ಹಾರಾಟದಲ್ಲಿದ್ದಾಗಲೇ ಪ್ರಯಾಣಿಕ ಅಸ್ವಸ್ಥ – ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

1 Min Read

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಿಂದ ವಿಜಯವಾಡಕ್ಕೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ (Air India) ವ್ಯಕ್ತಿಯೊಬ್ಬರು ಅಸ್ವಸ್ಥರಾದ ಕಾರಣ ಚಿಕಿತ್ಸೆಗಾಗಿ (Medical Emergency) ಜೈಪುರದಲ್ಲಿ (Jaipur) ತುರ್ತು ಭೂಸ್ಪರ್ಶ ಮಾಡಲಾಯಿತು.

ಇಂದು (ಜ.12) ಬೆಳಗ್ಗೆ ಹೊರಟಿದ್ದ AI2517 ವಿಮಾನದಲ್ಲಿ ವಯಸ್ಸಾದ ಪ್ರಯಾಣಿಕರೊಬ್ಬರು ಅಸ್ವಸ್ಥರಾದರು. ನಂತರ ವಿಮಾನವನ್ನು ಜೈಪುರಕ್ಕೆ ತಿರುಗಿಸಲಾಯಿತು. ಅಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜೈಪುರದಿಂದ ಬೆಂಗ್ಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ಸಮಸ್ಯೆ – ಇಂದೋರ್‌ನಲ್ಲಿ ತುರ್ತು ಭೂಸ್ಪರ್ಶ

ವಿಮಾನದಲ್ಲಿದ್ದ ಪ್ರಯಾಣಿಕರ ಸಂಖ್ಯೆಯ ಬಗ್ಗೆ ವಿವರಗಳ ದೊರೆತಿಲ್ಲ. ಅಲ್ಲದೇ ತುರ್ತು ಭೂಸ್ಪರ್ಶದ ಬಗ್ಗೆ ಏರ್ ಇಂಡಿಯಾ ಸಂಸ್ಥೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಜ.6 ರಂದು ರಾಜಸ್ಥಾನದ ಜೈಪುರದಿಂದ (Jaipur) ಬೆಂಗಳೂರಿಗೆ (Bengaluru) ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ವಿಮಾನದಲ್ಲಿ ಒಂದು ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ವಿಮಾನವನ್ನು ಇಂದೋರ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ದುರಾದೃಷ್ಟವಶಾತ್‌ ಮಗು ಚಿಕಿತ್ಸೆ ವೇಳೆ ಸಾವನ್ನಪ್ಪಿತ್ತು. ಇದನ್ನೂ ಓದಿ: ಲ್ಯಾಂಡಿಂಗ್ ಗೇರ್ ಸಮಸ್ಯೆ, ಟೈರ್‌ ಸ್ಫೋಟ – ಕೊಚ್ಚಿಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

Share This Article