ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸುಂಕ ವಿಧಿಸುವ ಎಚ್ಚರಿಕೆಗೂ ಜಗ್ಗದ ಭಾರತ ರಷ್ಯಾದಿಂದ ಕಚ್ಚಾತೈಲ ಖರೀದಿಯನ್ನ ಮುಂದುವರಿಸಿದೆ. ಈ ನಡುವೆ ಭಾರತ – ರಷ್ಯಾ ನಡುವಿನ ಸಂಬಂಧವನ್ನ ಇನ್ನಷ್ಟು ಗಟ್ಟಿಗೊಳಿಸಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ರಾಜಧಾನಿ ಮಾಸ್ಕೋಗೆ ಭೇಟಿ ಕೊಟ್ಟಿದ್ದಾರೆ.
ರಷ್ಯಾ ಮತ್ತು ಭಾರತದ ಸಂಬಂಧವನ್ನ ಬಲಪಡಿಸುವ ಉದ್ದೇಶದಿಂದ, ದೋವಲ್ ಮಾಸ್ಕೋಗೆ (Moscow) ಭೇಟಿ ನೀಡಿದ್ದಾರೆ. ಅಲ್ಲದೇ ಮುಂದಿನ ರಕ್ಷಣಾ ಮತ್ತು ವ್ಯಾಪಾರ ಮಾತುಕತೆಗಾಗಿ ವಿದೇಶಾಂಗ ಸಚಿವ ಎಸ್. ಜೈಶಂಕರ್ ಕೂಡ ಈ ತಿಂಗಳ ಕೊನೆಯಲ್ಲಿ ರಷ್ಯಾಕ್ಕೆ ಹೋಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್ ಮತ್ತೆ ಬೆದರಿಕೆ
ದೋವಲ್ ಅವರ ರಷ್ಯಾ ಭೇಟಿ ಮೊದಲೇ ನಿಗದಿಯಾಗಿತ್ತು. ಆದರೆ ಟ್ರಂಪ್ ಅವರ ಹೇಳಿಕೆಗಳಿಂದಾಗಿ ಇದಕ್ಕೀಗ ಹೆಚ್ಚು ಮಹತ್ವ ಪಡೆದುಕೊಂಡಂತಾಗಿದೆ. ಭಾರತ ಮತ್ತು ರಷ್ಯಾ ನಡುವಿನ ಸಂಬಂಧ ಸುಧಾರಿಸಲು ಈ ಭೇಟಿ ಸಹಾಯ ಮಾಡುತ್ತದೆ. ಅಮೆರಿಕದ ಒತ್ತಡದ ನಡುವೆಯೂ ಭಾರತವು ರಷ್ಯಾದೊಂದಿಗೆ ತನ್ನ ಸಂಬಂಧವನ್ನ ಮುಂದುವರೆಸಲು ಬಯಸಿದೆ ಎಂಬುದನ್ನು ಇದು ತೋರಿಸುತ್ತದೆ.
ಜೈಶಂಕರ್ ಅವರ ಭೇಟಿಯು ಕೂಡ ಉಭಯ ದೇಶಗಳ ನಡುವಿನ ಮಾತುಕತೆಗೆ ವೇದಿಕೆ ಕಲ್ಪಿಸುತ್ತದೆ. ತೈಲ ವ್ಯಾಪಾರ ಮತ್ತು ಇತರ ವಿಷಯಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉತ್ತರಕಾಶಿ ಮೇಘಸ್ಫೋಟ | ಕೊಚ್ಚಿ ಹೋದ ಗ್ರಾಮ – ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
24 ಗಂಟೆಯಲ್ಲಿ ಸುಂಕ ಗಣನೀಯ ಏರಿಕೆ
ಇನ್ನೂ ಅಜಿತ್ ದೋವಲ್ ಭೇಟಿಗೂ ಮುನ್ನವೇ ಟ್ರಂಪ್ 24 ಗಂಟೆಯಲ್ಲಿ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಭಾರತವು ನಮ್ಮ ಉತ್ತಮ ವ್ಯಾಪಾರ ಪಾಲುದಾರನಲ್ಲ. ಏಕೆಂದರೆ ಭಾರತ ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡುತ್ತಾರೆ. ಆದ್ರೆ ನಾವು ಅವರೊಂದಿಗೆ ವ್ಯಾಪಾರ ಮಾಡಲ್ಲ. ಆದ್ದರಿಂದ ನಾವು 25 ಪ್ರತಿಶತದಷ್ಟು ಇತ್ಯರ್ಥಪಡಿಸಿಕೊಂಡಿದ್ದೇವೆ. ಆದ್ರೆ ನಾವು ಹೇಳಿದ ಮೇಲೂ ರಷ್ಯಾದಿಂದ ನಿರಂತರವಾಗಿ ತೈಲ ಖರೀದಿ ಮಾಡಲಾಗುತ್ತಿದೆ. ಈ ಮೂಲಕ ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಆಮದುಗಳ ಮೇಲೆ ಸುಂಕವನ್ನು (Tariff Threat) ಗಣನೀಯವಾಗಿ ಏರಿಕೆ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ.
24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್ ಮತ್ತೆ ಬೆದರಿಕೆ
ಭಾರತ ಲಾಭ ಮಾಡಿಕೊಳ್ಳುತ್ತಿದೆ
ಒಂದು ದಿನದ ಹಿಂದಷ್ಟೇ ಸುಂಕ ಗಣನೀಯ ಏರಿಕೆ ಕುರಿತು ಟ್ರಂಪ್ ಮಾತನಾಡಿದ್ದರು, ಭಾರತ ರಷ್ಯಾದಿಂದ (India-Russia) ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ (Russian Oil) ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ. ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ಕರ್ನಾಟಕಕ್ಕೆ 46,933 ಕೋಟಿ ತೆರಿಗೆ ಹಣ ಬಿಡುಗಡೆ – ಕೇಂದ್ರ ಹಣಕಾಸು ಸಚಿವಾಲಯ
ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
ಈಗಾಗಲೇ ಆಗಸ್ಟ್ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆದ್ರೆ, ಯಾವ ದಿನಾಂಕದಿಂದ ಈ ನಿರ್ಧಾರ ಜಾರಿಗೆ ಬರಲಿದೆ ಎಂದು ತಿಳಿಸಿರಲಿಲ್ಲ.
2ನೇ ಅತೀ ದೊಡ್ಡ ಖರೀದಿದಾರ
ಭಾರತವು ರಷ್ಯಾದಿಂದ ದೇಶದ ಅಗತ್ಯವಿರುವ ಕಚ್ಚಾತೈಲದ ಪೈಕಿ ಶೇ.35ರಿಂದ 40ರಷ್ಟು ಖರೀದಿಸುತ್ತಿದೆ. ಉಕ್ರೇನ್ ಜೊತೆಗಿನ ಯುದ್ಧ ಆರಂಭಕ್ಕೂ ಮುನ್ನ ಹೋಲಿಸಿದ್ರೆ, ಆಮದು ಪ್ರಮಾಣವು ಶೇ.0.2ರಷ್ಟು ಏರಿಕೆಯಾಗಿದೆ. ರಷ್ಯಾದಿಂದ ಗರಿಷ್ಠ ಪ್ರಮಾಣದ ಕಚ್ಚಾತೈಲ ಖರೀದಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತವು ನಂತರದ ಸ್ಥಾನದಲ್ಲಿದೆ ಎಂದು ವರದಿಗಳು ತಿಳಿಸಿವೆ.