ಟೈಟಾಗಿ ಮನವಿ ಪತ್ರ ನೀಡಲು ಬಂದ ಪ್ರಿನ್ಸಿಪಾಲ್- ಅಂಬುಲೆನ್ಸ್ ಕರೆಸಿ ಆಸ್ಪತ್ರೆಗೆ ಕಳಿಸಿದ ಶಾಸಕ

Public TV
2 Min Read

ಚಿಕ್ಕಮಗಳೂರು: ಮದ್ಯಪಾನ (Alcohol) ಮಾಡಿ ಫುಲ್ ಟೈಟಾಗಿ ಶಾಸಕರಿಗೆ ಮನವಿ ಪತ್ರ ನೀಡಲು ಬಂದ ಪ್ರಾಂಶುಪಾಲರಿಗೆ ಶಾಸಕರು ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡು ಆಸ್ಪತ್ರೆಗೆ ಕಳಿಸಿದ ಪ್ರಸಂಗವೊಂದು ನಡೆದಿದೆ.

ಈ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಸಂಸೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಲೋಕ ನಾಯಕ್ (Principal LokNayak) ಅವರು ವಸತಿ ಶಾಲೆಯ ಸಮಸ್ಯೆಗಳ ಬಗ್ಗೆ ಶಾಸಕ ಟಿ.ಡಿ. ರಾಜೇಗೌಡ (TD Rajegowda) ರಿಗೆ ಮನವಿ ನೀಡಲು ಆಗಮಿಸಿದ್ದರು. ಈ ವೇಳೆ ಪ್ರಿನ್ಸಿಪಾಲ್ ಲೋಕನಾಯಕ್ ಫುಲ್ ಟೈಟ್ ಆಗಿರುವುದನ್ನ ಕಂಡ ಶಾಸಕ ರಸ್ತೆ ಮಧ್ಯೆಯೇ ಫುಲ್ ಗರಂ ಆಗಿದ್ದರು. ಇದನ್ನೂ ಓದಿ: 15ರ ರೇಪ್ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್

ಸ್ಥಳದಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಪ್ರಿನ್ಸಿಪಾಲರನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು. ಅಷ್ಟೆ ಅಲ್ಲದೆ ಬ್ರೀಥಿಂಗ್ ಆಲ್ಕೋಹಾಲ್ ಆನ್ ಲೇಸರ್ ಮೂಲಕ ಪ್ರಾಂಶುಪಾಲರನ್ನು ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿದ್ದು ಪತ್ತೆಯಾಗಿದೆ. ಈ ಹಿನ್ನೆಲೆ ಶಿಕ್ಷಕರೇ ಹೀಗೆ ವರ್ತಿಸಿದರೆ ಮಕ್ಕಳ ಪಾಡೇನು ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ಕೂಡಲೇ ಸರ್ಕಾರಿ ಆಸ್ಪತ್ರೆಗೆ ಫೋನ್ ಮಾಡಿ ಅಂಬುಲೆನ್ಸ್ ಕರೆಸಿ ಪ್ರಿನ್ಸಿಪಾಲ್ ಲೋಕ ನಾಯಕ್ ಅವರನ್ನು ವೈದ್ಯಕೀಯ ಪರೀಕ್ಷೆಗೆಂದು ಎನ್.ಆರ್. ಪುರ ಸರ್ಕಾರಿ ಆಸ್ಪತ್ರೆಗೆ ಕಳಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ ಪ್ರಸ್ತುತ 240 ಜನ ಹೆಣ್ಣು ಮಕ್ಕಳಿದ್ದಾರೆ. ಈಗ ಮತ್ತೆ ಹೊಸದಾಗಿ 40 ಜನ ಬರುವವರು ಇದ್ದಾರೆ. ಹಾಸ್ಟೆಲ್ ನಲ್ಲಿ ವಾರ್ಡನ್ ಅಂತ ಯಾರೂ ಇಲ್ಲ. ಹೀಗಾಗಿ ವಾರ್ಡನ್ ಹಾಗೂ ಪ್ರಿನ್ಸಿಪಾಲ್ ಎರಡೂ ಹುದ್ದೆಯನ್ನು ಲೋಕ ನಾಯಕ್ ಅವರೇ ನಿರ್ವಹಿಸುತ್ತಿದ್ದಾರೆ.

ಸುಮಾರು 300 ಜನ ಹೆಣ್ಣು ಮಕ್ಕಳಿರುವ ವಸತಿ ಶಾಲೆಯಲ್ಲಿ ಇಂತಹ ಪ್ರಿನ್ಸಿಪಾಲ್ ಇದ್ದರೆ ಹೆಣ್ಣು ಮಕ್ಕಳ ಗತಿ ಏನು ಎಂದು ಶಾಸಕ ರಾಜೇಗೌಡ ಪ್ರಿನ್ಸಿಪಾಲ್ ವಿರುದ್ಧ ಅಸಮಾಧಾನ ಅವರ ಹಾಕಿ ಕೂಡಲೇ ಅಮಾನತು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ