ದೆಹಲಿಯಲ್ಲಿ ಲ್ಯಾಂಡಿಂಗ್‌ ವೇಳೆ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ – ಪ್ರಯಾಣಿಕರು ಸೇಫ್

Public TV
1 Min Read

ನವದೆಹಲಿ: ಹಾಂಕಾಂಗ್‌ನಿಂದ (Hong Kong) ದೆಹಲಿಗೆ ಬಂದಿಳಿದ ಏರ್ ಇಂಡಿಯಾ ವಿಮಾನದಲ್ಲಿ (Air India Flight) ದಿಢೀರ್ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

AI 315 ವಿಮಾನ ಮಂಗಳವಾರ ಮಧ್ಯಾಹ್ನ 12:12ಕ್ಕೆ ದೆಹಲಿಯಲ್ಲಿ (Delhi) ಲ್ಯಾಂಡ್ ಆಯಿತು. ಹಾರಾಟದ ವೇಳೆ ಯಾವುದೇ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ. ಆದರೆ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಆಗಸ್ಟ್‌ನಲ್ಲಿ ಯೆಲ್ಲೋ ಲೈನ್ ಉದ್ಘಾಟನೆ ಸಾಧ್ಯತೆ

ಪ್ರಯಾಣಿಕರು ವಿಮಾನದಿಂದ ಇಳಿಯುತ್ತಿದ್ದರು, ಈ ವೇಳೆ ವಿಮಾನದ ಒಂದು ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಏರ್‌ಲೈನ್‌ನಲ್ಲಿರುವ ಸ್ವಯಂಚಾಲಿತ ವ್ಯವಸ್ಥೆಯಿಂದಾಗಿ ಆಕ್ಸಿಲರಿ ಪವರ್ ಯೂನಿಟ್ ಬಂದ್ ಆಗಿದೆ. ವಿಮಾನಕ್ಕೆ ಸ್ವಲ್ಪ ಪ್ರಮಾಣದ ಹಾನಿಯಾಗಿದೆ. ಆದರೆ ಪ್ರಯಾಣಿಕರು ಅಷ್ಟು ಹೊತ್ತಿಗಾಗಲೇ ಕೆಳಗೆ ಇಳಿದ ಕಾರಣ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಇಂಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಇದನ್ನೂ ಓದಿ: ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ

Share This Article