ನವದೆಹಲಿ: ಗುಜರಾತ್‌ನ (Gujarat) ಅಹಮದಾಬಾದ್‌ನಲ್ಲಿ (Ahmedabad) ನಡೆದಿದ್ದ ಏರ್ ಇಂಡಿಯಾ (Air India) ವಿಮಾನ ದುರಂತ ಸಂಬಂಧ ಇಂದು ಎಎಐಬಿ (AAIB) 2 ಪುಟಗಳ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದೆ.
ಜೂ.12ರಂದು ಏರ್ ಇಂಡಿಯಾ ವಿಮಾನ ಪತನಗೊಂಡ ಪರಿಣಾಮ ಸ್ಥಳೀಯರು, ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು. ಅವಶೇಷಗಳನ್ನು ತೆರವುಗೊಳಿಸುವ ವೇಳೆ ಬಿಜೆ ಮೆಡಿಕಲ್ ಹಾಸ್ಟೆಲಿನ ಮೇಲ್ಛಾವಣಿಯಲ್ಲಿ ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿತ್ತು. ಇದನ್ನು ವಶಪಡಿಸಿಕೊಂಡಿದ್ದ ವಿಮಾನ ಅಪಘಾತ ತನಿಖಾ ಬ್ಯೂರೋ ತನಿಖೆ ಆರಂಭಿಸಿತ್ತು.ಇದನ್ನೂ ಓದಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಗೆ ಆ್ಯಸಿಡ್ ಎರಚಿ ತಾನೂ ಬೆಂಕಿ ಹಚ್ಚಿಕೊಂಡ ಸೋದರ ಮಾವ
ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಕ್ರ್ಯಾಶ್ ತನಿಖಾ ವಿಭಾಗದ ಅಡಿಯಲ್ಲಿ ಬರುವ ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಯೋಗಾಲಯದಲ್ಲಿ ಬ್ಲ್ಯಾಕ್ ಬಾಕ್ಸ್‌ನ ಮುಂಭಾಗದ ಕಪ್ಪು ಪೆಟ್ಟಿಗೆಯಿಂದ ಕ್ರ್ಯಾಶ್ ಪ್ರೊಟೆಕ್ಷನ್ ಮಾಡ್ಯೂಲ್‌ನ್ನು ರಿಕವರಿ ಮಾಡಿಕೊಂಡಿದ್ದರು. ಬಳಿಕ ಮೆಮೊರಿ ಮಾಡ್ಯೂಲ್‌ನಲ್ಲಿನ ಡೇಟಾವನ್ನು ಯಶಸ್ವಿಯಾಗಿ ಡೌನ್‌ಲೋಡ್ ಮಾಡಿದ್ದರು. ಸದ್ಯ ವಿಮಾನ ದುರಂತಕ್ಕೆ ಕಾರಣ ಏನು ಎಂಬುವುದರ ವರದಿ ಸಲ್ಲಿಸಿದೆ. ವಿಮಾನ ಅಪಘಾತಕ್ಕೆ ಕಾರಣ ಏನೆಂದು ಈ ವರದಿಯಲ್ಲಿ ಬಹಿರಂಗವಾಗುವ ಸಾಧ್ಯತೆಯಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಈ ತಿಂಗಳ ಕೊನೆಯ ವಾರದಲ್ಲಿ ಸಾರ್ವಜನಿಕರಿಗೆ ಈ ಕುರಿತು ಮಾಹಿತಿ ನೀಡುವ ಸಾಧ್ಯತೆಯಿದೆ.
ವಿಮಾನ ಅಪಘಾತವಾದ ಮರುದಿನವೇ ಅಂತಾರಾಷ್ಟ್ರೀಯ ಮಾನದಂಡ, ಶಿಷ್ಟಾಚಾರಗಳಿಗೆ ಅನುಗುಣವಾಗಿ ಜೂ.13ರಂದು ತನಿಖಾ ತಂಡ ರಚಿಸಲಾಗಿತ್ತು. ಎಎಐಬಿ ತಂಡವು ಜೂ.24ರಂದು ವಿಮಾನದ ಬ್ಲಾö್ಯಕ್ ಬಾಕ್ಸ್ ದಾಖಲೆ ಹೊರತೆಗೆಯುವ ಪ್ರಕ್ರಿಯೆ ಪ್ರಾರಂಭಿಸಿತ್ತು. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ ಮತ್ತು ಫ್ಲೈಟ್ ಡೇಟಾ ರೆಕಾರ್ಡರ್‌ನ ವಿಶ್ಲೇಷಣೆಯನ್ನೂ ನಡೆಸಲಾಗಿತ್ತು.
ಇನ್ನು ವಿಮಾನಯಾನ ಸಂಸ್ಥೆಯಿಂದ ನಡೆದ ಮತ್ತೊಂದು ತನಿಖೆ ಪ್ರಕಾರ, ಡಬಲ್ ಎಂಜಿನ್ ವೈಫಲ್ಯದಿಂದಾಗಿ ಬೋಯಿಂಗ್ 787 ಡ್ರೀಮ್‌ಲೈನರ್ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಿದೆ.
ಏನಿದು ಬ್ಲ್ಯಾಕ್ ಬಾಕ್ಸ್?
ವಿಮಾನದಲ್ಲಿ ಧ್ವನಿಗ್ರಹಣಕ್ಕೆ ಬಳಸಲಾಗುವ ಎರಡು ಸಾಧನಗಳನ್ನು ತಾಂತ್ರಿಕ ಭಾಷೆಯಲ್ಲಿ ಬ್ಲ್ಯಾಕ್ ಬಾಕ್ಸ್ ಎಂದು ಕರೆಯಲಾಗುತ್ತದೆ. ಬ್ಲ್ಯಾಕ್ ಬಾಕ್ಸ್ ಅನ್ನು ಫ್ಲೈಟ್ ಡೇಟಾ ರೆಕಾರ್ಡರ್ ಎಂದೂ ಕರೆಯುತ್ತಾರೆ. ಬ್ಲ್ಯಾಕ್ ಬಾಕ್ಸ್ ಹಾರಾಟದ ಸಮಯದಲ್ಲಿನ ವಿಮಾನದ ಎಲ್ಲಾ ಚಟುವಟಿಕೆಗಳನ್ನು ದಾಖಲಿಸುತ್ತದೆ. ಎಲ್ಲ ರೀತಿಯ ವಿಮಾನಗಳಲ್ಲಿ ಬ್ಲ್ಯಾಕ್ ಬಾಕ್ಸ್ ಅನ್ನು ಕಡ್ಡಾಯವಾಗಿ ಅಳವಡಿಸಲಾಗುತ್ತದೆ.
ವಿಮಾನ ಅಪಘಾತವಾದಾಗ ಅದಕ್ಕೆ ಕಾರಣ ಪತ್ತೆ ಹಚ್ಚಲು ನೆರವಾಗಲೆಂದೇ 5 ಕೆಜಿ ತೂಕದ ರೆಕಾರ್ಡಿಂಗ್ ಸಾಧನವನ್ನು ಅಳವಡಿಸಲಾಗುತ್ತದೆ. ಭದ್ರತೆಯ ದೃಷ್ಟಿಯಿಂದ ಕಪ್ಪು ಪೆಟ್ಟಿಗೆಯನ್ನು ಸಾಮಾನ್ಯವಾಗಿ ವಿಮಾನದ ಹಿಂಭಾಗದಲ್ಲಿ ಇಡಲಾಗುತ್ತದೆ. ಈ ಪೆಟ್ಟಿಗೆಯನ್ನು ಟೈಟಾನಿಯಂ ಲೋಹದಿಂದ ಮಾಡಲಾಗಿದ್ದು, ಟೈಟಾನಿಯಂ ಪೆಟ್ಟಿಗೆಯಲ್ಲಿ ಸುತ್ತುವರಿಯಲಾಗಿದೆ. ಇದು ಎಷ್ಟು ಶಕ್ತಿಶಾಲಿಯೆಂದರೆ ಸಮುದ್ರದಲ್ಲಿ ಬಿದ್ದರೆ, ಸುತ್ತಲೂ ಬೆಂಕಿ ಇದ್ದರೂ ಅಥವಾ ಎತ್ತರದಿಂದ ಬಿದ್ದರೂ ಯಾವುದೇ ಹಾನಿಯಾಗುವುದಿಲ್ಲ.ಇದನ್ನೂ ಓದಿ: ಹರಿಯಾಣದ ರೈಲಿನಲ್ಲಿ ಗ್ಯಾಂಗ್ ರೇಪ್ - ಅತ್ಯಾಚಾರ ಬಳಿಕ ರೈಲ್ವೆ ಹಳಿಗಳ ಮೇಲೆ ಮಹಿಳೆ ಎಸೆದ ಪಾಪಿಗಳು
ಅಪಘಾತದ ಸಂಭವಿಸಿದಾಗ ಹಿಂಭಾಗದಲ್ಲಿ ಅದರಲ್ಲೂ ಬಾಲದ ಕಡೆ ಪೆಟ್ಟು ಬೀಳುವುದು ಕಡಿಮೆ. ಯಾಕೆಂದರೆ ಬಾಲ ಎತ್ತರದಲ್ಲಿರುತ್ತದೆ. ಈ ಕಾರಣಕ್ಕೆ ಬಾಲದಲ್ಲಿ ಅಳವಡಿಸಲಾಗಿರುತ್ತದೆ. ವಿಮಾನದ ಎಂಜಿನ್‌ಗೆ ಜೋಡಿಸಲಾದ ಜನರೇಟರ್ ನಿಂದ ಬ್ಲ್ಯಾಕ್ ಬಾಕ್ಸ್ ಚಾರ್ಜ್ ಆಗುತ್ತದೆ.
ಎರಡು ಪ್ರತ್ಯೇಕ ಪೆಟ್ಟಿಗೆಗಳಿವೆ
1. ಫ್ಲೈಟ್ ಡೇಟಾ ರೆಕಾರ್ಡರ್: ಈ ಪೆಟ್ಟಿಗೆಯಲ್ಲಿ ನಿರ್ದೇಶನ, ಎತ್ತರ, ಇಂಧನ, ವೇಗ, ಕ್ಯಾಬಿನ್ ತಾಪಮಾನ ಇತ್ಯಾದಿಗಳ ಬಗ್ಗೆ ಮಾಹಿತಿ ಇರುತ್ತದೆ. ಕೊನೆಯ 25 ಗಂಟೆಗಳ ಕಾಲದ ಒಟ್ಟು 88 ಮಾಹಿತಿಗಳ ಡೇಟಾವನ್ನು ಸಂಗ್ರಹಿಸುತ್ತದೆ. 1,100 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ 1 ಗಂಟೆ, 260 ಡಿಗ್ರಿ ಸೆಲ್ಶಿಯಸ್ ತಾಪಮಾನ ಇದ್ದರೆ ಇದ್ದರೆ 10 ಗಂಟೆಗಳ ಕಾಲ ಡೇಟಾವನ್ನು ತಡೆದಿಟ್ಟುಕೊಳ್ಳಬಹುದು. ತನಿಖಾಧಿಕಾರಿಗಳಿಗೆ ಸುಲಭವಾಗಿ ಗುರುತಿಸಲು ಕೆಂಪು ಅಥವಾ ಗುಲಾಬಿ ಬಣ್ಣದಲ್ಲಿ ಈ ಪೆಟ್ಟಿಗೆಯನ್ನು ಮಾಡಲಾಗುತ್ತದೆ.
2. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್: ಈ ಬಾಕ್ಸ್ ಕೊನೆಯ ಎರಡು ಗಂಟೆಗಳ ವಿಮಾನದ ಧ್ವನಿಯನ್ನು ದಾಖಲಿಸುತ್ತದೆ. ಯಾವುದೇ ಅಪಘಾತ ಸಂಭವಿಸುವ ಮೊದಲು ಎಂಜಿನ್, ತುರ್ತು ಎಚ್ಚರಿಕೆ, ಕ್ಯಾಬಿನ್ ಮತ್ತು ಕಾಕ್‌ಪಿಟ್ ಧ್ವನಿಯನ್ನು ದಾಖಲಿಸುತ್ತದೆ.
ಹೇಗೆ ಕಾರ್ಯನಿರ್ವಹಿಸುತ್ತದೆ?
ಯಾವುದೇ ವಿದ್ಯುತ್ ಇಲ್ಲದೆ 30 ದಿನಗಳವರೆಗೆ ಬ್ಲಾಕ್ ಬಾಕ್ಸ್ ಕೆಲಸ ಮಾಡಬಹುದು. ಪತ್ತೆ ಕಾರ್ಯ ಸುಲಭವಾಗಲು ಸುಮಾರು 30 ದಿನಗಳವರೆಗೆ ಸಿಗ್ನಲ್ ಹೊರಸೂಸುತ್ತಿರುತ್ತದೆ. ಈ ಧ್ವನಿಯನ್ನು ತನಿಖಾಧಿಕಾರಿಗಳು ಸುಮಾರು 2-3 ಕಿಲೋಮೀಟರ್ ದೂರದಿಂದ ಗುರುತಿಸಬಹುದು. 14 ಸಾವಿರ ಅಡಿ ಆಳದ ಸಮದ್ರದಲ್ಲಿದ್ದರೂ ಸಿಗ್ನಲ್ ಹೊರ ಸೂಸುತ್ತಿರುತ್ತದೆ.ಇದನ್ನೂ ಓದಿ: ರಕ್ಷಿತಾ ಪ್ರೇಮ್ ಸಹೋದರ ರಾಣಾ ನಟನೆಯ ಚಿತ್ರದ ಟೈಟಲ್ ಟೀಸರ್ ರಿಲೀಸ್