ಲಕ್ನೋ: ಬಿಜೆಪಿ ಸೀಟುಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ನಾವು ತೋರಿಸಿದ್ದೇವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನು ಸಾಧಿಸಿದ ಒಂದು ದಿನದ ಬಳಿಕ ಅಖಿಲೇಶ್ ಯಾದವ್ ಅವರು ಟ್ವೀಟ್ ಮಾಡಿದ್ದು, ತಮ್ಮ ಸೀಟುಗಳ ಸಂಖ್ಯೆಯನ್ನು ಎರಡರಷ್ಟು ಹೆಚ್ಚಿಸಿದಕ್ಕೆ ಮತ್ತು ಮತ ಹಂಚಿಕೆಯಲ್ಲಿ ಒಂದೂವರೆ ಪಟ್ಟು ಹೆಚ್ಚಿಸಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿ ಅಭ್ಯರ್ಥಿಗೆ ಸುಲಭವಾಗಿ ಸಿಗಲಿದೆ ಜಯ
उप्र की जनता को हमारी सीटें ढाई गुनी व मत प्रतिशत डेढ़ गुना बढ़ाने के लिए हार्दिक धन्यवाद!
हमने दिखा दिया है कि भाजपा की सीटों को घटाया जा सकता है। भाजपा का ये घटाव निरंतर जारी रहेगा।आधे से ज़्यादा भ्रम और छलावा दूर हो गया है बाकी कुछ दिनों में हो जाएगा।
जनहित का संघर्ष जीतेगा!
— Akhilesh Yadav (@yadavakhilesh) March 11, 2022
ಬಿಜೆಪಿಯ ಸೀಟುಗಳ ಸಂಖ್ಯೆಯನ್ನು ಕಡಿಮೆ ಮಾಡಬಹುದು ಎಂದು ನಾವು ತೋರಿಸಿದ್ದೇವೆ. ಇದು ಮುಂದುವರಿಯುತ್ತದೆ. ಅರ್ಧಕ್ಕಿಂತ ಹೆಚ್ಚು ಸುಳ್ಳುಗಳನ್ನು ಈಗಾಗಲೇ ಅಳಿಸಿಹಾಕಲಾಗಿದೆ. ಉಳಿದವುಗಳನ್ನು ಅಳಿಸಲಾಗುತ್ತದೆ. ಸಾರ್ವಜನಿಕ ಹಿತಾಸಕ್ತಿಗಾಗಿ ಹೋರಾಟ ಮುಂದುವರಿಯುತ್ತದೆ ಎಂದಿದ್ದಾರೆ.
ಉತ್ತರ ಪ್ರದೇಶದಲ್ಲಿ ಗುರುವಾರ ನಡೆದ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ 273 ಸ್ಥಾನಗಳನ್ನು ಪಡೆಯುವ ಮೂಲಕ ಸಂಪೂರ್ಣ ಜಯ ಗಳಿಸಿದೆ. ಸಮಾಜವಾದಿ ಪಕ್ಷ 125 ಸ್ಥಾನಗಳನ್ನು ಗಳಿಸುವ ಮೂಲಕ ಸೋತಿದೆ. 2017ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ 47 ಸ್ಥಾನಗಳನ್ನು ಗೆದ್ದಿತ್ತು.
ಇದನ್ನೂ ಓದಿ: Exclusive -ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಚುನಾವಣೆ?