ಅನಾರೋಗ್ಯ ಕಾರಣ ನೀಡಿ ಸಾಮೂಹಿಕ ರಜೆ – 25 ಸಿಬ್ಬಂದಿ ವಜಾಗೊಳಿಸಿದ ಏರ್‌ ಇಂಡಿಯಾ

Public TV
1 Min Read

ನವದೆಹಲಿ: ಅನಾರೋಗ್ಯದ ಕಾರಣ ನೀಡಿ ಸಾಮೂಹಿಕ ರಜೆ ಹಾಕಿದ್ದ ಕನಿಷ್ಠ 25 ಸಿಬ್ಬಂದಿಯನ್ನು ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ವಜಾಗೊಳಿಸಿದೆ.

ಏರ್‌ಲೈನ್‌ನ ಸುಮಾರು 300 ಉದ್ಯೋಗಿಗಳು ಅನಾರೋಗ್ಯದ ಕಾರಣ ನೀಡಿ ಕರ್ತವ್ಯಕ್ಕೆ ಗೈರಾಗಿದ್ದರು. ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇದು ದೊಡ್ಡ ಪ್ರಮಾಣದ ವಿಮಾನಯಾನ ಅಡೆತಡೆಗಳಿಗೆ ಕಾರಣವಾಯಿತು. ಇದನ್ನೂ ಓದಿ: ಭಾರತಕ್ಕೆ ಭೇಟಿ ನೀಡಿದ ಮಾಲ್ಡೀವ್ಸ್‌ ವಿದೇಶಾಂಗ ಸಚಿವ

ಸಿಬ್ಬಂದಿ ಸಾಮೂಹಿಕ ರಜೆಯಿಂದ 76 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇದರಿಂದ ಸಾಕಷ್ಟು ಸಮಸ್ಯೆಯಾಗಿತ್ತು. ವಜಾಗೊಳ್ಳುವ ಸಿಬ್ಬಂದಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮ್ಯಾನೇಜ್‌ಮೆಂಟ್ ಇಂದು ಕ್ಯಾಬಿನ್ ಸಿಬ್ಬಂದಿ ಸದಸ್ಯರೊಂದಿಗೆ ಟೌನ್‌ಹಾಲ್ ಸಭೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.

‘ಯಾವುದೇ ಸಮರ್ಥನೀಯ ಕಾರಣವಿಲ್ಲದೆ ರಜೆ ಹಾಕಿರುವುದು ತಿಳಿದುಬಂದಿದೆ’ ಎಂದು 25 ಸಿಬ್ಬಂದಿಯನ್ನು ವಜಾಗೊಳಿಸಿರುವ ಬಗ್ಗೆ ಏರ್‌ಲೈನ್‌ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ: ಅಂಬಾನಿ, ಅದಾನಿ ಟೆಂಪೋದಲ್ಲಿ ಹಣ ಕಳುಹಿಸುತ್ತಾರೆ- ಮೋದಿಗೆ ರಾಗಾ ತಿರುಗೇಟು

ಹೆಚ್ಚಿನ ಸಂಖ್ಯೆಯ ವಿಮಾನಗಳನ್ನು ರದ್ದುಗೊಳಿಸಬೇಕಾಗಿತ್ತು. ಇದರಿಂದಾಗಿ ಸಂಪೂರ್ಣ ವೇಳಾಪಟ್ಟಿ ಬದಲಾಯಿತು. ಇದು ಕಂಪನಿಯ ಗೌರವಾನ್ವಿತ ಪ್ರಯಾಣಿಕರಿಗೆ ಅನಾನುಕೂಲತೆ ಉಂಟುಮಾಡಿತು. ನಿಮ್ಮ ಕಾರ್ಯವು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಕಂಪನಿಗೆ ತೀವ್ರ ಮುಜುಗರವಾಗಿದ್ದಲ್ಲದೇ ಹಣಕಾಸು ನಷ್ಟ ಕೂಡ ಆಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

Share This Article