ವಿಮಾನ – ಹೆಲಿಕಾಪ್ಟರ್ ದುರಂತ; ಎಲ್ಲಾ 64 ಮಂದಿ ದುರ್ಮರಣ, 28 ಮೃತದೇಹ ಪತ್ತೆ

Public TV
2 Min Read

ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ – ಅಮೆರಿಕರ ವಿಮಾನದ ನಡುವಿನ ದುರಂತದಲ್ಲಿ (Plane Helicopter Collision) ಎಲ್ಲಾ 64 ಮಂದಿ ದುರ್ಮರಣಕ್ಕೀಡಾಗಿದ್ದು, ಈವರೆಗೆ 28 ಮೃತದೇಹಗಳನ್ನು ಪೊಟೊಮ್ಯಾಕ್ ನದಿಯಿಂದ (Potomac River) ಹೊರತೆಗೆಯಲಾಗಿದೆ ಎಂದು ವರದಿಗಳು ತಿಳಿಸಿವೆ.

ಅಮೆರಿಕದ (America) ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ (Reagan National Airport) ಬಳಿ ದುರಂತ ನಡೆದಿದೆ. ಈ ವೇಳೆ ಅಮೆರಿಕನ್ ಏರ್‌ಲೈನ್ಸ್ ಫ್ಲೈಟ್-5342ರಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ 64 ಮಂದಿ ಸಾವನ್ನಪ್ಪಿದ್ದು, ಈವರೆಗೆ 28 ಮೃತದೇಹಳನ್ನು ಹೊರತೆಗೆಯಲಾಗಿದೆ. ಭೀಕರ ದುರಂತದಲ್ಲಿ ಬದುಕುಳಿದಿರುವ ಸಾಧ್ಯತೆಗಳು ಕಡಿಮೆ ಎಂದು ವಾಷಿಂಗ್ಟನ್ ಅಗ್ನಿಶಾಮಕ ಮುಖ್ಯಸ್ಥ ಜಾನ್ ಡೊನ್ನೆಲ್ಲಿಯನ್ನು ತಿಳಿಸಿದ್ದಾರೆ. ಇದನ್ನೂ ಓದಿ: AI ರಂಗದಲ್ಲಿ ಡೀಪ್‌ಸೀಕ್ ಸಂಚಲನ – ಅಮೆರಿಕ ಷೇರುಪೇಟೆ ಶೇಕ್!

ಸದ್ಯ ನದಿಯಲ್ಲಿ ಉಳಿದ ಮೃತದೇಹಳಿಗಾಗಿ ಕಾರ್ಯಾಚರಣೆ ಮುಂದುವರಿದಿದೆ. ಆದ್ರೆ ಮಿಲಿಟರಿ ಬ್ಲಾಕ್‌ ಹಾಕ್ ಹೆಲಿಕಾಪ್ಟರ್‌ನಲ್ಲಿ ಮೂವರು ಸೈನಿಕರಿದ್ದು, ಅವರ ಬಗ್ಗೆ ಯಾವುದೇ ಮಾಹಿತಿ ಇನ್ನೂ ಲಭ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕಾಂಗೋದಲ್ಲಿ M23 ಬಂಡುಕೋರರ ಲೂಟಿ – 100ಕ್ಕೂ ಹೆಚ್ಚು ಬಲಿ, ಸಾವಿರಾರು ಜನರಿಗೆ ಗಾಯ

ಅಪಘಾತ ಸಂಭವಿಸಿದ್ದು ಹೇಗೆ?
ದುರಂತಕ್ಕೀಡಾದ ಅಮೆರಿಕನ್‌ ಏರ್‌ಲೈನ್ಸ್‌ (American Airlines) ವಿಮಾನವು ಕಾನ್ಸಾಸ್‌ನಿಂದ ಡಿ.ಸಿ.ಯ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬುಧವಾರ ತಡರಾತ್ರಿ ಪೊಟೊಮ್ಯಾಕ್ ನದಿಯಲ್ಲಿ ವಿಮಾನ ಪತನಗೊಂಡಿದೆ. ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಆರಂಭಿಸಿದೆ. ವಿಮಾನ ನಿಲ್ದಾಣದಲ್ಲಿ ಎಲ್ಲಾ ಹಾರಾಟಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕದಲ್ಲಿನ ವಲಸಿಗರ ಕೈಗೆ ಕೋಳ – ಟ್ರಂಪ್ ಆದೇಶದ ವಿರುದ್ಧ ಸಿಡಿದೆದ್ದ ಸಿಖ್ಖರು

Share This Article