ಉಪೇಂದ್ರರ ಪ್ರವೃತ್ತಿ ನಿಲ್ಲಿಸಲು, ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆ ಎತ್ತಿ ಹಿಡಿಯಲು ಕ್ರಮ: ಸಚಿವ ಹೆಚ್‌.ಸಿ. ಮಹದೇವಪ್ಪ

Public TV
2 Min Read

ಮೈಸೂರು: ಸಮುದಾಯವೊಂದರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ನಟ ಉಪೇಂದ್ರ (Upendra) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉಪೇಂದ್ರರ ಹೇಳಿಕೆಗೆ ಸಚಿವ ಹೆಚ್‌.ಸಿ. ಮಹದೇವಪ್ಪ (H.C. Mahadevappa) ಅವರು ಟ್ವೀಟ್‌ ಮಾಡಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಟ್ವೀಟ್‌ನಲ್ಲೇನಿದೆ?
ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು.

ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ. ಇದನ್ನೂ ಓದಿ: ಫೋನ್ ಸ್ವಿಚ್ ಆಫ್ ಮಾಡಿಕೊಂಡ ನಟ: ಉಪೇಂದ್ರಗಾಗಿ ಪೊಲೀಸರಿಂದ ತೀವ್ರ ಶೋಧ

ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ ಎಂದು ಟೀಕಿಸಿದ್ದಾರೆ.

ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಹಲವೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಉಪೇಂದ್ರ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ಎಫ್‌ಐಆರ್‌ ಕೂಡ ದಾಖಲಿಸಲಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಕೂಡ ನೀಡಲಾಗಿದೆ. ಇದನ್ನೂ ಓದಿ: ನಟ ಉಪೇಂದ್ರ ವಿರುದ್ಧ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್