ 11 ಗಂಟೆಗೆ ಇಂಡಿಗೋ ವಿಮಾನ 6ಇ7966 60 ಪ್ರಯಾಣಿಕರನ್ನು ಹೊತ್ತು ದಿಯುಗೆ ಹೊರಟಿತ್ತು. ಆದರೆ ಟೇಕ್ ಆಫ್ ಆಗುವಾಗ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನಯಾನವನ್ನು ರದ್ದುಗೊಳಿಸಲಾಗಿದೆ.ಇದನ್ನೂ ಓದಿ: ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ
ಟೇಕ್ ಆಫ್ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಮೇಡೇ ಘೋಷಿಸಿದ ಪೈಲಟ್ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದರು. ವಿಮಾನದ ಕಾರ್ಯಾಚರಣೆಯನ್ನು ಪುನರಾರಂಭಿಸುವ ಮುನ್ನ ವಿಮಾನವನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸೋಮವಾರ (ಜು.21) ಗೋವಾದಿಂದ ಇಂದೋರ್‌ಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾಗಿತ್ತು. ಪರಿಣಾಮ ವಿಮಾನವನ್ನು ಮತ್ತೆ ಗೋವಾದಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಯಿತು.ಇದನ್ನೂ ಓದಿ: 5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ