ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ರಿಲೀಸ್ ಡೇಟ್ ಫಿಕ್ಸ್

Public TV
2 Min Read

ಟಾಲಿವುಡ್ ನಿರ್ದೇಶಕ ಸುಕುಮಾರ್- ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತೊಮ್ಮೆ ಬಾಕ್ಸಾಫೀಸ್ ಬ್ಯಾಂಗ್ ಮಾಡೋದಿಕ್ಕೆ ಭರ್ಜರಿಯಾಗಿ ಸಜ್ಜಾಗ್ತಿದ್ದಾರೆ. ಪುಷ್ಪ ಮೂಲಕ ದಕ್ಷಿಣ ಧ್ರುವದಿಂದ ಉತ್ತರ ಧ್ರುವದವರೆಗೂ ಧಮಾಕ ಎಬ್ಬಿಸಿದ್ದ ಈ ಜೋಡಿ ಸೀಕ್ವೆಲ್ ಮೂಲಕ ಬೆಳ್ಳಿತೆರೆಯಲ್ಲಿ ಕಮಾಲ್ ಮಾಡಲು ಹೊರಟಿದೆ. ಪುಷ್ಪ 2 (Pushpa 2) ಸಣ್ಣ ಟೀಸರ್ ಹಂಗಾಮ ಕ್ರಿಯೇಟ್ ಮಾಡಿದೆ. ಕಾಣೆಯಾಗಿದ್ದ ಪುಷ್ಪ ಹೊಸ ಅವತಾರದಲ್ಲಿ ಪ್ರತ್ಯಕ್ಷನಾಗುವ ಮೂಲಕ ಇನ್ಮುಂದೆ ನನ್ನಂದೇ ರೂಲ್ ಎಂಬ ಸಂದೇಶ ರವಾನಿಸಿದ್ದಾನೆ. ಪುಷ್ಪ ಸೀಕ್ವೆಲ್ ಎಂಟ್ರಿ ಯಾವಾಗ ಎನ್ನುತ್ತಿದ್ದ ಫ್ಯಾನ್ಸ್‌ಗೆ ಚಿತ್ರತಂಡ ಸರ್ಪ್ರೈಸ್ ನೀಡಿದ್ದಾರೆ.

ಪುಷ್ಪ-2 ಬಿಡುಗಡೆ ದಿನಾಂಕ ಫಿಕ್ಸ್ ಆಗಿದೆ. ಸ್ವಾತಂತ್ರ‍್ಯ ದಿನದಂದು ಅಂದರೆ ಆಗಸ್ಟ್ 15ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿದ್ದು, ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ ಎಕ್ಸೈಟ್ ಆಗಿದ್ದಾರೆ. ಅಲ್ಲು ಅರ್ಜುನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊರಬಿದ್ದಿದ್ದ ಪುಷ್ಪ-2 ಟೀಸರ್ ಝಲಕ್ ಹಲ್ ಚಲ್ ಎಬ್ಬಿಸಿತ್ತು. ಪುಷ್ಪ 2 ಟೀಸರ್ ಜೊತೆ ಹೊರಬಿದ್ದಿದ್ದ ಪುಷ್ಪರಾಜನ ಹೊಸ ಫೋಟೋವಂತೂ ಟಾಕ್ ಆಫ್ ದಿ ಟಾಲಿವುಡ್ ಆಗಿತ್ತು. ಸೀರೆ ಉಂಟು ಬಳೆ ತೊಟ್ಟು ಮೂಗುತಿ ಧರಿಸಿ ಕೈಯಲ್ಲಿ ಪಿಸ್ತೂಲ್ ಹಿಡಿದು ದರ್ಶನ ಕೊಟ್ಟಿದ್ದ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ಅವತಾರಕ್ಕೆ ಫ್ಯಾನ್ಸ್ ಉಘೇ ಉಘೇ ಎಂದಿದ್ದರು. ಶೂಟಿಂಗ್ ಹಂತದಲ್ಲಿರುವ ಪುಷ್ಪ ಸೀಕ್ವೆಲ್ ಕ್ರೇಜ್‌ಗೆ ಬಾಲಿವುಡ್ ಮಂದಿ ಥಂಡಾ ಹೊಡೆದಿದ್ದಾರೆ.

‘ಪುಷ್ಪ 2’ ದಿ ರೂಲ್ಸ್ ಶೂಟಿಂಗ್ ಭರದಿಂದ ಸಾಗ್ತಿದೆ. ಈ ನಡುವೆಯೇ ಸೀಕ್ವೆಲ್ ರೈಟ್ಸ್ ಭಾರೀ ಮೊತ್ತಕ್ಕೆ ಸೇಲ್ ಆಗಿರುವ ಖಬರ್ ಹೊರಬಿದ್ದಿದೆ. ಹಿಂದಿ ಬೆಲ್ಟ್ ನಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಹಕ್ಕು ಮಾರಾಟವಾಗಿದೆಯಂತೆ. ಪುಷ್ಪ ಮೊದಲ ಭಾಗ ಬಾಲಿವುಡ್ ಅಂಗಳದಲ್ಲಿ ಬಡಾ ಹಿಟ್ ಕಂಡಿತ್ತು. ಅಲ್ಲು ಆಕ್ಟಿಂಗ್ , ಸುಕುಮಾರ್ ಟೇಕಿಂಗ್ ಗೆ ಹಿಂದಿ ಮಂದಿ ಫಿದಾ ಆಗಿದ್ದರು. ಇದನ್ನೂ ಓದಿ:ಕೆಲವೇ ದಿನಗಳಲ್ಲಿ ‘ಉತ್ತರಕಾಂಡ’ ಟೀಮ್ ಸೇರಿಕೊಳ್ಳಲಿದ್ದಾರೆ ನಟಿ ರಮ್ಯಾ

ಬಾಲಿವುಡ್ (Bollywood) ಚಿತ್ರಗಳಿಗೆ ಟಕ್ಕರ್ ಕೊಟ್ಟಿದ್ದ ಪುಷ್ಪ 2ಗಾಗಿ ಬಂಗಾರದ ಬೇಡಿಕೆ ಬಂದಿದೆ. 200 ಕೋಟಿ ಮೊತ್ತಕ್ಕೆ ಹಿಂದಿ ರೈಟ್ಸ್ ಮಾರಾಟವಾಗಿದ್ದು, 75 ಕೋಟಿಗೆ ಆಡಿಯೋ ರೈಟ್ಸ್ ಸೇಲ್ ಆಗಿರುವ ಬಗ್ಗೆ ಸಿನಿ ಜಜಾರ್ ನಲ್ಲಿ ಹೊಸ ಬಜ್ ಓಡಾಡ್ತಿದೆ. ಮೈತ್ರಿ ಮೂವೀ ಮೇಕರ್ಸ್ ನಿರ್ಮಾಣದಲ್ಲಿ ಅದ್ಧೂರಿಯಾಗಿ ತಯಾರಾಗ್ತಿರುವ ಪುಷ್ಪ-2 ಸಿನಿಮಾಗೆ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ.

ಪುಷ್ಪರಾಜ್‌ಗೆ ನಾಯಕಿ ರಶ್ಮಿಕಾ ಮಂದಣ್ಣ (Rashmika Mandanna) ಜೀವತುಂಬಿದ್ದಾರೆ. ಡಾಲಿ ಧನಂಜಯ್ (Daali Dhananjay), ಅನಸೂಯ ಭಾರದ್ವಾಜ್, ಫಹಾದ್ ಫಾಸಿಲ್ ಸೇರಿದಂತೆ ಹಲವು ನಟಿಸಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್