– ಯುಪಿಯಲ್ಲಿ ಮೊದಲ ಬಾರಿಗೆ ಮಹಿಳಾ ಪೊಲೀಸರ ತಂಡದಿಂದ ಎನ್‌ಕೌಂಟರ್
ಲಕ್ನೋ: ಉತ್ತರ ಪ್ರದೇಶದ (Uttar Pradesh) ಗಾಜಿಯಾಬಾದ್‌ನಲ್ಲಿ (Ghaziabad) ಮೊದಲ ಬಾರಿಗೆ ಮಹಿಳಾ ಪೊಲೀಸರ ತಂಡ (Women Cop Team) ಎನ್‌ಕೌಂಟರ್ (Encounter) ನಡೆಸಿ ಕಳ್ಳನನ್ನು ಬಂಧಿಸಿದೆ.
ಬಂಧಿತನನ್ನು ಜಿತೇಂದ್ರ (22) ಎಂದು ಗುರುತಿಸಲಾಗಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಆರೋಪಿಯನ್ನು ಪೊಲೀಸ್ ಚೆಕ್‌ಪಾಯಿಂಟ್‌ನಲ್ಲಿ ತಡೆದಿದ್ದಾರೆ. ಈ ವೇಳೆ ಈತ ಸ್ಕೂಟರ್ ನಿಲ್ಲಿಸದೇ ಪರಾರಿಯಾಗಲು ಯತ್ನಿಸಿದ್ದಾನೆ. ಈತನನ್ನು ಮಹಿಳಾ ಪೊಲೀಸರ ತಂಡ ಬೆನ್ನಟ್ಟಿದೆ. ಆಗ ತಪ್ಪಿಸಿಕೊಳ್ಳುವ ಭರದಲ್ಲಿ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ಬಂದು ಶ್ರೀಗಂಧಕ್ಕೆ ಕೊಡಲಿ – 33 ತುಂಡುಗಳು ವಶ, ಆರೋಪಿ ಅರೆಸ್ಟ್
ಪೊಲೀಸರು ಆತನಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಈ ವೇಳೆ ತನ್ನ ಬಳಿ ಇದ್ದ ನಾಡ ಪಿಸ್ತೂಲಿನಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ. ಈ ವೇಳೆ ಪ್ರತಿದಾಳಿ ನಡೆಸಿದ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಜೀತೇಂದ್ರ ಕಳ್ಳತನ, ದರೋಡೆ ಸೇರಿದಂತೆ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾನೆ.
ವಿಚಾರಣೆಯ ಸಮಯದಲ್ಲಿ, ದೆಹಲಿ-ಎನ್‌ಸಿಆರ್‌ನಲ್ಲಿ ಬೈಕ್‌ಗಳು ಮತ್ತು ಸ್ಕೂಟರ್‌ಗಳನ್ನು ಕದ್ದಿದ್ದಾಗಿ ಒಪ್ಪಿಕೊಂಡಿದ್ದಾನೆ. ಈತ ಜನರಿಂದ ಫೋನ್‌ಗಳು ಕಸಿದು ಪರಾರಿಯಾಗುತ್ತಿದ್ದ. ಪಿಸ್ತೂಲ್, ಸ್ಕೂಟರ್, ಫೋನ್ ಮತ್ತು ಟ್ಯಾಬ್‌ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯೂ ಭಾನುವಾರ (ಸೆ.21) ಫೋನ್ ಮತ್ತು ಟ್ಯಾಬ್ ಕದ್ದಿದ್ದ. ದ್ವಿಚಕ್ರ ವಾಹನವನ್ನು ಕಳೆದ ವರ್ಷ ದೆಹಲಿಯಲ್ಲಿ ಕದ್ದಿದ್ದಾಗಿ ಜೀತೇಂದ್ರ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಲಿವ್ ಇನ್ ಗೆಳತಿಯ ಕೊಂದು ನದಿಗೆಸೆದ ಪ್ರಿಯಕರ – ಶವದ ಜೊತೆ ಸೆಲ್ಫಿ ಕ್ಲಿಕ್ಕಿಸಿ ವಿಕೃತಿ ಮೆರೆದವ ಅಂದರ್

