ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್‌ ದೆಹಲಿಗೆ ವಾಪಸ್‌

air india flight

ನವದೆಹಲಿ: ಇಂದೋರ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದ (Air India Flight) ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ನಿಮಿಷ ವಿಮಾನ ಹಾರಾಟ ನಡೆಸಿದೆ. ಬೆಂಕಿ ಸೂಚನೆ ಸಿಕ್ಕ ಬೆನ್ನಲ್ಲೇ ವಿಮಾನ ದೆಹಲಿಗೆ ವಾಪಸ್‌ ಆಗಿದೆ. ಇದನ್ನೂ ಓದಿ: ಭಾರತಕ್ಕೆ 50% ತೆರಿಗೆ ಹಾಕಿ – ಯುರೋಪ್‌ಗೆ ಅಮೆರಿಕ ಮನವಿ

A320 ನಿಯೋ ವಿಮಾನದ ಒಂದು ಎಂಜಿನ್ ಸ್ಥಗಿತಗೊಂಡಿದ್ದು, ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಏರ್ ಇಂಡಿಯಾ ತಿಳಿಸಿದೆ. ಬೆಳಗ್ಗೆ 6:15 ರ ಸುಮಾರಿಗೆ ವಿಮಾನವು ತುರ್ತು ಭೂಸ್ಪರ್ಶ ಮಾಡಿತು. 90 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ತಿಳಿಸಿದೆ.

ಪ್ರಮಾಣಿತ ಕಾರ್ಯವಿಧಾನವನ್ನು ಅನುಸರಿಸಿ ಕಾಕ್‌ಪಿಟ್ ಸಿಬ್ಬಂದಿ ಎಂಜಿನ್ ಅನ್ನು ಆಫ್ ಮಾಡಲು ನಿರ್ಧರಿಸಿದರು. ವಿಮಾನವು ದೆಹಲಿಗೆ ಹಿಂತಿರುಗಿ ಸುರಕ್ಷಿತವಾಗಿ ಇಳಿಯಿತು. A320 ನಿಯೋ ವಿಮಾನದಿಂದ ಕಾರ್ಯನಿರ್ವಹಿಸುತ್ತಿದ್ದ ಈ ವಿಮಾನವು ದೆಹಲಿಯಲ್ಲಿ ಮತ್ತೆ ಇಳಿಯುವ ಮೊದಲು 30 ನಿಮಿಷಗಳಿಗಿಂತ ಹೆಚ್ಚು ಕಾಲ ಹಾರಾಟ ನಡೆಸಿತ್ತು. ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಮಾಡಲಾಗಿದ್ದು, ಅದು ಇಂದೋರ್‌ಗೆ ಪ್ರಯಾಣ ಬೆಳೆಸಲಿದೆ. ಇದನ್ನೂ ಓದಿ: ಇಂದಿನಿಂದಲೇ ಕರ್ನಾಟಕದಲ್ಲಿ ಆಸ್ತಿ ಖರೀದಿ ಶುಲ್ಕ ದುಪ್ಪಟ್ಟು

ಇತ್ತೀಚಿನ ದಿನಗಳಲ್ಲಿ ಏರ್ ಇಂಡಿಯಾ ವಿಮಾನಗಳು ತಾಂತ್ರಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ನಿದರ್ಶನಗಳಿವೆ. ಘಟನೆಯ ಬಗ್ಗೆ ವಾಯು ಸುರಕ್ಷತಾ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯಕ್ಕೆ ತಿಳಿಸಲಾಗಿದೆ.