ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ದುರಂತಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಮೇಘಾನಿ ಪ್ರದೇಶ ಮೆಡಿಕಲ್ ಕಾಲೇಜ್‌ವೊಂದರ (Medical College) ಮೇಲೆ ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ಸುದ್ದಿ ತಿಳಿದು ತುಂಬಾ ಆಘಾತವಾಗಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಳಿಗೆ, ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ. ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ ಎಂದು ಬೇಸರ ವ್ಯಕ್ತಪಡಿಸಿದರು.ಇದನ್ನೂ ಓದಿ: ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು
ಘಟನೆ ಏನು?
ಟೇಕಾಫ್ ನಂತರ ಎಂಜಿನ್‌ನಲ್ಲಿ ತಾಂತ್ರಿಕದೋಷ ಉಂಟಾದ ಪರಿಣಾಮ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನ ವಿಮಾನ ನಿಲ್ದಾಣದ ಬಳಿಯ ಮೆಡಿಕಲ್ ಕಾಲೇಜಿನ ಮೇಲೆ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ.
ಸುಮಾರು 200ಕ್ಕೂ ಅಧಿಕ ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಅಪಘಾತಕ್ಕೀಡಾದ ಸುದ್ದಿ ತಿಳಿದು ಆಘಾತವಾಗಿದೆ.
ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಗಳಿಗೆ. ಈ ಅಪಘಾತದಿಂದ ಹೆಚ್ಚಿನ ಹಾನಿಯಾಗದಿರಲಿ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸೋಣ. #AirIndia #crash pic.twitter.com/5wux1aj1dj— Siddaramaiah (@siddaramaiah) June 12, 2025
ಅಲ್ಲದೇ ಮೆಡಿಕಲ್ ಕಾಲೇಜಿಗೆ ವಿಮಾನ ಬಡಿದ್ದಿದ್ದು, ಭಾರೀ ಸಾವು-ನೋವಿನ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ 7 ಅಗ್ನಿಶಾಮಕ ಹಾಗೂ ಎನ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ 30 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ